ಆದಿಕಾಂಡ 14
14
ಅಬ್ರಾಮನು ಲೋಟನನ್ನು ಸೆರೆಯಿಂದ ಬಿಡಿಸಿದ್ದು
1ಆ ದಿವಸಗಳಲ್ಲಿ ಶಿನಾರಿನ ಅರಸನಾದ ಅಮ್ರಾಫೆಲನು, ಎಲ್ಲಸಾರಿನ ಅರಸನಾದ ಅರಿಯೋಕನು. ಏಲಾವಿುನ ಅರಸನಾದ ಕೆದೊರ್ಲಗೋಮರನು, ಗೋಯಿಮದ ಅರಸನಾದ ತಿದ್ಗಾಲನು ಈ ನಾಲ್ವರು 2,3ಈಗ ಲವಣಸಮುದ್ರವಾಗಿರುವ ಸಿದ್ದೀಮ್ ತಗ್ಗಿನೊಳಗೆ ಕೂಡಿದ್ದ ಸೊದೋವಿುನ ಅರಸನಾದ ಬೆರಗನು, ಗೊಮೋರದ ಅರಸನಾದ ಬಿರ್ಶಗನು, ಅದ್ಮಾಹದ ಅರಸನಾದ ಶಿನಾಬನು, ಚೆಬೋಯೀವಿುನ ಅರಸನಾದ ಶೆಮೇಬರನು, ಬೇಲಗಿನ ಅಂದರೆ ಚೋಗರದ ಅರಸನು ಇವರೊಡನೆ ಯುದ್ಧಮಾಡಿದರು. 4ಬೆರಗ ಮೊದಲಾದ ಇವರು ಹನ್ನೆರಡು ವರುಷ ಕೆದೊರ್ಲಗೋಮರನಿಗೆ ಅಧೀನರಾಗಿದ್ದು ಹದಿಮೂರನೆಯ ವರುಷದಲ್ಲಿ ತಿರುಗಿಬಿದ್ದರು. 5ಹದಿನಾಲ್ಕನೆಯ ವರುಷದಲ್ಲಿ ಕೆದೊರ್ಲಗೋಮರನೂ ಅವನಿಗೆ ಸೇರಿದ್ದ ರಾಜರೂ ಬಂದು ಅಷ್ಟರೋತ್ ಕರ್ನಯಿವಿುನಲ್ಲಿ ರೆಫಾಯರನ್ನೂ ಹಾವಿುನಲ್ಲಿ ಜೂಜ್ಯರನ್ನೂ ಶಾವೆಕಿರ್ಯಾತಯಿವಿುನಲ್ಲಿ ಏವಿುಯರನ್ನೂ ಸೋಲಿಸಿದರು. 6ಇದಲ್ಲದೆ ಸೇಯೀರೆಂಬ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಹೋರಿಯರನ್ನು ಅಲ್ಲೇ ಸೋಲಿಸಿ ಮರಳುಕಾಡಿನ ಹತ್ತಿರವಿರುವ ಏಲ್ಪಾರಾನಿನವರೆಗೂ ಹಿಂದಟ್ಟಿದರು. 7ಆಮೇಲೆ ಅವರು ಹಿಂದಿರುಗಿಕೊಂಡು ಕಾದೇಶ್ ಎನ್ನುವ ಎನ್ಮಿಷ್ಪಾಟಿಗೆ ಬಂದು ಅಮಾಲೇಕ್ಯರ ಸಮಸ್ತದೇಶವನ್ನೂ ಹಚಚೋನ್‍ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಜಯಿಸಿದರು. 8ಆಗ ಸೊದೋಮ್, ಗೊಮೋರ, ಅದ್ಮಾಹ, ಚೆಬೋಯೀಮ್, ಚೋಗರೆಂಬ ಬೇಲಗ್ ಈ ಪಟ್ಟಣಗಳ ರಾಜರು ಹೊರಟು ಅವರಿಗೆದುರಾಗಿ, 9ಅಂದರೆ ಏಲಾವಿುನ ಅರಸನಾದ ಕೆದೂರ್ಲಗೋಮರ್, ಗೋಯಿಮದ ಅರಸನಾದ ತಿದ್ಗಾಲ, ಶಿನಾರಿನ ಅರಸನಾದ ಅಮ್ರಾಫೆಲ, ಎಲ್ಲಸಾರಿನ ಅರಸನಾದ ಅರಿಯೋಕ ಇವರಿಗೆ ವಿರೋಧವಾಗಿ ಸಿದ್ದೀಮೆಂಬ ತಗ್ಗುಮೈದಾನದಲ್ಲಿ ತಮ್ಮ ದಂಡನ್ನು ನಿಲ್ಲಿಸಿದರು. ಹೀಗೆ ನಾಲ್ಕು ಮಂದಿ ರಾಜರು ಐದು ಮಂದಿ ರಾಜರನ್ನು ಎದುರಿಸಿದರು. 