ಲೂಕ 16
16
ಮುಂದಿನ ಕಾಲಕ್ಕೆ ಸಿದ್ಧಮಾಡಿಕೊಂಡ ಕಳ್ಳನಾದ ಮನೆವಾರ್ತೆಯವನ ಸಾಮ್ಯ
1ಯೇಸು ತನ್ನ ಶಿಷ್ಯರಿಗೂ ಹೇಳಿದ್ದೇನಂದರೆ - ಐಶ್ವರ್ಯವಂತನಾದ ಒಬ್ಬ ಮನುಷ್ಯನಿಗೆ ಒಬ್ಬ ಮನೆವಾರ್ತೆಯವನಿದ್ದನು. ಇವನ ವಿಷಯವಾಗಿ ಯಜಮಾನನ ಬಳಿಯಲ್ಲಿ - ಇವನು ನಿನ್ನ ಆಸ್ತಿಯನ್ನು ಹಾಳುಮಾಡುತ್ತಾ ಇದ್ದಾನೆ ಎಂದು ಯಾರೋ ದೂರು ಹೇಳಿರಲಾಗಿ 2ಯಜಮಾನನು ಅವನನ್ನು ಕರೆದು - ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವ ಸಂಗತಿ? ನಿನ್ನ ಮನೆವಾರ್ತೆಯ ಲೆಕ್ಕವನ್ನು ಒಪ್ಪಿಸು; ನೀನು ಇನ್ನು ಮನೆವಾರ್ತೆಯವನಾಗಿರುವದಕ್ಕಾಗುವದಿಲ್ಲ ಎಂದು ಹೇಳಿದನು. 3ಹೀಗಿರಲಾಗಿ ಆ ಮನೆವಾರ್ತೆಯವನು - ನಾನೇನು ಮಾಡಲಿ? ನನ್ನ ಯಜಮಾನನು ನನ್ನಿಂದ ಈ ಮನೆವಾರ್ತೆಕೆಲಸವನ್ನು ತೆಗೆದುಬಿಡುತ್ತಾನಲ್ಲಾ. ಅಗೆಯುವದಕ್ಕೆ ನನಗೆ ಬಲವಿಲ್ಲ; ಭಿಕ್ಷಾ ಬೇಡುವದಕ್ಕೆ ನನಗೆ ನಾಚಿಕೆಯಾಗುತ್ತದೆ. 4ಈ ಮನೆವಾರ್ತೆಕೆಲಸದಿಂದ ನನ್ನನ್ನು ತೆಗೆದ ಮೇಲೆ ಜನರು ನನ್ನನ್ನು ತಮ್ಮ ಮನೆಗಳೊಳಗೆ ಸೇರಿಸಿಕೊಳ್ಳುವಂತೆ ನಾನು ಮಾಡಬೇಕಾದದ್ದು ಗೊತ್ತಾಯಿತು ಎಂದು ತನ್ನೊಳಗೆ ಅಂದುಕೊಂಡು 5ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನೂ ಕರೆದು ಮೊದಲನೆಯವನನ್ನು - ನೀನು ನನ್ನ ಯಜಮಾನನಿಗೆ ಏನು ಕೊಡಬೇಕು ಎಂದು ಕೇಳಲು 6ಅವನು - ನೂರು#16.6 ಹೆಚ್ಚು ಕಡಿಮೆ 1350 ಮಣ. ಬುದ್ದಲಿ ಎಣ್ಣೆ ಅಂದಾಗ ಅವನಿಗೆ - ಈ ನಿನ್ನ ಪತ್ರವನ್ನು ತೆಗೆದುಕೊಂಡು ಬೇಗ ಕೂತುಕೊಂಡು ಐವತ್ತು ಬುದ್ದಲಿ ಅಂತ ಬರಿ ಎಂದು ಹೇಳಿದನು. 7ಬಳಿಕ ಮತ್ತೊಬ್ಬನನ್ನು - ನೀನು ಏನು ಕೊಡಬೇಕು ಎಂದು ಕೇಳಲು ಅವನು - ನೂರು ಖಂಡುಗ ಗೋದಿ ಅಂದಾಗ ಅವನಿಗೆ - ಈ ನಿನ್ನ ಪತ್ರವನ್ನು ತೆಗೆದುಕೊಂಡು ಎಂಭತ್ತು ಖಂಡುಗ ಅಂತ ಬರಿ ಎಂದು ಹೇಳಿದನು. 8ಯಜಮಾನನು ಇದನ್ನು ಕೇಳಿ ಅನ್ಯಾಯಗಾರನಾದ ಆ ಮನೆವಾರ್ತೆಯವನನ್ನು - ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಯಾಕಂದರೆ ಲೌಕಿಕರು ತಮ್ಮಂಥವರ ವಿಷಯದಲ್ಲಿ ಬೆಳಕಿನ ರಾಜ್ಯದವರಿಗಿಂತಲೂ ಜಾಣರಾಗಿದ್ದಾರೆ. 9ಅನ್ಯಾಯದ#16.9 ಅಥವಾ, ಪ್ರಾಪಂಚಿಕ. ಧನದ ಮೂಲಕವಾಗಿ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಹೀಗೆ ಮಾಡಿದರೆ ಅದು ನಿಮ್ಮ ಕೈಬಿಟ್ಟುಹೋದಾಗ ಅವರು ನಿಮ್ಮನ್ನು ಶಾಶ್ವತವಾದ ವಾಸಸ್ಥಾನಗಳಲ್ಲಿ ಸೇರಿಸಿಕೊಳ್ಳುವರು ಎಂದು ನಾನು ನಿಮಗೆ ಹೇಳುತ್ತೇನೆ. 10ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾದವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗುವನು; ಸ್ವಲ್ಪವಾದದ್ದರಲ್ಲಿ ಅನ್ಯಾಯಗಾರನಾದವನು ಬಹಳವಾದದ್ದರಲ್ಲಿಯೂ ಅನ್ಯಾಯಗಾರನಾಗುವನು. 11ಹೀಗಿರುವದರಿಂದ ಅನ್ಯಾಯದ#16.11 ಅಥವಾ, ಪ್ರಾಪಂಚಿಕ. ಧನದ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಕೊಟ್ಟಾರು? 12ಮತ್ತೊಬ್ಬನ ಸೊತ್ತಿನ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಮ್ಮದನ್ನು ನಿಮಗೆ ಯಾರು ಕೊಟ್ಟಾರು? 13ಯಾವ ಆಳಾದರೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು, ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಕೂಡ ಸೇವಿಸಲಾರಿರಿ ಅಂದನು.
ಯೇಸು ನುಡಿದ ನಾನಾ ವಚನಗಳು
14ಫರಿಸಾಯರು ಈ ಮಾತುಗಳನ್ನೆಲ್ಲಾ ಕೇಳಿ ತಾವು ಹಣದಾಶೆಯುಳ್ಳವರಾಗಿದ್ದದರಿಂದ ಹಾಸ್ಯಮಾಡಿದರು. 15ಆಗ ಆತನು ಅವರಿಗೆ ಹೇಳಿದ್ದೇನಂದರೆ - ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳುಕೊಂಡಿದ್ದಾನೆ. ಮನುಷ್ಯರಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.
16ಧರ್ಮಶಾಸ್ತ್ರವೂ ಪ್ರವಾದಿಗಳೂ ಯೋಹಾನನ ತನಕವೇ. ಈಚೆಗೆ ದೇವರ ರಾಜ್ಯವು ಸಾರಲ್ಪಡುತ್ತಾ ಇದೆ. ಅದರಲ್ಲಿ ಸಕಲರೂ ಬಲಾತ್ಕಾರವಾಗಿ ನುಗ್ಗುತ್ತಾರೆ.
17ಧರ್ಮಶಾಸ್ತ್ರದೊಳಗಿನ ಒಂದು ಗುಡಸಾದರೂ ಬಿದ್ದು ಹೋಗುವದಕ್ಕಿಂತಲೂ ಆಕಾಶವೂ ಭೂವಿುಯೂ ಅಳಿದುಹೋಗುವದು ಸುಲಭ.
18ತನ್ನ ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಮಾಡಿಕೊಳ್ಳುವ ಪ್ರತಿಯೊಬ್ಬನು ವ್ಯಭಿಚಾರ ಮಾಡುವವನಾಗಿದ್ದಾನೆ; ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರ ಮಾಡುವವನಾಗಿದ್ದಾನೆ.
ಭೋಗಪುರುಷನು - ಭಿಕ್ಷಗಾರನು ಇವರ ದೃಷ್ಟಾಂತ
19ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಸಕಲಾತಿ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು ಪ್ರತಿದಿನವೂ ವೈಭವದೊಡನೆ ಸುಖಸಂತೋಷಪಡುತ್ತಿದ್ದನು. 20ಅವನ ಮನೇ ಬಾಗಿಲಲ್ಲಿ ಲಾಜರನೆಂಬ ಒಬ್ಬ ಭಿಕ್ಷಗಾರನು ಬಿದ್ದುಕೊಂಡಿದ್ದನು. 21ಇವನು ಮೈತುಂಬಾ ಹುಣ್ಣೆದ್ದವನು; ಐಶ್ವರ್ಯವಂತನ ಮೇಜಿನಿಂದ ಬಿದ್ದ ಎಂಜಲನ್ನು ತಿಂದು ಹಸಿವು ತೀರಿಸಿಕೊಳ್ಳಬೇಕೆಂದಿದ್ದನು; ಇಷ್ಟು ಮಾತ್ರವಲ್ಲದೆ ನಾಯಿಗಳು ಸಹ ಬಂದು ಅವನ ಹುಣ್ಣುಗಳನ್ನು ನೆಕ್ಕುವವು. 22ಹೀಗಿರುವಲ್ಲಿ ಸ್ವಲ್ಪ ಕಾಲದ ಮೇಲೆ ಆ ಭಿಕ್ಷಗಾರನು ಸತ್ತನು; ದೇವದೂತರು ಅವನನ್ನು ತೆಗೆದುಕೊಂಡುಹೋಗಿ ಅಬ್ರಹಾಮನ#16.22 ಅಂದರೆ, ಪರಲೋಕದಲ್ಲಿ ಸೇರಿಸಿದರು. ಎದೆಗೆ ಒರಗಿಸಿದರು. ಆ ಐಶ್ವರ್ಯವಂತನು ಸಹ ಸತ್ತನು; ಅವನಿಗೆ ಉತ್ತರಕ್ರಿಯೆಗಳು ಆದವು. 23ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಇವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ - 24ತಂದೆಯೇ, ಅಬ್ರಹಾಮನೇ, ನನ್ನ ಮೇಲೆ ದಯವಿಟ್ಟು ಲಾಜರನನ್ನು ಕಳುಹಿಸು; ಅವನು ತನ್ನ ತುದಿಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ; ಈ ಉರಿಯಲ್ಲಿ ಸಂಕಟಪಡುತ್ತೇನೆ ಎಂದು ಕೂಗಿ ಹೇಳಿದನು. 25ಆದರೆ ಅಬ್ರಹಾಮನು - ಕಂದಾ, ನೀನು ಆಶಿಸಿದ ಸುಖವನ್ನು ನಿನ್ನ ಜೀವಮಾನದಲ್ಲಿ ಹೊಂದಿದಿ; ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ. 26ಇದು ಮಾತ್ರವಲ್ಲದೆ ನಮಗೂ ನಿಮಗೂ ನಡುವೆ ದೊಡ್ಡದೊಂದು ಡೊಂಗರ ಸ್ಥಾಪಿಸಿಯದೆ; ಆದಕಾರಣ ಈ ಕಡೆಯಿಂದ ನಿಮ್ಮ ಬಳಿಗೆ ಹೋಗಬೇಕೆಂದಿರುವವರು ಹೋಗಲಾರರು; ಮತ್ತು ಆ ಕಡೆಯಿಂದ ನಮ್ಮ ಬಳಿಗೆ ಯಾರೂ ದಾಟುವದಕ್ಕಾಗದು ಅಂದನು. 27ಆಗ ಅವನು - ಅಪ್ಪಾ, ಹಾಗಾದರೆ ಲಾಜರನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. 28ನನಗೆ ಐದು ಮಂದಿ ಅಣ್ಣತಮ್ಮಂದಿರಿದ್ದಾರೆ; ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಂದಾರು; ಬಾರದಂತೆ ಅವನು ತಾನು ಕಂಡದ್ದನ್ನು ಅವರಿಗೆ ಚೆನ್ನಾಗಿ ಹೇಳಲಿ ಅಂದನು. 29ಆದರೆ ಅಬ್ರಹಾಮನು - ಮೋಶೆಯ ಧರ್ಮಶಾಸ್ತ್ರವೂ ಪ್ರವಾದಿಗಳ ಗ್ರಂಥಗಳೂ ಅವರಲ್ಲಿ ಅವೆ; ಅವುಗಳನ್ನು ಕೇಳಲಿ ಅನ್ನಲು 30ಅವನು - ತಂದೆಯೇ, ಅಬ್ರಹಾಮನೇ, ಹಾಗಲ್ಲ; ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ದೇವರ ಕಡೆಗೆ ತಿರುಗಿಕೊಳ್ಳುವರು ಅಂದನು. 31ಅಬ್ರಹಾಮನು ಅವನಿಗೆ - ಅವರು ಮೋಶೆಯ ಮಾತನ್ನೂ ಪ್ರವಾದಿಗಳ ಮಾತನ್ನೂ ಕೇಳದಿದ್ದರೆ ಸತ್ತುಹೋಗಿದ್ದವನೊಬ್ಬನು ಜೀವಿತನಾಗಿ ಎದ್ದರೂ ಅವರು ಒಪ್ಪುವದಿಲ್ಲ ಎಂದು ಹೇಳಿದನು.
Tällä hetkellä valittuna:
ಲೂಕ 16: KANJV-BSI
Korostus
Jaa
Kopioi
Haluatko, että korostuksesi tallennetaan kaikille laitteillesi? Rekisteröidy tai kirjaudu sisään
Kannada J.V. Bible © The Bible Society of India, 2016.
Used by permission. All rights reserved worldwide.

: