ಲೂಕ 19
19
ಯೇಸು ಸುಂಕದವನಾದ ಜಕ್ಕಾಯನ ಮನೆಗೆ ಹೋದದ್ದು
1ಆತನು ಯೆರಿಕೋ ಊರನ್ನು ಹೊಕ್ಕು ದಾಟಿಹೋಗುತ್ತಿದ್ದನು. 2ಅಲ್ಲಿ ಜಕ್ಕಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು; ಅವನು ಸುಂಕದ ಗುತ್ತಿಗೆದಾರನು ಮತ್ತು ಐಶ್ವರ್ಯವಂತನು. 3ಅವನು ಯೇಸು ಎಂಥವನೆಂದು ನೋಡಲಪೇಕ್ಷಿಸಿದರೂ ತಾನು ಗಿಡ್ಡನಾಗಿದ್ದದರಿಂದ ಜನರ ಗುಂಪಿನ ನಿವಿುತ್ತ ನೋಡಲಾರದೆ ಹೋದನು. 4ಆದಕಾರಣ ಆತನನ್ನು ನೋಡುವದಕ್ಕಾಗಿ ಮುಂದೆ ಓಡಿಹೋಗಿ ಆತನು ಬರುತ್ತಿರುವ ಮಾರ್ಗದಲ್ಲಿದ್ದ ಆಲದ ಮರವನ್ನು ಹತ್ತಿದನು. 5ಯೇಸು ಅಲ್ಲಿಗೆ ಬಂದು ಮೇಲಕ್ಕೆ ನೋಡಿ - ಜಕ್ಕಾಯನೇ, ತಟ್ಟನೆ ಇಳಿದು ಬಾ, ನಾನು ಈಹೊತ್ತು ನಿನ್ನ ಮನೆಯಲ್ಲಿ ಇಳುಕೊಳ್ಳಬೇಕು ಎಂದು ಅವನಿಗೆ ಹೇಳಲು 6ಅವನು ತಟ್ಟನೆ ಇಳಿದು ಬಂದು ಆತನನ್ನು ಸಂತೋಷದಿಂದ ಸೇರಿಸಿಕೊಂಡನು. 7ಇದನ್ನು ನೋಡಿದವರೆಲ್ಲರು - ಈತನು ಪಾಪಿಯಾಗಿರುವವನ ಬಳಿಯಲ್ಲಿ ಇಳುಕೊಳ್ಳುವದಕ್ಕೆ ಹೋಗಿದ್ದಾನೆ ಎಂದು ಗುಣುಗುಟ್ಟಿದರು. 8ಆದರೆ ಜಕ್ಕಾಯನು ನಿಂತುಕೊಂಡು ಸ್ವಾವಿುಗೆ - ಸ್ವಾಮೀ, ನೋಡು, ನನ್ನ ಆಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಎಳಕೊಂಡದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಎಂದು ಹೇಳಿದನು. 9ಇದನ್ನು ಕೇಳಿ ಯೇಸು - ಈಹೊತ್ತು ಈ ಮನೆಗೆ ರಕ್ಷಣೆಯಾಯಿತು; ಇವನು ಸಹ ಅಬ್ರಹಾಮನ ವಂಶಿಕನಲ್ಲವೇ. 10ಮನುಷ್ಯಕುಮಾರನು ಕೆಟ್ಟುಹೋಗಿರುವದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು.