10ಆದರೆ ಸಿದ್ದೀಮ್ ತಗ್ಗಿನಲ್ಲಿ ಕಲ್ಲರಗಿನ ಕೆಸರುಕುಣಿಗಳು ತುಂಬಾ ಇದ್ದವು. ಸೊದೋಮ್ ಗೊಮೋರಗಳ ರಾಜರ ಕಡೆಯವರು ಓಡಿಹೋಗುವಾಗ ಆ ಕುಣಿಗಳಲ್ಲಿ ಬಿದ್ದು ಸತ್ತರು; ಉಳಿದವರು ಬೆಟ್ಟಗಳಿಗೆ ಓಡಿಹೋದರು. 11ಗೆದ್ದವರು ಸೊದೋಮ್ ಗೊಮೋರ ಪಟ್ಟಣಗಳನ್ನು ಸೂರೆಮಾಡಿ ಅವುಗಳಲ್ಲಿದ್ದ ಎಲ್ಲಾ ಆಸ್ತಿಯನ್ನೂ ದವಸವನ್ನೂ ತೆಗೆದುಕೊಂಡು ಹೋದರು. 12ಸೊದೋವಿುನಲ್ಲಿ ವಾಸವಾಗಿದ್ದ ಅಬ್ರಾಮನ ತಮ್ಮನ ಮಗನಾದ ಲೋಟನನ್ನೂ ಅವನ ಆಸ್ತಿ ಸಹಿತ ಹಿಡಿದುಕೊಂಡು ಹೋದರು.
13ತಪ್ಪಿಸಿಕೊಂಡವನೊಬ್ಬನು ಇಬ್ರಿಯನಾದ ಅಬ್ರಾಮನ ಬಳಿಗೆ ಬಂದು ಇದನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆಯನು ಎಷ್ಕೋಲ ಆನೇರರಿಗೆ ಸಹೋದರನು; ಇವರಿಬ್ಬರಿಗೂ ಅಬ್ರಾಮನಿಗೂ ಒಡಂಬಡಿಕೆಯಿತ್ತು. 14ಅಬ್ರಾಮನು ತನ್ನ ತಮ್ಮನ ಮಗನು ಸೆರೆಗೆ ಸಿಕ್ಕಿದ್ದನ್ನು ಕೇಳಿ ತನ್ನ ಮನೆಯಲ್ಲೇ ಹುಟ್ಟಿ ಬೆಳೆದ ಶಿಕ್ಷಿತರಾದ ಮುನ್ನೂರ ಹದಿನೆಂಟು ಮಂದಿ ಆಳುಗಳನ್ನು ಯುದ್ಧಕ್ಕೆ ಸಿದ್ಧಮಾಡಿಕೊಂಡು ಹೊರಟು ಆ ರಾಜರನ್ನು ದಾನೂರಿನವರೆಗೆ ಹಿಂದಟ್ಟಿದನು. 15ಆಗ ಅವನು ರಾತ್ರಿ ವೇಳೆಯಲ್ಲಿ ತನ್ನ ದಂಡನ್ನು ಎರಡು ಭಾಗ ಮಾಡಿ ತನ್ನ ಭಟರೊಡನೆ ಅವರ ಮೇಲೆ ಬಿದ್ದು ಹೊಡೆದು ದಮಸ್ಕಪಟ್ಟಣದ ಉತ್ತರ ಕಡೆಯಲ್ಲಿರುವ ಹೋಬಾ ಊರಿನ ತನಕ ಹಿಂದಟ್ಟಿದನು. 16ರಾಜರು ಅಪಹರಿಸಿದ್ದ ಎಲ್ಲಾ ವಸ್ತುಗಳನ್ನು ಅವನು ತೆಗೆದುಕೊಂಡನು. ತನ್ನ ತಮ್ಮನ ಮಗನಾದ ಲೋಟನನ್ನೂ ಅವನ ಆಸ್ತಿಯನ್ನೂ ಬಿಡಿಸಿಕೊಂಡದ್ದಲ್ಲದೆ ಸೆರೆಯಲ್ಲಿದ್ದ ಸ್ತ್ರೀಯರನ್ನೂ ವಿುಕ್ಕಾದವರನ್ನೂ ತೆಗೆದುಕೊಂಡು ಬಂದನು.
17ಅವನು ಕೆದೊರ್ಲಗೋಮರನನ್ನೂ ಅವನೊಂದಿಗೆ ಇದ್ದ ರಾಜರನ್ನೂ ಹೊಡೆದು ಬಂದಮೇಲೆ ಸೊದೋವಿುನ ಅರಸನು ಅವನನ್ನು ಅರಸನ ತಗ್ಗು ಎನ್ನಿಸಿಕೊಳ್ಳುವ ಶಾವೆ ತಗ್ಗಿನಲ್ಲಿ ಎದುರುಗೊಂಡನು. 18ಸಾಲೇವಿುನ ಅರಸನಾದ ಮೆಲ್ಕೀಚೆದೆಕನು ಸಹ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಕೊಟ್ಟನು. ಇವನು ಪರಾತ್ಪರನಾದ ದೇವರ ಯಾಜಕನಾಗಿದ್ದು ಅಬ್ರಾಮನನ್ನು ಆಶೀರ್ವದಿಸಿ - 19ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರ ಆಶೀರ್ವಾದವು ಅಬ್ರಾಮನಿಗೆ ಆಗಲಿ; 20ಪರಾತ್ಪರನಾದ ದೇವರು ನಿನ್ನ ಶತೃಗಳನ್ನು ನಿನ್ನ ಕೈಗೆ ಒಪ್ಪಿಸಿದ್ದಕ್ಕಾಗಿ ಆತನಿಗೆ ಸ್ತೋತ್ರ ಎಂದು ಹೇಳಿದನು. ಅಬ್ರಾಮನು ತಾನು ಗೆದ್ದು ತಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಅವನಿಗೆ ಕೊಟ್ಟನು.
21ಸೊದೋವಿುನ ಅರಸನು ಅಬ್ರಾಮನಿಗೆ - ನೀನು ಬಿಡಿಸಿದ ಜನರನ್ನು ನನಗೆ ಒಪ್ಪಿಸು; 22,23ಆಸ್ತಿಯನ್ನು ನೀನೇ ತಕ್ಕೋ ಎಂದು ಹೇಳಲು ಅಬ್ರಾಮನು ಅವನಿಗೆ - ಒಂದು ದಾರವನ್ನಾಗಲಿ ಕೆರದ ಬಾರನ್ನಾಗಲಿ ನಿನ್ನದರಲ್ಲಿ ಯಾವದನ್ನೂ ತೆಗೆದುಕೊಳ್ಳುವದಿಲ್ಲವೆಂದು ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರದೇವರಾಗಿರುವ ಯೆಹೋವನ ಕಡೆಗೆ ಕೈಯೆತ್ತಿ ಪ್ರಮಾಣ ಮಾಡುತ್ತೇನೆ. ಅಬ್ರಾಮನು ನನ್ನ ಸೊತ್ತಿನಿಂದಲೇ ಐಶ್ವರ್ಯವಂತನಾದನೆಂದು ಹೇಳಿಕೊಳ್ಳುವದಕ್ಕೆ ನಿನಗೆ ಆಸ್ಪದವಾಗಬಾರದು, ನನಗೆ ಏನೂ ಬೇಡ. 24ಆಳುಗಳು ತಿಂದದ್ದು ಹೊರತು ನನ್ನ ಜೊತೆಯವರಾದ ಆನೇರ ಎಷ್ಕೋಲ ಮಮ್ರೆಯರಿಗೆ ಬರತಕ್ಕ ಪಾಲು ಮಾತ್ರ ಇರಲಿ ಎಂದು ಹೇಳಿದನು.
Tällä hetkellä valittuna:
ಆದಿಕಾಂಡ 14: KANJV-BSI
Korostus
Jaa
Kopioi
Haluatko, että korostuksesi tallennetaan kaikille laitteillesi? Rekisteröidy tai kirjaudu sisään
Kannada J.V. Bible © The Bible Society of India, 2016.
Used by permission. All rights reserved worldwide.