ಯೋಹಾನ 11
11
ಯೇಸು ಸತ್ತುಹೋಗಿದ್ದ ಲಾಜರನೆಂಬವನನ್ನು ಬದುಕಿಸಿದ್ದು
1ಬೇಥಾನ್ಯದ ಲಾಜರನೆಂಬವನೊಬ್ಬನು ಅಸ್ವಸ್ಥನಾಗಿದ್ದನು. ಅದು ಮಾರ್ಥಳು ಮರಿಯಳು ಎಂಬ ಅಕ್ಕತಂಗಿಯರು ಇದ್ದ ಊರು. 2ಈ ಮರಿಯಳು ಯೇಸುಸ್ವಾವಿುಗೆ ತೈಲವನ್ನು ಹಚ್ಚಿ ಆತನ ಪಾದಗಳನ್ನು ತನ್ನ ತಲೇಕೂದಲಿನಿಂದ ಒರಸಿದವಳು. ಈಕೆಯ ತಮ್ಮನಾದ ಲಾಜರನೇ ಅಸ್ವಸ್ಥನಾಗಿದ್ದನು. 3ಹೀಗಿರಲಾಗಿ ಅವನ ಅಕ್ಕಂದಿರು - ಸ್ವಾಮೀ, ನಿನ್ನ ಪ್ರಿಯ ವಿುತ್ರನು ಅಸ್ವಸ್ಥನಾಗಿದ್ದಾನೆ ಎಂಬದಾಗಿ ಯೇಸುವಿನ ಬಳಿಗೆ ಹೇಳಿಕಳುಹಿಸಿದರು. 4ಯೇಸು ಅದನ್ನು ಕೇಳಿ - ಈ ರೋಗವು ಮರಣಕ್ಕಾಗಿ ಬಂದದ್ದಲ್ಲ; ಇದರಿಂದ ದೇವಕುಮಾರನಿಗೆ ಮಹಿಮೆ ಉಂಟಾಗುವಂತೆ ದೇವರ ಮಹಿಮೆಗೋಸ್ಕರ ಬಂದದ್ದು ಅಂದನು. 5ಮಾರ್ಥಳಲ್ಲಿಯೂ ಆಕೆಯ ತಂಗಿಯಲ್ಲಿಯೂ ಲಾಜರನಲ್ಲಿಯೂ ಯೇಸುವಿಗೆ ಪ್ರೀತಿ ಇತ್ತು. 6ಆದರೂ ಲಾಜರನು ಅಸ್ವಸ್ಥನಾಗಿದ್ದಾನೆಂದು ಆತನು ಕೇಳಿದ ಮೇಲೆ ಎರಡು ದಿನ ತಾನಿದ್ದ ಸ್ಥಳದಲ್ಲೇ ನಿಂತನು. 7ಬಳಿಕ ಶಿಷ್ಯರಿಗೆ - ತಿರಿಗಿ ಯೂದಾಯಕ್ಕೆ ಹೋಗೋಣ ಎಂದು ಹೇಳಿದನು. 8ಶಿಷ್ಯರು - ಗುರುವೇ, ಯೆಹೂದ್ಯರು ಆಗಲೇ ನಿನ್ನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು; ತಿರಿಗಿ ಅಲ್ಲಿಗೇ ಹೋಗುತ್ತೀಯಾ? ಅನ್ನಲು 9ಯೇಸು - ಹಗಲಿಗೆ ಹನ್ನೆರಡು ತಾಸು ಉಂಟಲ್ಲವೇ. ಒಬ್ಬನು ಹಗಲಲ್ಲಿ ತಿರುಗಾಡಿದರೆ ಈ ಲೋಕದ ಬೆಳಕು ಕಾಣಿಸುವದರಿಂದ ಆತನು ಎಡವುವದಿಲ್ಲ; 10ರಾತ್ರಿಯಲ್ಲಿ ತಿರುಗಾಡಿದರೆ ಅವನಿಗೆ ಬೆಳಕಿಲ್ಲದ್ದರಿಂದ ಎಡವುವನು ಎಂದು ಉತ್ತರಕೊಟ್ಟನು. 11ಈ ಮಾತುಗಳನ್ನು ಹೇಳಿದ ಮೇಲೆ ಅವರಿಗೆ - ನಮ್ಮ ವಿುತ್ರನಾದ ಲಾಜರನು ನಿದ್ರೆಮಾಡುತ್ತಾನೆ; ನಾನು ಅವನನ್ನು ನಿದ್ರೆಯಿಂದ ಎಬ್ಬಿಸುವದಕ್ಕಾಗಿ ಹೋಗುತ್ತೇನೆ ಎಂದು ಹೇಳಿದನು. 12ಅದಕ್ಕೆ ಶಿಷ್ಯರು - ಸ್ವಾಮೀ, ಅವನು ನಿದ್ರೆಮಾಡುತ್ತಿದ್ದರೆ ಸ್ವಸ್ಥನಾಗುವನು ಅಂದರು. 13ಯೇಸು ಅವನ ಮರಣವನ್ನು ಸೂಚಿಸಿ ಅದನ್ನು ಹೇಳಿದ್ದನು; ಆದರೆ ಅವರು ನಿದ್ರೆಯ ವಿಶ್ರಾಂತಿಯನ್ನು ಕುರಿತು ಹೇಳುತ್ತಾನೆಂದು ನೆನಸಿದರು. 14ಆಗ ಯೇಸು ಸ್ಪಷ್ಟವಾಗಿ ಅವರಿಗೆ - ಲಾಜರನು ಸತ್ತುಹೋದನು; 15ಮತ್ತು ನಾನು ಅಲ್ಲಿ ಇಲ್ಲದೆ ಇದ್ದದ್ದಕ್ಕೆ ನಿಮ್ಮ ನಿವಿುತ್ತವಾಗಿ ಸಂತೋಷಪಡುತ್ತೇನೆ, ಯಾಕಂದರೆ ಅದರಿಂದ ನೀವು ನಂಬುವದಕ್ಕೆ ಮಾರ್ಗವಾಯಿತು; ಆದರೆ ಅವನ ಬಳಿಗೆ ಹೋಗೋಣ ಎಂದು ಹೇಳಿದನು. 16ಆಗ ದಿದುಮನೆಂಬ ತೋಮನು ಜೊತೇ ಶಿಷ್ಯರಿಗೆ - ನಾವು ಸಹ ಹೋಗಿ ಆತನೊಡನೆ ಸಾಯೋಣ ಎಂದು ಹೇಳಿದನು.
17ಯೇಸು ಬಂದಾಗ ಲಾಜರನನ್ನು ಸಮಾಧಿಯಲ್ಲಿಟ್ಟು ನಾಲ್ಕು ದಿವಸವಾಯಿತೆಂದು ಆತನಿಗೆ ತಿಳಿದುಬಂತು. 18ಬೇಥಾನ್ಯವು ಯೆರೂಸಲೇವಿುಗೆ ಸಮೀಪವಾಗಿತ್ತು; ಇದಕ್ಕೂ ಅದಕ್ಕೂ ಹೆಚ್ಚುಕಡಿಮೆ ಒಂದು ಹರದಾರಿ#11.18 ಮೂಲ: ಹದಿನೈದು ಸ್ತಾದ್ಯಗಳು. ಅಂತರ. 19ಆದದರಿಂದ ಯೆಹೂದ್ಯರಲ್ಲಿ ಅನೇಕರು ಮಾರ್ಥಳ ಮತ್ತು ಮರಿಯಳ ಬಳಿಗೆ ಅವರನ್ನು ತಮ್ಮನ ವಿಷಯದಲ್ಲಿ ಸಂತೈಸಬೇಕೆಂದು ಬಂದಿದ್ದರು. 20ಹೀಗಿರುವಲ್ಲಿ ಮಾರ್ಥಳು ಯೇಸು ಬರುತ್ತಾನೆಂದು ಕೇಳಿ ಆತನನ್ನು ಎದುರುಗೊಳ್ಳುವದಕ್ಕೆ ಹೋದಳು; ಆದರೆ ಮರಿಯಳು ಮನೆಯಲ್ಲೇ ಕೂತುಕೊಂಡಿದ್ದಳು. 21ಮತ್ತು ಮಾರ್ಥಳು ಯೇಸುವಿಗೆ - ಸ್ವಾಮೀ, ನೀನು ಇಲ್ಲಿ ಇರುತ್ತಿದ್ದರೆ ನನ್ನ ತಮ್ಮನು ಸಾಯುತ್ತಿರಲಿಲ್ಲ; 22ಈಗಲಾದರೂ ದೇವರನ್ನು ಏನು ಬೇಡಿಕೊಳ್ಳುತ್ತೀಯೋ ಅದನ್ನು ದೇವರು ನಿನಗೆ ಅನುಗ್ರಹಿಸುವನೆಂದು ಬಲ್ಲೆನು ಎಂದು ಹೇಳಿದಳು. 23ಯೇಸು ಆಕೆಗೆ - ನಿನ್ನ ತಮ್ಮನು ಎದ್ದುಬರುವನೆಂದು ಹೇಳಿದನು. 24ಮಾರ್ಥಳು - ಸತ್ತವರಿಗೆ ಕಡೇ ದಿನದಲ್ಲಿ ಪುನರುತ್ಥಾನವಾಗುವಾಗ ಅವನೂ ಎದ್ದು ಬರುವನೆಂದು ನಾನು ಬಲ್ಲೆನು ಅಂದಳು. 25ಯೇಸು ಆಕೆಗೆ - ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನನ್ನು ನಂಬುವವನು ಸತ್ತರೂ ಬದುಕುವನು; 26ಮತ್ತು ಬದುಕುತ್ತಾ ನನ್ನನ್ನು ನಂಬುವ ಪ್ರತಿಯೊಬ್ಬನು ಎಂದಿಗೂ ಸಾಯುವದಿಲ್ಲ; ಇದನ್ನು ನಂಬುತ್ತೀಯಾ? ಎಂದು ಹೇಳಿದನು. 27ಆಕೆ - ಹೌದು, ಸ್ವಾಮೀ, ಲೋಕಕ್ಕೆ ಬರಬೇಕಾದ ದೇವಕುಮಾರನಾದ ಕ್ರಿಸ್ತನು ನೀನೇ ಎಂದು ನಂಬಿದ್ದೇನೆ ಅಂದಳು.
28ಇದನ್ನು ಹೇಳಿ ಆಕೆ ಹೋಗಿ ತನ್ನ ತಂಗಿಯಾದ ಮರಿಯಳನ್ನು ಗುಪ್ತವಾಗಿ ಕರೆದು - ಗುರುವು ಬಂದಿದ್ದಾನೆ, ನಿನ್ನನ್ನು ಕರೆಯುತ್ತಾನೆ ಅಂದಳು. 29ಮರಿಯಳು ಇದನ್ನು ಕೇಳುತ್ತಲೇ ತಟ್ಟನೆ ಎದ್ದು ಆತನ ಬಳಿಗೆ ಹೋದಳು. 30ಯೇಸು ಇನ್ನೂ ಊರೊಳಗೆ ಬಾರದೆ ಮಾರ್ಥಳು ಆತನಿಗೆದುರಾಗಿ ಬಂದ ಸ್ಥಳದಲ್ಲೇ ಇದ್ದನು. 31ಮರಿಯಳ ಕೂಡ ಮನೆಯಲ್ಲಿ ಇದ್ದುಕೊಂಡು ಆಕೆಯನ್ನು ಸಂತೈಸುತ್ತಿದ್ದ ಯೆಹೂದ್ಯರು - ಆಕೆ ತಟ್ಟನೆ ಎದ್ದು ಹೊರಗೆ ಹೋಗುವದನ್ನು ಕಂಡು ಈಕೆ ಅಳುವದಕ್ಕಾಗಿ ಸಮಾಧಿಗೆ ಹೋಗುತ್ತಾಳೆಂದು ನೆನಸಿ ಆಕೆಯ ಹಿಂದೆ ಹೋದರು. 32ಮರಿಯಳು ಯೇಸು ಇದ್ದಲ್ಲಿಗೆ ಬಂದು ಆತನನ್ನು ಕಂಡು ಆತನ ಪಾದಕ್ಕೆ ಬಿದ್ದು - ಸ್ವಾಮೀ, ನೀನು ಇಲ್ಲಿ ಇರುತ್ತಿದ್ದರೆ ನನ್ನ ತಮ್ಮನು ಸಾಯುತ್ತಿರಲಿಲ್ಲ ಅಂದಳು. 33ಆಕೆ ಗೋಳಾಡುವದನ್ನೂ ಆಕೆಯ ಸಂಗಡ ಬಂದ ಯೆಹೂದ್ಯರು ಗೋಳಾಡುವದನ್ನೂ ಯೇಸು ಕಂಡಾಗ ಆತ್ಮದಲ್ಲಿ ನೊಂದುಕೊಂಡು ತತ್ತರಿಸಿ - 34ಅವನನ್ನು ಎಲ್ಲಿ ಇಟ್ಟಿದ್ದೀರಿ ಎಂದು ಕೇಳಿದನು. ಅವರು - ಸ್ವಾಮೀ, ಬಂದು ನೋಡು ಅಂದರು. 35ಯೇಸು ಕಣ್ಣೀರು ಬಿಟ್ಟನು. 36ಯೆಹೂದ್ಯರು ನೋಡಿ - ಆಹಾ, ಈತನು ಅವನ ಮೇಲೆ ಎಷ್ಟೋ ಮಮತೆ ಇಟ್ಟಿದ್ದನು ಅಂದುಕೊಂಡರು. 37ಅವರಲ್ಲಿ ಕೆಲವರು - ಈತನು ಆ ಕುರುಡನಿಗೆ ಕಣ್ಣು ಕೊಟ್ಟನಲ್ಲಾ; ಈ ಮನುಷ್ಯನನ್ನು ಸಾಯದ ಹಾಗೆ ಮಾಡಲಾರದೆ ಇದ್ದನೇ? ಅಂದರು. 38ಯೇಸು ತನ್ನಲ್ಲಿ ತಿರಿಗಿ ನೊಂದುಕೊಳ್ಳುತ್ತಾ ಸಮಾಧಿಯ ಬಳಿಗೆ ಬಂದನು. ಅದು ಗವಿಯಾಗಿತ್ತು, ಅದರ ಬಾಯಿಗೆ ಒಂದು ಕಲ್ಲು ಆನಿಸಿತ್ತು. 39ಯೇಸು - ಆ ಕಲ್ಲನ್ನು ತೆಗೆದುಹಾಕಿರಿ ಅನ್ನಲು ತೀರಿಹೋದವನ ಅಕ್ಕನಾದ ಮಾರ್ಥಳು - ಸ್ವಾಮೀ, ಅವನು ಸತ್ತು ನಾಲ್ಕು ದಿವಸವಾಯಿತು; ಈಗ ನಾತ ಹುಟ್ಟಿದೆ ಅಂದಳು. 40ಯೇಸು ಆಕೆಗೆ - ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವಿ ಎಂದು ನಾನು ನಿನಗೆ ಹೇಳಲಿಲ್ಲವೇ ಎಂದು ಉತ್ತರಕೊಟ್ಟನು. 41ಆಗ ಕಲ್ಲನ್ನು ತೆಗೆದುಹಾಕಿದರು. ಮತ್ತು ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ - ತಂದೆಯೇ, ನೀನು ನನ್ನ ಪ್ರಾರ್ಥನೆಯನ್ನು ಕೇಳಿದ್ದಕ್ಕೆ ನಿನ್ನನ್ನು ಕೊಂಡಾಡುತ್ತೇನೆ; 42ನೀನು ಯಾವಾಗಲೂ ನನ್ನ ಪ್ರಾರ್ಥನೆಯನ್ನು ಕೇಳುವವನಾಗಿದ್ದೀ ಎಂದು ನನಗೆ ಗೊತ್ತೇ ಇದೆ; ಆದರೂ ನೀನೇ ನನ್ನನ್ನು ಕಳುಹಿಸಿಕೊಟ್ಟಿ ಎಂದು ಸುತ್ತಲು ನಿಂತಿರುವ ಜನರು ನಂಬುವಂತೆ ಅವರಿಗೋಸ್ಕರ ಈ ಮಾತುಗಳನ್ನಾಡಿದೆನೆಂದು ಹೇಳಿದನು. 43ಅದನ್ನು ಹೇಳಿದ ಮೇಲೆ ದೊಡ್ಡ ಶಬ್ದದಿಂದ - ಲಾಜರನೇ, ಹೊರಗೆ ಬಾ ಎಂದು ಕೂಗಿದನು. 44ಸತ್ತಿದ್ದವನು ಹೊರಗೆ ಬಂದನು; ಅವನ ಕೈಕಾಲುಗಳು ಬಟ್ಟೆಗಳಿಂದ ಕಟ್ಟಿದ್ದವು, ಅವನ ಮುಖವು ಕೈಪಾವುಡದಿಂದ ಸುತ್ತಿತ್ತು. ಯೇಸು ಅವರಿಗೆ - ಅವನನ್ನು ಬಿಚ್ಚಿರಿ, ಹೋಗಲಿ ಎಂದು ಹೇಳಿದನು.