ಹತ್ತು ಮೊಹರಿಗಳ ವಿಷಯವಾದ ಸಾಮ್ಯ
(ಮತ್ತಾ. 25.14-30)
11ಅವರು ಈ ಮಾತುಗಳನ್ನು ಕೇಳುತ್ತಿರಲಾಗಿ ಯೇಸು ತಾನು ಯೆರೂಸಲೇವಿುಗೆ ಸಮೀಪವಾಗಿದ್ದದರಿಂದಲೂ ದೇವರ ರಾಜ್ಯವು ಕೂಡಲೆ ಪ್ರತ್ಯಕ್ಷವಾಗುವ ಹಾಗಿದೆ ಎಂದು ಅವರು ಭಾವಿಸಿದ್ದದರಿಂದಲೂ ಇನ್ನೂ ಒಂದು ಸಾಮ್ಯವನ್ನು ಹೇಳಿದನು. 12ಅದೇನಂದರೆ - ಶ್ರೀಮಂತನಾದ ಒಬ್ಬಾನೊಬ್ಬ ಮನುಷ್ಯನು ತಾನು ರಾಜ್ಯಾಧಿಕಾರವನ್ನು ಪಡೆದುಕೊಂಡು ಹಿಂತಿರುಗಿ ಬರಬೇಕೆಂದು ದೂರದೇಶಕ್ಕೆ ಹೊರಟನು. 13ಹೊರಡುವಾಗ ತನ್ನ ಆಳುಗಳಲ್ಲಿ ಹತ್ತು ಮಂದಿಯನ್ನು ಕರೆದು ಅವರಿಗೆ ಹತ್ತು ಮೊಹರಿಗಳನ್ನು ಕೊಟ್ಟು - ನಾನು ಬರುವ ತನಕ ವ್ಯಾಪಾರಮಾಡಿಕೊಂಡಿರ್ರಿ ಎಂದು ಹೇಳಿಹೋದನು. 14ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ಇವನು ನಮ್ಮ ಮೇಲೆ ದೊರೆತನಮಾಡುವದು ನಮಗೆ ಇಷ್ಟವಿಲ್ಲ ಎಂದು ಹೇಳಿಸಿದರು. 15ಆಮೇಲೆ ಅವನು ರಾಜ್ಯಾಧಿಕಾರವನ್ನು ಪಡಕೊಂಡು ಹಿಂತಿರುಗಿ ಬಂದು ತಾನು ಹಣವನ್ನು ಕೊಟ್ಟಿದ್ದ ಆಳುಗಳು ವ್ಯಾಪಾರದಿಂದ ಎಷ್ಟೆಷ್ಟು ಲಾಭ ಸಂಪಾದಿಸಿಕೊಂಡಿದ್ದಾರೆಂದು ತಿಳುಕೊಳ್ಳುವದಕ್ಕಾಗಿ ಅವರನ್ನು ತನ್ನ ಬಳಿಗೆ ಕರಿಸಿದನು. 16ಮೊದಲನೆಯವನು ಆತನ ಮುಂದೆ ಬಂದು - ದೊರೆಯೇ, ನೀನು ಕೊಟ್ಟ ಮೊಹರಿಯಿಂದ ಹತ್ತು ಮೊಹರಿಗಳು ಸಂಪಾದನೆಯಾದವು ಅನ್ನಲು 17ಅವನು ಅವನಿಗೆ - ಭಲಾ! ನೀನು ಒಳ್ಳೇ ಆಳು; ನೀನು ಬಹು ಸ್ವಲ್ಪವಾದದ್ದರಲ್ಲಿ ನಂಬಿಕೆಯುಳ್ಳವನಾಗಿದ್ದದರಿಂದ ಹತ್ತು ಗ್ರಾಮಗಳ ಮೇಲೆ ಅಧಿಕಾರಿಯಾಗಿರು ಎಂದು ಹೇಳಿದನು. 18ಎರಡನೆಯವನು ಬಂದು - ದೊರೆಯೇ, ನೀನು ಕೊಟ್ಟ ಮೊಹರಿಯಿಂದ ಐದು ಮೊಹರಿಗಳು ದೊರಕಿದವು ಅನ್ನಲು 19ಅವನು ಇವನಿಗೆ - ನೀನು ಸಹ ಐದು ಗ್ರಾಮಗಳ ಮೇಲಿರು ಎಂದು ಹೇಳಿದನು. 