1
ಆದಿಕಾಂಡ 15:6
ಪರಿಶುದ್ದ ಬೈಬಲ್
ಅಬ್ರಾಮನು ಯೆಹೋವನನ್ನು ನಂಬಿದನು. ಆ ನಂಬಿಕೆಯ ನಿಮಿತ್ತವೇ ಯೆಹೋವನು ಅಬ್ರಾಮನನ್ನು ನೀತಿವಂತನೆಂದು ಪರಿಗಣಿಸಿದನು.
Cymharu
Archwiliwch ಆದಿಕಾಂಡ 15:6
2
ಆದಿಕಾಂಡ 15:1
ಈ ಸಂಗತಿಗಳಾದ ಮೇಲೆ, ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ಸಂದೇಶ ಬಂದಿತು. ದೇವರು ಅವನಿಗೆ, “ಅಬ್ರಾಮನೇ ಭಯಪಡಬೇಡ; ನಾನೇ ನಿನಗೆ ಗುರಾಣಿಯಾಗಿದ್ದೇನೆ. ನಾನು ನಿನಗೆ ದೊಡ್ಡ ಪ್ರತಿಫಲವನ್ನು ಕೊಡುತ್ತೇನೆ” ಎಂದು ಹೇಳಿದನು.
Archwiliwch ಆದಿಕಾಂಡ 15:1
3
ಆದಿಕಾಂಡ 15:5
ನಂತರ ದೇವರು ಅಬ್ರಾಮನನ್ನು ಹೊರಗೆ ಕರೆದುಕೊಂಡು ಬಂದು ಅವನಿಗೆ, “ಆಕಾಶದ ಕಡೆಗೆ ಕಣ್ಣೆತ್ತಿ ನಕ್ಷತ್ರಗಳನ್ನು ನೋಡು. ನೀನು ಲೆಕ್ಕ ಮಾಡಲಾರದಷ್ಟು ನಕ್ಷತ್ರಗಳಿವೆ. ಮುಂದಿನ ಕಾಲದಲ್ಲಿ ನಿನ್ನ ಕುಟುಂಬವು ಅದೇ ರೀತಿಯಲ್ಲಿರುವುದು” ಎಂದು ಹೇಳಿದನು.
Archwiliwch ಆದಿಕಾಂಡ 15:5
4
ಆದಿಕಾಂಡ 15:4
ಆಗ ಯೆಹೋವನು ಅಬ್ರಾಮನಿಗೆ, “ನಿನ್ನ ಆಸ್ತಿಯನ್ನೆಲ್ಲ ಪಡೆದುಕೊಳ್ಳುವವನು ನಿನ್ನ ಸೇವಕನಲ್ಲ. ನೀನೇ ಮಗನನ್ನು ಪಡೆಯುವೆ; ನಿನ್ನ ಮಗನೇ ನಿನ್ನ ಆಸ್ತಿಯನ್ನೆಲ್ಲಾ ಪಡೆಯುವನು” ಎಂದು ಹೇಳಿದನು.
Archwiliwch ಆದಿಕಾಂಡ 15:4
5
ಆದಿಕಾಂಡ 15:13
ಆಗ ಯೆಹೋವನು ಅಬ್ರಾಮನಿಗೆ, “ನಿನಗೆ ಈ ವಿಷಯಗಳು ತಿಳಿದಿರಬೇಕು. ನಿನ್ನ ಸಂತತಿಯವರು ಪರದೇಶಿಯರಾಗಿ ತಮ್ಮದಲ್ಲದ ದೇಶದಲ್ಲಿ ವಾಸಮಾಡುವರು. ಅಲ್ಲಿನ ಜನರು ಅವರನ್ನು ಗುಲಾಮರನ್ನಾಗಿ ಮಾಡಿಕೊಳ್ಳುವರು. ಅಲ್ಲಿ ಅವರು ನಾನೂರು ವರ್ಷಗಳವರೆಗೆ ಬಾಧೆಪಡುವರು.
Archwiliwch ಆದಿಕಾಂಡ 15:13
6
ಆದಿಕಾಂಡ 15:2
ಅದಕ್ಕೆ ಅಬ್ರಾಮನು, “ದೇವರಾದ ಯೆಹೋವನೇ, ನೀನು ನನಗೆ ಏನೇ ಕೊಟ್ಟರೂ ನನಗೆ ಸಂತೋಷವಾಗುವುದಿಲ್ಲ. ಯಾಕೆಂದರೆ, ನನಗೆ ಮಗನೇ ಇಲ್ಲ. ಆದ್ದರಿಂದ ನಾನು ಸತ್ತಮೇಲೆ ನನ್ನ ಆಸ್ತಿಯೆಲ್ಲ ನನ್ನ ಸೇವಕನಾದ ದಮಸ್ಕದ ಎಲೀಯೆಜರನ ಪಾಲಾಗುವುದು” ಎಂದು ಹೇಳಿದನು.
Archwiliwch ಆದಿಕಾಂಡ 15:2
7
ಆದಿಕಾಂಡ 15:18
ಆದ್ದರಿಂದ ಅಂದು ಯೆಹೋವನು ಒಂದು ವಾಗ್ದಾನವನ್ನು ಮಾಡಿ ಅಬ್ರಾಮನೊಡನೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಯೆಹೋವನು ಅವನಿಗೆ, “ನಾನು ನಿನ್ನ ಸಂತತಿಯವರಿಗೆ ಈ ನಾಡನ್ನು ಕೊಡುವೆನು. ನಾನು ಅವರಿಗೆ ಈಜಿಪ್ಟ್ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಇರುವ ನಾಡನ್ನು ಕೊಡುವೆನು.
Archwiliwch ಆದಿಕಾಂಡ 15:18
8
ಆದಿಕಾಂಡ 15:16
ನಾಲ್ಕು ತಲೆಮಾರುಗಳ ನಂತರ ನಿನ್ನ ಜನರು ಈ ನಾಡಿಗೆ ಹಿಂತಿರುಗುವರು. ಆ ಕಾಲದಲ್ಲಿ ನಿನ್ನ ಜನರು ಅಮೋರಿಯರನ್ನು ಸೋಲಿಸುವರು. ಇಲ್ಲಿ ವಾಸಿಸುತ್ತಿರುವ ಅಮೋರಿಯರನ್ನು ನಿನ್ನ ಜನರ ಮೂಲಕ ನಾನೇ ಶಿಕ್ಷಿಸುವೆನು. ಇದು ಮುಂದೆ ನಡೆಯುವ ಸಂಗತಿ. ಯಾಕೆಂದರೆ ಆ ಸಮಯದಲ್ಲಿ ಅಮೋರಿಯರು ಅಂಥ ಶಿಕ್ಷೆ ಅನುಭವಿಸುವಷ್ಟು ಕೆಟ್ಟವರಾಗಿರಲಿಲ್ಲ” ಎಂದು ಹೇಳಿದನು.
Archwiliwch ಆದಿಕಾಂಡ 15:16
Gartref
Beibl
Cynlluniau
Fideos