ಲೂಕ 13

13
ಮನುಷ್ಯರು ದೇವರ ಕಡೆಗೆ ತಿರುಗದಿದ್ದರೆ ನಾಶವಾಗುತ್ತಾರೆಂದು ಬೋಧಿಸುವದಕ್ಕಾಗಿ ಯೇಸು ಗೊಡ್ಡು ಅಂಜೂರದ ಮರದ ಸಾಮ್ಯವನ್ನು ಹೇಳಿದ್ದು
1ಅದೇ ಸಮಯದಲ್ಲಿ ಕೆಲವರು ಆತನ ಹತ್ತಿರದಲ್ಲಿದ್ದು - ಪಿಲಾತನು ಗಲಿಲಾಯದವರ ರಕ್ತವನ್ನು ಅವರು ಕೊಟ್ಟ ಬಲಿಗಳ ಸಂಗಡ ಬೆರಸಿದನೆಂದು ಆತನಿಗೆ ತಿಳಿಸಿದರು. 2ಅದಕ್ಕೆ ಆತನು ಅವರಿಗೆ - ಆ ಗಲಿಲಾಯದವರು ಅಂಥ ಕೊಲೆಯನ್ನು ಅನುಭವಿಸಿದ್ದರಿಂದ ಅವರನ್ನು ಎಲ್ಲಾ ಗಲಿಲಾಯದವರಿಗಿಂತ ಪಾಪಿಷ್ಠರೆಂದು ಭಾವಿಸುತ್ತೀರೋ? 3ಹಾಗೆ ಭಾವಿಸಕೂಡದೆಂದು ನಿಮಗೆ ಹೇಳುತ್ತೇನೆ. ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಹಾಗೆಯೇ ಹಾಳಾಗಿ ಹೋಗುವಿರಿ. 4ಇಲ್ಲವೆ ಸಿಲೊವಾವಿುನಲ್ಲಿ ಬುರುಜುಬಿದ್ದು ಸತ್ತ ಆ ಹದಿನೆಂಟು ಮಂದಿಯು ಯೆರೂಸಲೇವಿುನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಅಪರಾಧಿಗಳೆಂದು ಭಾವಿಸುತ್ತೀರೋ? 5ಹಾಗಲ್ಲವೆಂದು ನಿಮಗೆ ಹೇಳುತ್ತೇನೆ. ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ಹಾಳಾಗಿ ಹೋಗುವಿರಿ ಎಂದು ಹೇಳಿದನು.
6ಆಮೇಲೆ ಆತನು ಒಂದು ಸಾಮ್ಯವನ್ನು ಹೇಳಿದನು. ಅದೇನಂದರೆ - ಒಬ್ಬಾನೊಬ್ಬನು ತನ್ನ ದ್ರಾಕ್ಷೆಯ ತೋಟದಲ್ಲಿ ಒಂದು ಅಂಜೂರದ ಗಿಡವನ್ನು ನೆಡಿಸಿದ್ದನು. ತರುವಾಯ ಅವನು ಅದರಲ್ಲಿ ಹಣ್ಣನ್ನು ಹುಡುಕುತ್ತಾ ಬಂದನು, ಸಿಕ್ಕಲಿಲ್ಲ. 7ಬಳಿಕ ಅವನು ತೋಟ ಮಾಡುವವನಿಗೆ - ನೋಡು, ನಾನು ಮೂರು ವರುಷದಿಂದಲೂ ಈ ಅಂಜೂರದ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದಿದ್ದೇನೆ; ಆದರೂ ನನಗೆ ಸಿಕ್ಕಲಿಲ್ಲ. ಇದನ್ನು ಕಡಿದು ಹಾಕು; ಇದರಿಂದ ಭೂವಿುಯೂ ಯಾಕೆ ಬಂಜೆಯಾಗಬೇಕು ಎಂದು ಹೇಳಿದನು. 8ಆದರೆ ತೋಟಮಾಡುವವನು - ಅಯ್ಯಾ, ಈ ವರುಷವೂ ಇದನ್ನು ಬಿಡು; ಅಷ್ಟರಲ್ಲಿ ನಾನು ಇದರ ಸುತ್ತಲು ಅಗೆದು ಗೊಬ್ಬರ ಹಾಕುತ್ತೇನೆ; 9ಮುಂದೆ ಹಣ್ಣುಬಿಟ್ಟರೆ ಸರಿ; ಇಲ್ಲದಿದ್ದರೆ ಇದನ್ನು ಕಡಿದುಹಾಕಬಹುದು ಎಂದು ಉತ್ತರಕೊಟ್ಟನು.
ಯೇಸು ಸಬ್ಬತ್‍ದಿನದಲ್ಲಿ ಒಬ್ಬ ಹೆಂಗಸನ್ನು ಸ್ವಸ್ಥಮಾಡಿದ್ದು