20ಬಳಿಕ ಮತ್ತೊಬ್ಬನು ಬಂದು - ದೊರೆಯೇ, ಇಗೋ ನೀನು ಕೊಟ್ಟ ಮೊಹರಿ. 21ನೀನು ಇಡದೆಯಿರುವದನ್ನು ಎತ್ತಿಕೊಂಡು ಹೋಗುವ ಬಿತ್ತದೆಯಿರುವದನ್ನು ಕೊಯ್ಯುವ ಕಠಿನ ಮನುಷ್ಯನು ಎಂದು ನಿನಗೆ ಹೆದರಿಕೊಂಡು ಇದನ್ನು ವಸ್ತ್ರದಲ್ಲಿ ಕಟ್ಟಿ ಇಟ್ಟುಕೊಂಡೆನು ಅಂದನು. 22ಅದಕ್ಕೆ ಅವನು - ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ತೀರ್ಪುಮಾಡುತ್ತೇನೆ. ನಾನು ಇಡದೆಯಿರುವದನ್ನು ಎತ್ತಿಕೊಂಡು ಹೋಗುವ ಬಿತ್ತದೆಯಿರುವದನ್ನು ಕೊಯ್ಯುವ ಕಠಿನ ಮನುಷ್ಯನು ಎಂದು ತಿಳಿದಿಯಾ? 23ಹಾಗಾದರೆ ನೀನು ನನ್ನ ಹಣವನ್ನು ಸಾಹುಕಾರನ ಕೈಯಲ್ಲಿ ಯಾಕೆ ಕೊಡಲಿಲ್ಲ? ಆಮೇಲೆ ನಾನು ಬಂದು ಅದನ್ನು ಬಡ್ಡಿ ಸಹಿತ ತೆಗೆದುಕೊಳ್ಳುತ್ತಿದ್ದೆನು ಎಂದು ಹೇಳಿ 24ಹತ್ತಿರ ನಿಂತಿದ್ದವರಿಗೆ - ಆ ಮೊಹರಿಯನ್ನು ಇವನಿಂದ ತೆಗೆದುಕೊಂಡು ಹತ್ತು ಮೊಹರಿಗಳುಳ್ಳವನಿಗೆ ಕೊಡಿರಿ ಎಂದು ಹೇಳಿದನು. 25ಅವರು - ದೊರೆಯೇ, ಹತ್ತು ಮೊಹರಿಗಳು ಅವನಲ್ಲಿ ಅವೆಯಲ್ಲಾ ಎಂದು ಅವನಿಗೆ ಹೇಳಿದರು. 26ಅದಕ್ಕವನು - ಇದ್ದವರಿಗೆಲ್ಲಾ ಕೊಡಲ್ಪಡುವದು, ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು ಎಂದು ನಾನು ನಿಮಗೆ ಹೇಳುತ್ತೇನೆ; 27ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಬೇಕು ಅಂದನು.
ಯೇಸು ಅರಸನಂತೆ ಯೆರೂಸಲೇವಿುಗೆ ಪ್ರವೇಶಮಾಡಿದ್ದು. ದೇವಾಲಯದಲ್ಲಿದ್ದ ವ್ಯಾಪಾರಸ್ಥರನ್ನು ಹೊರಡಿಸಿದ್ದು
(ಮತ್ತಾ. 21.1-16; ಮಾರ್ಕ. 11.1-18; ಯೋಹಾ. 12.12-16)
28ಆತನು ಈ ಮಾತುಗಳನ್ನು ಹೇಳಿದ ಮೇಲೆ ಗಟ್ಟಾ ಹತ್ತಿ ಯೆರೂಸಲೇವಿುಗೆ ಮುಂದೆ ಮುಂದೆ ಹೋದನು.
