ಯೋಹಾನ 20
20
ಯೇಸು ಜೀವಿಸಿಬಂದು ತನ್ನ ಶಿಷ್ಯರಿಗೆ ಕಾಣಿಸಿಕೊಂಡದ್ದು
(ಮತ್ತಾ. 28.1-10; ಮಾರ್ಕ. 16.1-11; ಲೂಕ. 24.1-12)
1ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಮುಂಜಾನೆ ಇನ್ನೂ ಕತ್ತಲೆ ಇರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯ ಕಲ್ಲು ಅಲ್ಲಿಂದ ತೆಗೆದಿರುವದನ್ನು ಕಂಡಳು. 2ಆಕೆ ಸೀಮೋನ ಪೇತ್ರನ ಬಳಿಗೂ ಯೇಸುವಿಗೆ ಪ್ರಿಯನಾಗಿದ್ದ ಆ ಮತ್ತೊಬ್ಬ ಶಿಷ್ಯನ ಬಳಿಗೂ ಓಡಿ ಬಂದು ಅವರಿಗೆ - ಸ್ವಾವಿುಯನ್ನು ಸಮಾಧಿಯಿಂದ ತೆಗೆದುಕೊಂಡು ಹೋಗಿ ಆತನನ್ನು ಎಲ್ಲಿಟ್ಟಿದ್ದಾರೋ ನಮಗೆ ಗೊತ್ತಿಲ್ಲವೆಂದು ಹೇಳಿದಳು. 3ಆಗ ಪೇತ್ರನೂ ಆ ಮತ್ತೊಬ್ಬ ಶಿಷ್ಯನೂ ಹೊರಟು ಸಮಾಧಿಯ ಕಡೆಗೆ ಹೋದರು. ಅವರಿಬ್ಬರೂ ಜೊತೆಯಾಗಿ ಓಡಿದರು; 4ಆದರೆ ಆ ಮತ್ತೊಬ್ಬ ಶಿಷ್ಯನು ಪೇತ್ರನಿಗಿಂತ ಮುಂದೆ ಓಡಿ ಮೊದಲೇ ಸಮಾಧಿಗೆ ಮುಟ್ಟಿ 5ಬೊಗ್ಗಿ ನೋಡಿ ಆ ನಾರುಬಟ್ಟೆಗಳು ಬಿದ್ದಿರುವದನ್ನು ಕಂಡನು; ಆದರೆ ಒಳಕ್ಕೆ ಹೋಗಲಿಲ್ಲ. 6ಸೀಮೋನ ಪೇತ್ರನು ಅವನ ಹಿಂದೆ ಬಂದು ಸಮಾಧಿಯೊಳಕ್ಕೆ ಹೋಗಿ ಆ ನಾರುಬಟ್ಟೆಗಳು ಬಿದ್ದಿರುವದನ್ನೂ ಆತನ ತಲೆಯ ಮೇಲಿದ್ದ ಕೈಪಾವುಡವು 7ಆ ನಾರುಬಟ್ಟೆಗಳ ಕೂಡ ಇರದೆ ಸುತ್ತಿ ಒಂದು ಕಡೆಯಲ್ಲಿ ಬೇರೇ ಇರುವದನ್ನೂ ನೋಡಿದನು. 8ಆಗ ಸಮಾಧಿಯ ಬಳಿಗೆ ಮೊದಲು ಬಂದಿದ್ದ ಆ ಮತ್ತೊಬ್ಬ ಶಿಷ್ಯನು ಸಹ ಒಳಕ್ಕೆ ಹೋಗಿ ನೋಡಿ ನಂಬಿದನು. 9ಆತನು ಸತ್ತ ಮೇಲೆ ಜೀವದಿಂದೆದ್ದು ಬರಬೇಕೆಂಬದಾಗಿ ಶಾಸ್ತ್ರದಲ್ಲಿ ಬರೆದಿರುವ ಮಾತು ಅವರಿಗೆ ಇನ್ನೂ ತಿಳಿದಿರಲಿಲ್ಲ. 10ತರುವಾಯ ಆ ಶಿಷ್ಯರು ತಿರಿಗಿ ತಮ್ಮವರ ಬಳಿಗೆ ಹೋದರು.
11ಆದರೆ ಮರಿಯಳು ಹೊರಗೆ ಸಮಾಧಿಯ ಬಳಿಯಲ್ಲಿ ಅಳುತ್ತಾ ನಿಂತಿದ್ದಳು. ಹೀಗೆ ಆಕೆ ಅಳುತ್ತಿರುವಾಗ ಸಮಾಧಿಯೊಳಗೆ ಬೊಗ್ಗಿ ನೋಡಲು 12ಯೇಸುವಿನ ದೇಹವು ಇಟ್ಟಿದ್ದ ಸ್ಥಳದಲ್ಲಿ ಬೆಳ್ಳಗಿರುವ ವಸ್ತ್ರಗಳನ್ನು ಹೊದ್ದುಕೊಂಡ ಇಬ್ಬರು ದೇವದೂತರನ್ನು ಕಂಡಳು; ಅವರಲ್ಲಿ ಒಬ್ಬನು ತಲೆಯಿದ್ದ ಕಡೆಯಲ್ಲಿ ಒಬ್ಬನು ಕಾಲಿದ್ದ ಕಡೆಯಲ್ಲಿ ಕೂತಿದ್ದರು. 13ಅವರು ಆಕೆಯನ್ನು - ಅಮ್ಮಾ, ನೀನು ಯಾಕೆ ಅಳುತ್ತೀ ಎಂದು ಕೇಳಲು ಆಕೆ - ನನ್ನ ಸ್ವಾವಿುಯನ್ನು ತೆಗೆದುಕೊಂಡು ಹೋಗಿದ್ದಾರೆ; ಆತನನ್ನು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ ಅಂದಳು. 14ಇದನ್ನು ಹೇಳಿ ತಿರುಗಿಕೊಂಡು ಯೇಸು ನಿಂತಿರುವದನ್ನು ಕಂಡಳು, ಆದರೆ ಆತನು ಯೇಸು ಅಂತ ಆಕೆಗೆ ತಿಳಿಯಲಿಲ್ಲ. 15ಯೇಸು ಆಕೆಯನ್ನು - ಅಮ್ಮಾ, ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ? ಎಂದು ಕೇಳಲು ಆಕೆ ಆತನನ್ನು ತೋಟಗಾರನೆಂದು ನೆನಸಿ ಆತನಿಗೆ - ಅಯ್ಯಾ, ನೀನು ಆತನನ್ನು ಎತ್ತಿಕೊಂಡು ಹೋಗಿದ್ದರೆ ಎಲ್ಲಿ ಇಟ್ಟಿದ್ದೀ ನನಗೆ ಹೇಳು; ನಾನು ತೆಗೆದುಕೊಂಡು ಹೋಗುತ್ತೇನೆ ಎಂದು ಹೇಳಿದಳು. 16ಯೇಸು ಆಕೆಗೆ - ಮರಿಯಳೇ, ಎಂದು ಹೇಳಿದನು. ಆಕೆ ತಿರುಗಿಕೊಂಡು ಇಬ್ರಿಯ ಮಾತಿನಲ್ಲಿ - ರಬ್ಬೂನಿ, ಅಂದಳು. (ರಬ್ಬೂನಿ ಅಂದರೆ ಗುರುವೇ ಎಂದು ಅರ್ಥ). 17ಯೇಸು ಆಕೆಗೆ - ನನ್ನನ್ನು ಹಿಡಿಯಬೇಡ; ಯಾಕಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ - ನಾನು ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ಏರಿಹೋಗುತ್ತೇನೆ ಎಂದು ಅವರಿಗೆ ಹೇಳು ಅಂದನು. 18ಮಗ್ದಲದ ಮರಿಯಳು ಹೋಗಿ - ನಾನು ಸ್ವಾವಿುಯವರನ್ನು ನೋಡಿದ್ದೇನೆ; ಆತನು ಇಂಥಿಂಥದನ್ನು ನನಗೆ ಹೇಳಿದನು ಎಂದು ಶಿಷ್ಯರಿಗೆ ತಿಳಿಸಿದಳು.
19ಅದೇ ದಿವಸದ ಅಂದರೆ ವಾರದ ಮೊದಲನೆಯ ದಿವಸದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಲುಗಳನ್ನು ಮುಚ್ಚಿಕೊಂಡಿರಲು ಯೇಸು ಬಂದು ನಡುವೆ ನಿಂತು - ನಿಮಗೆ ಸಮಾಧಾನವಾಗಲಿ#20.19 ಅಥವಾ, ಶುಭವಾಗಲಿ. ಅಂದನು. 20ಇದನ್ನು ಹೇಳಿದ ಮೇಲೆ ಅವರಿಗೆ ತನ್ನ ಕೈಗಳನ್ನೂ ಪಕ್ಕೆಯನ್ನೂ ತೋರಿಸಿದನು. ಶಿಷ್ಯರು ಸ್ವಾವಿುಯನ್ನು ನೋಡಿದ್ದರಿಂದ ಸಂತೋಷಪಟ್ಟರು. 21ಯೇಸು ಅವರಿಗೆ - ನಿಮಗೆ ಸಮಾಧಾನವಾಗಲಿ#20.21 ಅಥವಾ, ಶುಭವಾಗಲಿ. ಎಂದು ತಿರಿಗಿ ಹೇಳಿ - ತಂದೆ ನನ್ನನ್ನು ಕಳುಹಿಸಿಕೊಟ್ಟ ಹಾಗೆಯೇ ನಾನೂ ನಿಮ್ಮನ್ನು ಕಳುಹಿಸಿಕೊಡುತ್ತೇನೆ ಅಂದನು. 22ಇದನ್ನು ಹೇಳಿ ಅವರ ಮೇಲೆ ಊದಿ ಅವರಿಗೆ - ಪವಿತ್ರಾತ್ಮವರವನ್ನು ತಕ್ಕೊಳ್ಳಿರಿ; 23ನೀವು ಯಾರ ಪಾಪಗಳನ್ನು ಕ್ಷವಿುಸಿಬಿಡುತ್ತೀರೋ ಅವರಿಗೆ ಅವುಗಳ ಕ್ಷಮಾಪಣೆಯಾಗುತ್ತದೆ; ಯಾರ ಪಾಪಗಳನ್ನು ಕ್ಷವಿುಸದೆ ಉಳಿಸುತ್ತೀರೋ ಅವರಿಗೆ ಅವುಗಳು ಉಳಿಯುತ್ತವೆ ಅಂದನು.
24ಯೇಸು ಬಂದಾಗ ಹನ್ನೆರಡು ಮಂದಿ ಶಿಷ್ಯರೊಳಗೆ ಒಬ್ಬನಾದ ದಿದುಮನೆನಿಸಿಕೊಳ್ಳುವ ತೋಮನು ಅವರ ಸಂಗಡ ಇರಲಿಲ್ಲ. 25ಆದದರಿಂದ ಉಳಿದ ಶಿಷ್ಯರು - ನಾವು ಸ್ವಾವಿುಯನ್ನು ನೋಡಿದ್ದೇವೆ ಎಂದು ಅವನಿಗೆ ಹೇಳಿದರು. ಅದಕ್ಕೆ ಅವನು - ನಾನು ಆತನ ಕೈಗಳಲ್ಲಿ ಮೊಳೆಗಳಿಂದಾದ ಗಾಯವನ್ನು ನೋಡಿ ಆ ಮೊಳೆಯ ಗಾಯದಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕಿದ ಹೊರತು ನಿಮ್ಮ ಮಾತನ್ನು ನಂಬುವದೇ ಇಲ್ಲ ಅಂದನು.
26ಎಂಟು ದಿವಸಗಳಾದ ಮೇಲೆ ಆತನ ಶಿಷ್ಯರು ತಿರಿಗಿ ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ನಡುವೆ ನಿಂತು - ನಿಮಗೆ ಸಮಾಧಾನವಾಗಲಿ#20.26 ಅಥವಾ, ಶುಭವಾಗಲಿ. ಅಂದನು. 27ಆಮೇಲೆ ತೋಮನಿಗೆ - ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು; ನಿನ್ನ ಕೈಚಾಚಿ ನನ್ನ ಪಕ್ಕೆಯಲ್ಲಿ ಹಾಕು; ನಂಬದವನಾಗಿರಬೇಡ, ನಂಬುವವನಾಗು ಎಂದು ಹೇಳಿದನು. 28ತೋಮನು ಆತನಿಗೆ - ನನ್ನ ಸ್ವಾಮೀ, ನನ್ನ ದೇವರು! ಎಂದು ಹೇಳಿದನು. 29ಯೇಸು ಅವನಿಗೆ - ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ; ನೋಡದೆ ನಂಬಿದವರು ಧನ್ಯರು ಎಂದು ಹೇಳಿದನು.
30ಯೇಸು ಇನ್ನು ಬೇರೆ ಎಷ್ಟೋ ಸೂಚಕಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದನು. ಅವುಗಳು ಈ ಗ್ರಂಥದಲ್ಲಿ ಬರೆದಿರುವದಿಲ್ಲ. 31ಆದರೆ ಯೇಸು ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನ ಮೂಲಕವಾಗಿ ಜೀವವನ್ನು ಪಡಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದದೆ.
Právě zvoleno:
ಯೋಹಾನ 20: KANJV-BSI
Zvýraznění
Sdílet
Kopírovat
![None](/_next/image?url=https%3A%2F%2Fimageproxy.youversionapistaging.com%2F58%2Fhttps%3A%2F%2Fweb-assets.youversion.com%2Fapp-icons%2Fcs.png&w=128&q=75)
Chceš mít své zvýrazněné verše uložené na všech zařízeních? Zaregistruj se nebo se přihlas
Kannada J.V. Bible © The Bible Society of India, 2016.
Used by permission. All rights reserved worldwide.