10ಒಂದಾನೊಂದು ಸಬ್ಬತ್‍ದಿನದಲ್ಲಿ ಆತನು ಒಂದು ಸಭಾಮಂದಿರದೊಳಗೆ ಉಪದೇಶಮಾಡುತ್ತಾ ಇದ್ದನು. 11ಅಲ್ಲಿ ಹದಿನೆಂಟು ವರುಷಗಳಿಂದ ದೆವ್ವ ಬಡಿದು ಮೈಯಲ್ಲಿ ರೋಗವುಳ್ಳ ಒಬ್ಬ ಸ್ತ್ರೀಯು ಇದ್ದಳು. ಆಕೆಯು ನಡುಬೊಗ್ಗಿಹೋಗಿ ಸ್ವಲ್ಪವಾದರೂ ಮೈಯನ್ನು ಮೇಲಕ್ಕೆ ಎತ್ತಲಾರದೆ ಇದ್ದಳು. 12ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ - ಅಮ್ಮಾ, ನಿನಗೆ ರೋಗ ಬಿಡುಗಡೆಯಾಯಿತು ಎಂದು ಹೇಳಿ ಆಕೆಯ ಮೇಲೆ ತನ್ನ ಕೈಗಳನ್ನಿಟ್ಟನು; 13ಇಟ್ಟಕೂಡಲೆ ಆಕೆ ನೆಟ್ಟಗಾದಳು, ದೇವರನ್ನು ಕೊಂಡಾಡಿದಳು. 14ಆದರೆ ಆ ಸಭಾಮಂದಿರದ ಅಧಿಕಾರಿಯು ನಡೆದ ಸಂಗತಿಯನ್ನು ನೋಡಿ ಸಬ್ಬತ್‍ದಿನದಲ್ಲಿ ಯೇಸು ಸ್ವಸ್ಥಮಾಡಿದನಲ್ಲಾ ಎಂದು ರೋಷಗೊಂಡು ಜನರಿಗೆ - ಕೆಲಸಮಾಡುವದಕ್ಕೆ ಆರು ದಿವಸಗಳು ಅವೆಯಷ್ಟೆ; ಆ ದಿವಸಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ, ಸಬ್ಬತ್‍ದಿನದಲ್ಲಿ ಮಾತ್ರ ಬೇಡ ಎಂದು ಹೇಳಿದನು. 15ಆ ಮಾತನ್ನು ಕೇಳಿ ಸ್ವಾವಿುಯು ಅವನಿಗೆ - ಕಪಟಿಗಳು ನೀವು, ನಿಮ್ಮಲ್ಲಿ ಪ್ರತಿಯೊಬ್ಬನೂ ಸಬ್ಬತ್‍ದಿನದಲ್ಲಿ ತನ್ನ ಎತ್ತನ್ನಾಗಲಿ ಕತ್ತೆಯನ್ನಾಗಲಿ ಗೋದಲಿಯಿಂದ ಬಿಚ್ಚಿ ನೀರು ಕುಡಿಸುವದಕ್ಕಾಗಿ ಹಿಡುಕೊಂಡು ಹೋಗುತ್ತಾನಲ್ಲವೇ. 16ಹಾಗಾದರೆ ಹದಿನೆಂಟು ವರುಷಗಳ ತನಕ ಸೈತಾನನು ಕಟ್ಟಿಹಾಕಿದ್ದವಳೂ ಅಬ್ರಹಾಮನ ವಂಶದವಳೂ ಆಗಿರುವ ಈಕೆಯನ್ನು ಸಬ್ಬತ್‍ದಿನದಲ್ಲಿ ಈ ಕಟ್ಟಿನೊಳಗಿಂದ ಬಿಡಿಸಬಾರದೋ ಎಂದು ಉತ್ತರಕೊಟ್ಟನು. 17ಈ ಮಾತುಗಳನ್ನು ಆತನು ಹೇಳುತ್ತಿರಲಾಗಿ ಆತನ ವಿರೋಧಿಗಳೆಲ್ಲರೂ ನಾಚಿಕೊಂಡರು; ಗುಂಪುಕೂಡಿದ್ದ ಜನರೆಲ್ಲಾ ಆತನಿಂದಾಗುತ್ತಿದ್ದ ಎಲ್ಲಾ ಮಹತ್ವದ ಕಾರ್ಯಗಳಿಗೆ ಸಂತೋಷಪಟ್ಟರು.
ದೇವರ ರಾಜ್ಯವು ಸಾಸಿವೆಕಾಳಿಗೂ ಹುಳಿಹಿಟ್ಟಿಗೂ ಸಮಾನವಾಗಿದೆ ಎಂಬುವ ಬೋಧೆ
(ಮತ್ತಾ. 13.31-33; ಮಾರ್ಕ. 4.30-32)
18ಆತನು ಹೇಳಿದ್ದೇನಂದರೆ - ದೇವರ ರಾಜ್ಯವು ಯಾವದಕ್ಕೆ ಹೋಲಿಕೆಯಾಗಿದೆ? 19ಅದನ್ನು ನಾನು ಯಾವದಕ್ಕೆ ಹೋಲಿಸಲಿ? ಅದು ಸಾಸಿವೆಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡುಹೋಗಿ ತನ್ನ ತೋಟದಲ್ಲಿ ಹಾಕಿದನು; ಅದು ಬೆಳೆದು ಮರವಾಯಿತು; ಮತ್ತು ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಮಾಡಿದವು ಅಂದನು. 20ಆತನು ಇನ್ನೂ ಹೇಳಿದ್ದೇನಂದರೆ - ದೇವರ ರಾಜ್ಯವನ್ನು ನಾನು ಯಾವದಕ್ಕೆ ಹೋಲಿಸಲಿ? ಅದು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. 21ಅದನ್ನು ಒಬ್ಬ ಹೆಂಗಸು ತಕ್ಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು ಅಂದನು.
ಇಕ್ಕಟ್ಟಾದ ಬಾಗಿಲಲ್ಲಿ ಪ್ರವೇಶಿಸಿರಿ ಎಂಬುವ ಬೋಧೆ
(ಮತ್ತಾ. 7.13, 14, 8.11, 12)
22ಆತನು ಊರೂರಿಗೂ ಗ್ರಾಮಗ್ರಾಮಕ್ಕೂ ಹೋಗಿ ಉಪದೇಶಮಾಡುತ್ತಾ, ಯೆರೂಸಲೇವಿುಗೆ ಪ್ರಯಾಣಮಾಡುತ್ತಿದ್ದನು. 23ಆ ಕಾಲದಲ್ಲಿ ಒಬ್ಬನು - ಸ್ವಾಮೀ, ರಕ್ಷಣೆ ಹೊಂದುವವರು ಸ್ವಲ್ಪಜನರೋ ಎಂದು ಕೇಳಲು 24ಆತನು ಅವರಿಗೆ - ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗುವದಕ್ಕೆ ಹೆಣಗಾಡಿರಿ. ಬಹುಜನ ಒಳಕ್ಕೆ ಹೋಗುವದಕ್ಕೆ ನೋಡುವರು, ಆದರೆ ಅವರಿಂದಾಗುವದಿಲ್ಲ ಎಂದು ನಿಮಗೆ ಹೇಳುತ್ತೇನೆ. 25ಮನೇಯಜಮಾನನು ಎದ್ದು ಕದಾ ಹಾಕಿಕೊಂಡ ಮೇಲೆ ನೀವು ಹೊರಗೆ ನಿಂತುಕೊಂಡು ಕದತಟ್ಟಿ - ಸ್ವಾಮೀ, ನಮಗೆ ತೆರೆಯಿರಿ ಎಂದು ಹೇಳುವದಕ್ಕೆ ತೊಡಗುವಾಗ ಅವನು - ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ ಅಂದಾನು. 26ಅದಕ್ಕೆ ನೀವು - ನಿನ್ನ ಸನ್ನಿಧಿಯಲ್ಲಿ ನಾವು ಊಟಮಾಡಿದೆವು, ಕುಡಿದೆವು, ನಮ್ಮ ಬೀದಿಗಳಲ್ಲಿ ನೀನು ಉಪದೇಶ ಮಾಡಿದಿ ಎಂದು ಹೇಳುವದಕ್ಕೆ ತೊಡಗೀರಿ; 27ಆದರೆ ಅವನು - ನೀವು ಎಲ್ಲಿಯವರೋ ನಿಮ್ಮ ಗುರುತು ನನಗಿಲ್ಲ; ಅಧರ್ಮಮಾಡುವ ನೀವೆಲ್ಲರೂ ನನ್ನ ಕಡೆಯಿಂದ ಹೊರಟುಹೋಗಿರಿ ಎಂದು ನಿಮಗೆ ಹೇಳುತ್ತೇನೆ ಅನ್ನುವನು. 28ಅಬ್ರಹಾಮ ಇಸಾಕ ಯಾಕೋಬ ಇವರು ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವದನ್ನೂ ನಿಮ್ಮನ್ನು ಮಾತ್ರ ಹೊರಗೆ ಹಾಕುವದನ್ನೂ ನೀವು ನೋಡುವಾಗ ನಿಮಗೆ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು. 29ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣ ದಿಕ್ಕುಗಳಿಂದಲೂ ಜನರು ಬಂದು ದೇವರ ರಾಜ್ಯದಲ್ಲಿ ಊಟಕ್ಕೆ ಕೂಡ್ರುವರು. 30ಇಗೋ, ಕಡೆಯವರಾಗಿರುವ ಕೆಲವರು ಮೊದಲಿನವರಾಗುವರು; ಮೊದಲಿನವರಾಗಿರುವ ಕೆಲವರು ಕಡೆಯವರಾಗುವರು ಅಂದನು.
ಯೇಸು ಉಪರಾಜನಾದ ಹೆರೋದನನ್ನು ಕುರಿತು ಹೇಳಿದ್ದು; ಯೆರೂಸಲೇವಿುನ ವಿಷಯದಲ್ಲಿ ದುಃಖಪಟ್ಟದ್ದು
(ಮತ್ತಾ. 23.37-39)
31ಅದೇ ಗಳಿಗೆಯಲ್ಲಿ ಕೆಲವು ಮಂದಿ ಫರಿಸಾಯರು ಹತ್ತಿರ ಬಂದು ಆತನಿಗೆ - ನೀನು ಇಲ್ಲಿಂದ ಹೊರಟುಹೋಗು, ಹೆರೋದನು ನಿನ್ನನ್ನು ಕೊಲ್ಲಬೇಕೆಂದಿದ್ದಾನೆ ಎಂದು ಹೇಳಲು 32ಆತನು ಅವರಿಗೆ - ನೀವು ಹೋಗಿ - ಇಗೋ ನಾನು ಈಹೊತ್ತು ನಾಳೆ ದೆವ್ವಗಳನ್ನು ಬಿಡಿಸುತ್ತಾ ರೋಗಗಳನ್ನು ವಾಸಿಮಾಡುತ್ತಾ ಇದ್ದು ಮೂರನೆಯ ದಿನದಲ್ಲಿ ಸಿದ್ಧಿಗೆ#13.32 ಅಥವಾ, ಕಾರ್ಯವನ್ನು ಮುಗಿಸಿರುವೆನು. ಬರುತ್ತೇನೆ ಎಂದು ಆ ನರಿಗೆ ಹೇಳಿರಿ. 33ಹೇಗೂ ನಾನು ಈಹೊತ್ತು ನಾಳೆ ನಾಡಿದು ಸಂಚಾರ ಮಾಡಬೇಕು; ಪ್ರವಾದಿಯಾದವನು ಯೆರೂಸಲೇವಿುನಲ್ಲಿಯೇ ಹೊರತು ಬೇರೆ ಪಟ್ಟಣದಲ್ಲಿ ಕೊಲ್ಲಲ್ಪಡಕೂಡದಷ್ಟೆ. 34ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಕೂಡಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಕೂಡಿಸಿಕೊಳ್ಳುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿಮಗೆ ಮನಸ್ಸಿಲ್ಲದೆ ಹೋಯಿತು. 35ನೋಡಿರಿ, ನಿಮ್ಮ ಆಲಯವು ನಿಮಗೆ ಬರೀದಾಗಿಬಿಟ್ಟದೆ. ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ ಎಂದು ನೀವು ಹೇಳುವ ತನಕ ನೀವು ನನ್ನನ್ನು ನೋಡುವದೇ ಇಲ್ಲವೆಂದು ನಿಮಗೆ ಹೇಳುತ್ತೇನೆ ಅಂದನು.

Tällä hetkellä valittuna:

ಲೂಕ 13: KANJV-BSI

Korostus

Jaa

Kopioi

None

Haluatko, että korostuksesi tallennetaan kaikille laitteillesi? Rekisteröidy tai kirjaudu sisään