29ಆಮೇಲೆ ಆತನು ಎಣ್ಣೇಮರಗಳ ಗುಡ್ಡ ಎನಿಸಿಕೊಳ್ಳುವ ಗುಡ್ಡದ ಬಳಿಯಲ್ಲಿರುವ ಬೇತ್ಫಗೆಗೂ ಬೇಥಾನ್ಯಕ್ಕೂ ಸಮೀಪಿಸಿದಾಗ ಶಿಷ್ಯರಲ್ಲಿ ಇಬ್ಬರನ್ನು ಕರೆದು - ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; 30ಅದರೊಳಗೆ ಸೇರುತ್ತಿರುವಾಗಲೇ ಅಲ್ಲಿ ಕಟ್ಟಿರುವ ಒಂದು ಕತ್ತೇಮರಿಯನ್ನು ಕಾಣುವಿರಿ; ಇದುವರೆಗೆ ಅದರ ಮೇಲೆ ಯಾರೂ ಹತ್ತಿಲ್ಲ; ಅದನ್ನು ಬಿಚ್ಚಿ ಹಿಡುಕೊಂಡು ಬನ್ನಿರಿ. 31ಯಾವನಾದರೂ ನಿಮ್ಮನ್ನು - ಯಾಕೆ ಬಿಚ್ಚುತ್ತೀರಿ ಎಂದು ಕೇಳಿದರೆ ಇದು ಸ್ವಾವಿುಯವರಿಗೆ ಬೇಕಾಗಿದೆ ಅನ್ನಿರಿ ಎಂದು ಹೇಳಿಕಳುಹಿಸಿದನು. 32ಕಳುಹಿಸಲ್ಪಟ್ಟವರು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡರು. 33ಅವರು ಆ ಕತ್ತೇಮರಿಯನ್ನು ಬಿಚ್ಚುತ್ತಿರುವಾಗ ಅದರ ಯಜಮಾನರು - ಈ ಮರಿಯನ್ನು ಯಾಕೆ ಬಿಚ್ಚುತ್ತೀರಿ ಎಂದು ಅವರನ್ನು ಕೇಳಿದ್ದಕ್ಕೆ 34ಅವರು - ಇದು ಸ್ವಾವಿುಯವರಿಗೆ ಬೇಕಾಗಿದೆ ಎಂದು ಹೇಳಿದರು. 35ಅದನ್ನು ಯೇಸುವಿನ ಬಳಿಗೆ ತಂದು ತಮ್ಮ ಬಟ್ಟೆಗಳನ್ನು ಆ ಕತ್ತೇಮರಿಯ ಮೇಲೆ ಹಾಕಿ ಯೇಸುವನ್ನು ಕೂಡ್ರಿಸಿದರು. 36ಆತನು ಹೋಗುತ್ತಿರುವಾಗ ಅವರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು. 37ಆತನು ಪಟ್ಟಣವನ್ನು ಸಮೀಪಿಸಿ ಎಣ್ಣೇಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಬಂದಾಗ ಶಿಷ್ಯಮಂಡಲಿಯವರೆಲ್ಲಾ ಸಂತೋಷಪಡುತ್ತಾ ತಾವು ಕಂಡಿದ್ದ ಎಲ್ಲಾ ಮಹತ್ಕಾರ್ಯಗಳ ವಿಷಯದಲ್ಲಿ -
38ಕರ್ತನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದ,
ಪರಲೋಕದಲ್ಲಿ ಮಂಗಳ,
ಮೇಲಣಲೋಕಗಳಲ್ಲಿ ಮಹಿಮೆ
ಎಂದು ಮಹಾ ಶಬ್ದದಿಂದ ದೇವರನ್ನು ಕೊಂಡಾಡುವದಕ್ಕೆ ತೊಡಗಿದರು. 39ಜನರ ಗುಂಪಿನೊಳಗಿದ್ದ ಫರಿಸಾಯರಲ್ಲಿ ಕೆಲವರು ಆತನಿಗೆ - ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು ಎಂದು ಹೇಳಿದ್ದಕ್ಕೆ 40ಆತನು - ಇವರು ಸುಮ್ಮನಾದರೆ ಈ ಕಲ್ಲುಗಳೇ ಕೂಗುವವು ಎಂದು ನಿಮಗೆ ಹೇಳುತ್ತೇನೆ ಅಂದನು.
41ತರುವಾಯ ಆತನು ಸಮೀಪಕ್ಕೆ ಬಂದಾಗ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಅತ್ತು - 42ನೀನಾದರೂ ಸಮಾಧಾನಕ್ಕೆ#19.42 ಅಥವಾ, ಸುಕ್ಷೇಮಕ್ಕೆ. ಬೇಕಾದದ್ದನ್ನು ಇದೇ ದಿನದಲ್ಲಿ ತಿಳಿದುಕೊಂಡರೆ ಎಷ್ಟೋ ಒಳ್ಳೇದು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ. 43-44ದೇವರು ನಿನಗೆ ದರ್ಶನಕೊಟ್ಟ ಸಮಯವನ್ನು ನೀನು ತಿಳುಕೊಳ್ಳಲಿಲ್ಲವಾದದರಿಂದ ನಿನ್ನ ವೈರಿಗಳು ಒಡ್ಡುಕಟ್ಟಿ ನಿನ್ನ ಸುತ್ತಲೂ ಮುತ್ತಿಗೆ ಹಾಕಿ ಎಲ್ಲಾ ಕಡೆಗಳಲ್ಲಿಯೂ ನಿನ್ನನ್ನು ಬಂದುಮಾಡಿ ನಿನ್ನನ್ನೂ ನಿನ್ನೊಳಗಿರುವ ನಿನ್ನ ಜನರನ್ನೂ ನಿರ್ಮೂಲಮಾಡಿ ನಿನ್ನಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವ ದಿವಸಗಳು ನಿನ್ನ ಮೇಲೆ ಬರುವವು ಅಂದನು.
45ಬಳಿಕ ಆತನು ದೇವಾಲಯಕ್ಕೆ ಹೋಗಿ ಮಾರುವವರನ್ನು ಹೊರಡಿಸಿಬಿಡುವದಕ್ಕೆ ಪ್ರಾರಂಭಿಸಿ ಅವರಿಗೆ - 46ನನ್ನ ಆಲಯವು ಪ್ರಾರ್ಥನಾಲಯವಾಗಿರುವದು ಎಂದು ಬರೆದದೆಯಲ್ಲಾ; ಆದರೆ ನೀವು ಅದನ್ನು ಕಳ್ಳರ ಗವಿ ಮಾಡಿದ್ದೀರಿ ಎಂದು ಹೇಳಿದನು.
47ಮತ್ತು ಆತನು ದಿನಾಲು ದೇವಾಲಯದಲ್ಲಿ ಉಪದೇಶಮಾಡುತ್ತಿದ್ದನು. ಅಷ್ಟರಲ್ಲಿ ಮಹಾಯಾಜಕರೂ ಶಾಸ್ತ್ರಿಗಳೂ ಪ್ರಜೆಗಳಲ್ಲಿ ಮುಖ್ಯಸ್ಥರೂ ಆತನನ್ನು ಕೊಲ್ಲುವದಕ್ಕೆ ಸಂದರ್ಭನೋಡುತ್ತಿದ್ದರು. 48ಆದರೆ ಜನರೆಲ್ಲರು ಆತನನ್ನು ಅಂಟಿಕೊಂಡು ಉಪದೇಶವನ್ನು ಗಮನಿಸಿ ಕೇಳುತ್ತಿದ್ದದರಿಂದ ಏನು ಮಾಡಬೇಕೋ ತೋರಲಿಲ್ಲ.
Dewis Presennol:
ಲೂಕ 19: KANJV-BSI
Uwcholeuo
Rhanna
Copi
Eisiau i'th uchafbwyntiau gael eu cadw ar draws dy holl ddyfeisiau? Cofrestra neu mewngofnoda
Kannada J.V. Bible © The Bible Society of India, 2016.
Used by permission. All rights reserved worldwide.

: