1
ಯೋಹಾನ 15:5
ಕನ್ನಡ ಸತ್ಯವೇದವು J.V. (BSI)
ನಾನು ದ್ರಾಕ್ಷೇ ಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅವನೇ ಬಹಳ ಫಲಕೊಡುವನು; ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ.
Porovnat
Zkoumat ಯೋಹಾನ 15:5
2
ಯೋಹಾನ 15:4
ನೀವು ನನ್ನಲ್ಲಿ ನೆಲೆಗೊಂಡಿರ್ರಿ, ನಾನೂ ನಿಮ್ಮಲ್ಲಿ ನೆಲೆಗೊಂಡಿರುವೆನು. ಕೊಂಬೆಯು ಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲಕೊಡಲಾರದೋ ಹಾಗೆಯೇ ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.
Zkoumat ಯೋಹಾನ 15:4
3
ಯೋಹಾನ 15:7
ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ಏನು ಬೇಕಾದರೂ ಬೇಡಿಕೊಳ್ಳಿರಿ, ಅದು ನಿಮಗೆ ದೊರೆಯುವದು.
Zkoumat ಯೋಹಾನ 15:7
4
ಯೋಹಾನ 15:16
ನೀವು ನನ್ನನ್ನು ಆರಿಸಿ ತೆಗೆದುಕೊಂಡಿಲ್ಲ; ನಾನು ನಿಮ್ಮನ್ನು ಆರಿಸಿ ತೆಗೆದುಕೊಂಡೆನು. ನೀವು ಹೊರಟುಹೋಗಿ ಫಲಕೊಡುವವರಾಗಬೇಕೆಂತಲೂ ನೀವು ಕೊಡುವ ಫಲವು ನಿಲ್ಲುವಂಥದಾಗಬೇಕೆಂತಲೂ ನಿಮ್ಮನ್ನು ನೇವಿುಸಿದ್ದೇನೆ. ಹೀಗಿರಲಾಗಿ ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ ಅದನ್ನು ಆತನು ನಿಮಗೆ ಕೊಡುವನು.
Zkoumat ಯೋಹಾನ 15:16
5
ಯೋಹಾನ 15:13
ಪ್ರಾಣವನ್ನೇ ಸ್ನೇಹಿತರಿಗೋಸ್ಕರ ಕೊಡುವ ಪ್ರೀತಿಗಿಂತ ಹೆಚ್ಚಿನ ಪ್ರೀತಿಯು ಯಾವದೂ ಇಲ್ಲ.
Zkoumat ಯೋಹಾನ 15:13
6
ಯೋಹಾನ 15:2
ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲಕೊಡುವ ಹಾಗೆ ಅದನ್ನು ಶುದ್ಧಿಮಾಡುತ್ತಾನೆ.
Zkoumat ಯೋಹಾನ 15:2
7
ಯೋಹಾನ 15:12
ನಾನು ನಿಮ್ಮನ್ನು ಪ್ರೀತಿಸಿದ ಮೇರೆಗೆ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನಾನು ಕೊಡುವ ಆಜ್ಞೆಯಾಗಿದೆ.
Zkoumat ಯೋಹಾನ 15:12
8
ಯೋಹಾನ 15:8
ನೀವು ಬಹಳ ಫಲಕೊಡುವದರಿಂದಲೇ ನನ್ನ ತಂದೆಗೆ ಮಹಿಮೆ ಉಂಟಾಗುವದು; ಮತ್ತು ನನ್ನ ಶಿಷ್ಯರಾಗುವಿರಿ.
Zkoumat ಯೋಹಾನ 15:8
9
ಯೋಹಾನ 15:1
ನಾನೇ ನಿಜವಾದ ದ್ರಾಕ್ಷೇಬಳ್ಳಿ. ನನ್ನ ತಂದೆ ತೋಟಗಾರನು.
Zkoumat ಯೋಹಾನ 15:1
10
ಯೋಹಾನ 15:6
ಯಾವನು ನನ್ನಲ್ಲಿ ನೆಲೆಗೊಂಡಿರುವದಿಲ್ಲವೋ ಅವನು ಆ ಕೊಂಬೆಯಂತೆ ಹೊರಕ್ಕೆ ಬಿಸಾಡಲ್ಪಟ್ಟು ಒಣಗಿಹೋಗುವನು; ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುತ್ತಾರೆ, ಅವು ಸುಟ್ಟುಹೋಗುತ್ತವೆ.
Zkoumat ಯೋಹಾನ 15:6
11
ಯೋಹಾನ 15:11
ನನ್ನಲ್ಲಿರುವ ಆನಂದವು ನಿಮ್ಮಲ್ಲಿಯೂ ಇರಬೇಕೆಂತಲೂ ನಿಮ್ಮ ಆನಂದವು ಪರಿಪೂರ್ಣವಾಗಬೇಕೆಂತಲೂ ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ.
Zkoumat ಯೋಹಾನ 15:11
12
ಯೋಹಾನ 15:10
ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ನಡೆದು ಆತನ ಪ್ರೀತಿಯಲ್ಲಿ ನೆಲೆಗೊಂಡಿರುವ ಮೇರೆಗೆ ನೀವು ನನ್ನ ಆಜ್ಞೆಗಳನ್ನು ಕೈಕೊಂಡು ನಡೆದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.
Zkoumat ಯೋಹಾನ 15:10
13
ಯೋಹಾನ 15:17
ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂತಲೇ ಇವುಗಳನ್ನು ನಿಮಗೆ ಆಜ್ಞಾಪಿಸುತ್ತೇನೆ.
Zkoumat ಯೋಹಾನ 15:17
14
ಯೋಹಾನ 15:19
ನೀವು ಲೋಕದ ಕಡೆಯವರಾಗಿರುತ್ತಿದ್ದರೆ ಲೋಕವು ನಿಮ್ಮ ಮೇಲೆ ತನ್ನವರೆಂದು ಮಮತೆ ಇಡುತ್ತಿತ್ತು; ಆದರೆ ನೀವು ಲೋಕದ ಕಡೆಯವರಲ್ಲದೆ ಇರುವದರಿಂದಲೂ ನಾನು ನಿಮ್ಮನ್ನು ಲೋಕದೊಳಗಿಂದ ಆರಿಸಿ ತೆಗೆದುಕೊಂಡಿರುವದರಿಂದಲೂ ಲೋಕವು ನಿಮ್ಮ ಮೇಲೆ ದ್ವೇಷ ಮಾಡುತ್ತದೆ.
Zkoumat ಯೋಹಾನ 15:19
Domů
Bible
Plány
Videa