1
ಯೋಹಾನನ ಸುವಾರ್ತೆ 10:10
ಪರಿಶುದ್ದ ಬೈಬಲ್
ಕಳ್ಳನು ಕದಿಯುವುದಕ್ಕೂ ಕೊಲ್ಲುವುದಕ್ಕೂ ನಾಶಮಾಡುವುದಕ್ಕೂ ಬರುತ್ತಾನೆ. ನಾನಾದರೋ ಸಮೃದ್ಧಿಕರವಾದ ಜೀವವನ್ನು ಕೊಡಲು ಬಂದೆನು.
Comparer
Explorer ಯೋಹಾನನ ಸುವಾರ್ತೆ 10:10
2
ಯೋಹಾನನ ಸುವಾರ್ತೆ 10:11
“ನಾನೇ ಒಳ್ಳೆಯ ಕುರುಬ. ಒಳ್ಳೆಯ ಕುರುಬನು ಕುರಿಗಳಿಗಾಗಿ ತನ್ನ ಪ್ರಾಣವನ್ನು ಕೊಡುತ್ತಾನೆ.
Explorer ಯೋಹಾನನ ಸುವಾರ್ತೆ 10:11
3
ಯೋಹಾನನ ಸುವಾರ್ತೆ 10:27
ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು ಮತ್ತು ಅವುಗಳು ನನ್ನನ್ನು ಹಿಂಬಾಲಿಸುತ್ತವೆ.
Explorer ಯೋಹಾನನ ಸುವಾರ್ತೆ 10:27
4
ಯೋಹಾನನ ಸುವಾರ್ತೆ 10:28
ನನ್ನ ಕುರಿಗಳಿಗೆ ನಾನು ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದಿಗೂ ಸಾಯುವುದಿಲ್ಲ, ಮತ್ತು ಅವುಗಳನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು.
Explorer ಯೋಹಾನನ ಸುವಾರ್ತೆ 10:28
5
ಯೋಹಾನನ ಸುವಾರ್ತೆ 10:9
ನಾನೇ ಬಾಗಿಲಾಗಿದ್ದೇನೆ. ನನ್ನ ಮೂಲಕವಾಗಿ ಪ್ರವೇಶಿಸುವವರು ರಕ್ಷಣೆ ಹೊಂದುವರು. ಅವರು ಒಳಗೆ ಬರಬಲ್ಲರು. ಹೊರಗೆ ಹೋಗಬಲ್ಲರು ಮತ್ತು ಹುಲ್ಲುಗಾವಲನ್ನು ಕಂಡುಕೊಳ್ಳುವರು.
Explorer ಯೋಹಾನನ ಸುವಾರ್ತೆ 10:9
6
ಯೋಹಾನನ ಸುವಾರ್ತೆ 10:14-15
“ನಾನು ಕುರಿಗಳಿಗಾಗಿ (ಜನರಿಗಾಗಿ) ಚಿಂತಿಸುವ ಕುರುಬನಾಗಿದ್ದೇನೆ. ನನ್ನ ತಂದೆಯು ನನ್ನನ್ನು ತಿಳಿದಿರುವಂತೆ ನನ್ನ ಕುರಿಗಳನ್ನು ನಾನು ತಿಳಿದಿದ್ದೇನೆ. ಮತ್ತು ನಾನು ನನ್ನ ತಂದೆಯನ್ನು ತಿಳಿದಿರುವಂತೆ ನನ್ನ ಕುರಿಗಳು ನನ್ನನ್ನು ತಿಳಿದಿವೆ. ಈ ಕುರಿಗಳಿಗೋಸ್ಕರ ನನ್ನ ಜೀವವನ್ನೇ ಕೊಡುತ್ತೇನೆ.
Explorer ಯೋಹಾನನ ಸುವಾರ್ತೆ 10:14-15
7
ಯೋಹಾನನ ಸುವಾರ್ತೆ 10:29-30
ನನ್ನ ಕುರಿಗಳನ್ನು ನನ್ನ ತಂದೆಯೇ ನನಗೆ ಕೊಟ್ಟನು. ಆತನು ಎಲ್ಲರಿಗಿಂತಲೂ ದೊಡ್ಡವನಾಗಿದ್ದಾನೆ. ನನ್ನ ಕುರಿಗಳನ್ನು ನನ್ನ ತಂದೆಯ ಕೈಯಿಂದ ಯಾರೂ ಕದ್ದುಕೊಳ್ಳಲಾರರು. ತಂದೆಯು ಮತ್ತು ನಾನು ಒಂದೇ ಆಗಿದ್ದೇವೆ” ಎಂದು ಉತ್ತರಕೊಟ್ಟನು.
Explorer ಯೋಹಾನನ ಸುವಾರ್ತೆ 10:29-30
8
9
ಯೋಹಾನನ ಸುವಾರ್ತೆ 10:18
ನನ್ನ ಪ್ರಾಣವನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು; ನಾನೇ ಅದನ್ನು ಇಚ್ಛಾಪೂರ್ವಕವಾಗಿ ಕೊಡುತ್ತೇನೆ. ನನ್ನ ಪ್ರಾಣವನ್ನು ಕೊಡುವುದಕ್ಕೂ ಅದನ್ನು ಮತ್ತೆ ಪಡೆದುಕೊಳ್ಳುವುದಕ್ಕೂ ನನಗೆ ಹಕ್ಕಿದೆ. ಹೀಗೆ ಮಾಡಬೇಕೆಂದು ತಂದೆಯೇ ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು.
Explorer ಯೋಹಾನನ ಸುವಾರ್ತೆ 10:18
10
ಯೋಹಾನನ ಸುವಾರ್ತೆ 10:7
ಆದ್ದರಿಂದ ಯೇಸು ಮತ್ತೆ, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಾನೇ ಕುರಿಗಳಿಗೆ ಬಾಗಿಲಾಗಿದ್ದೇನೆ.
Explorer ಯೋಹಾನನ ಸುವಾರ್ತೆ 10:7
11
ಯೋಹಾನನ ಸುವಾರ್ತೆ 10:12
ಕುರಿಗಳನ್ನು ನೋಡಿಕೊಳ್ಳುವುದಕ್ಕಾಗಿ ನೇಮಿತನಾಗಿರುವ ಕೂಲಿಯಾಳು ಕುರುಬನಿಗಿಂತ ಭಿನ್ನವಾಗಿದ್ದಾನೆ. ಕೂಲಿಯಾಳು ಕುರಿಗಳ ಒಡೆಯನಲ್ಲ. ಆದ್ದರಿಂದ ಕೂಲಿಯಾಳು ತೋಳ ಬರುವುದನ್ನು ಕಾಣುವಾಗ ಕುರಿಗಳನ್ನು ಬಿಟ್ಟು ಓಡಿಹೋಗುತ್ತಾನೆ. ಆಗ ತೋಳವು ಕುರಿಗಳ ಮೇಲೆ ಬಿದ್ದು ಅವುಗಳನ್ನು ಚದರಿಸಿಬಿಡುತ್ತದೆ.
Explorer ಯೋಹಾನನ ಸುವಾರ್ತೆ 10:12
12
ಯೋಹಾನನ ಸುವಾರ್ತೆ 10:1
ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಒಬ್ಬನು ಕುರಿಹಟ್ಟಿಯೊಳಗೆ ಪ್ರವೇಶಿಸುವಾಗ ಬಾಗಿಲಿನ ಮೂಲಕ ಪ್ರವೇಶಿಸಬೇಕು. ಮತ್ತೆಲ್ಲಿಂದಾದರೂ ಹತ್ತಿ ಬರುವವನು ಸುಲಿಗೆಗಾರನಾಗಿದ್ದಾನೆ; ಕುರಿಗಳನ್ನು ಕದ್ದುಕೊಳ್ಳಲು ಪ್ರಯತ್ನಿಸುವವನಾಗಿದ್ದಾನೆ.
Explorer ಯೋಹಾನನ ಸುವಾರ್ತೆ 10:1
Accueil
Bible
Plans
Vidéos