ಯೆಹೂದ್ಯರ ಹಿರೀಸಭೆಯವರು ಯೇಸುವನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡದ್ದು
45ಮರಿಯಳ ಬಳಿಗೆ ಬಂದ ಯೆಹೂದ್ಯರು ಆತನು ಮಾಡಿದ ಕಾರ್ಯವನ್ನು ನೋಡಿದಾಗ ಅವರಲ್ಲಿ ಅನೇಕರು ಆತನನ್ನು ನಂಬಿದರು; 46ಆದರೆ ಕೆಲವರು ಫರಿಸಾಯರ ಬಳಿಗೆ ಹೋಗಿ ಯೇಸು ಮಾಡಿದ್ದನ್ನು ಅವರಿಗೆ ತಿಳಿಸಿದರು.
47ಆಗ ಮಹಾಯಾಜಕರೂ ಫರಿಸಾಯರೂ ಹಿರೀಸಭೆಯನ್ನು ಕೂಡಿಸಿ - ನಾವು ಮಾಡುವದು ಇದೇನು? ಈ ಮನುಷ್ಯನು ಬಹು ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ; 48ನಾವು ಅವನನ್ನು ಹೀಗೆಯೇ ಬಿಟ್ಟರೆ ಎಲ್ಲರೂ ಅವನನ್ನು ನಂಬಾರು; ಮತ್ತು ರೋಮ್ ರಾಜ್ಯದವರು ಬಂದು ನಮ್ಮ ಸ್ಥಾನವನ್ನೂ ಜನವನ್ನೂ ಸೆಳಕೊಂಡಾರು ಅಂದರು. 49ಆದರೆ ಅವರಲ್ಲಿ ಕಾಯಫನೆಂಬವನೊಬ್ಬನು ಆ ವರುಷಕ್ಕೆ ಮಹಾಯಾಜಕನಾಗಿದ್ದು ಅವರಿಗೆ - ನಿಮಗೇನೂ ತಿಳಿಯುವದಿಲ್ಲ; 50ಜನವೆಲ್ಲಾ ನಾಶವಾಗುವದಕ್ಕಿಂತ ಒಬ್ಬ ಮನುಷ್ಯನು ಜನಕ್ಕೋಸ್ಕರ ಸಾಯುವದು ನಿಮಗೆ ಹಿತವೆಂದು ನೀವು ಆಲೋಚಿಸುವದೂ ಇಲ್ಲ ಎಂಬದಾಗಿ ಹೇಳಿದನು. 51ಇದನ್ನು ಅವನು ತನ್ನಷ್ಟಕ್ಕೆ ತಾನೇ ಹೇಳಲಿಲ್ಲ; ಆದರೆ ತಾನು ಆ ವರುಷದ ಮಹಾಯಾಜಕನಾಗಿದ್ದದರಿಂದ ದೇವಪ್ರೇರಣೆಯಿಂದ ಮಾತಾಡಿ ಯೇಸು ಆ ಜನಕ್ಕೋಸ್ಕರ ಸಾಯುವದಕ್ಕಿದ್ದನೆಂದು ಹೇಳಿದನು. 52ಯೇಸು ಆ ಜನಕ್ಕೋಸ್ಕರ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಒಟ್ಟುಗೂಡಿಸುವದಕ್ಕೆ ಸಹ ಸಾಯುವದಕ್ಕಿದ್ದನು. 53ಆ ದಿನದಿಂದ ಆತನನ್ನು ಕೊಲ್ಲುವದಕ್ಕೆ ಆಲೋಚಿಸುತ್ತಿದ್ದರು.
54ಹೀಗಿರಲಾಗಿ ಯೇಸು ಇನ್ನೂ ಯೆಹೂದ್ಯರೊಳಗೆ ಬಹಿರಂಗವಾಗಿ ತಿರುಗಾಡದೆ ಅಲ್ಲಿಂದ ಅಡವಿಯ ಹತ್ತಿರದ ಪ್ರದೇಶಕ್ಕೆ ಹೋಗಿ ಎಫ್ರಾಯಿಮ್ ಎಂಬ ಊರಲ್ಲಿ ಶಿಷ್ಯರ ಸಂಗಡ ಇದ್ದನು.
ಯೇಸು ಪಸ್ಕಹಬ್ಬಕ್ಕೆ ಬಂದಾಗ ಮರಿಯಳು ಆತನ ಪಾದಗಳ ಮೇಲೆ ಪರಿಮಳತೈಲವನ್ನು ಸುರಿಸಿದ್ದು
55ಆಗ ಯೆಹೂದ್ಯರ ಪಸ್ಕಹಬ್ಬ ಹತ್ತಿರವಾಗಿರಲಾಗಿ ಬಹು ಜನರು ತಮ್ಮನ್ನು ಶುದ್ಧಿಮಾಡಿಕೊಳ್ಳುವದಕ್ಕಾಗಿ ಹಬ್ಬಕ್ಕಿಂತ ಮುಂಚೆ ಹಳ್ಳಿಗಳಿಂದ ಯೆರೂಸಲೇವಿುಗೆ ಬಂದರು. 56ಅವರು ಯೇಸುವನ್ನು ಹುಡುಕುತ್ತಾ ದೇವಾಲಯದಲ್ಲಿ ನಿಂತುಕೊಂಡು - ಅವನು ಹಬ್ಬಕ್ಕೆ ಬಾರದೆ ಇದ್ದಾನೋ? ನಿಮಗೆ ಹೇಗೆ ಕಾಣುತ್ತದೆ ಎಂದು ತಮ್ಮಲ್ಲಿ ಮಾತಾಡಿಕೊಳ್ಳುತ್ತಾ ಇದ್ದರು. 57ಆದರೆ ಮಹಾಯಾಜಕರೂ ಫರಿಸಾಯರೂ ಆತನನ್ನು ಹಿಡಿಯಬೇಕೆಂಬದಾಗಿ ಯೋಚಿಸಿ - ಅವನಿರುವ ಸ್ಥಳವು ಯಾರಿಗಾದರೂ ತಿಳಿದರೆ ಅದನ್ನು ತಮಗೆ ತಿಳಿಸಬೇಕೆಂದು ಅಪ್ಪಣೆ ಕೊಟ್ಟಿದ್ದರು.
Právě zvoleno:
ಯೋಹಾನ 11: KANJV-BSI
Zvýraznění
Sdílet
Kopírovat
Chceš mít své zvýrazněné verše uložené na všech zařízeních? Zaregistruj se nebo se přihlas
Kannada J.V. Bible © The Bible Society of India, 2016.
Used by permission. All rights reserved worldwide.

: