1
ಯೋಹಾನನ ಸುವಾರ್ತೆ 19:30
ಪರಿಶುದ್ದ ಬೈಬಲ್
ಯೇಸು ಹುಳಿರಸವನ್ನು ರುಚಿನೋಡಿ, “ತೀರಿತು” ಎಂದು ಹೇಳಿ ತಲೆಬಾಗಿ ಪ್ರಾಣಬಿಟ್ಟನು.
Comparer
Explorer ಯೋಹಾನನ ಸುವಾರ್ತೆ 19:30
2
ಯೋಹಾನನ ಸುವಾರ್ತೆ 19:28
ಇದಾದ ಮೇಲೆ ಎಲ್ಲವೂ ನೆರವೇರಿತೆಂದು ತಿಳಿದುಕೊಂಡು ಪವಿತ್ರ ಗ್ರಂಥದ ಮಾತನ್ನು ನೆರವೇರಿಸುವುದಕ್ಕಾಗಿ ಆತನು, “ನನಗೆ ದಾಹವಾಗಿದೆ” ಎಂದು ಹೇಳಿದನು.
Explorer ಯೋಹಾನನ ಸುವಾರ್ತೆ 19:28
3
ಯೋಹಾನನ ಸುವಾರ್ತೆ 19:26-27
ಯೇಸು ತನ್ನ ತಾಯಿಯನ್ನೂ ಅಲ್ಲೇ ನಿಂತಿದ್ದ ತನ್ನ ಪ್ರೀತಿಯ ಶಿಷ್ಯನನ್ನೂ ನೋಡಿ ತನ್ನ ತಾಯಿಗೆ, “ಅಮ್ಮಾ, ಇಗೋ, ನಿನ್ನ ಮಗನು” ಎಂದು ಹೇಳಿದನು. ಬಳಿಕ ಯೇಸು ಆ ಶಿಷ್ಯನಿಗೆ, “ಇಗೋ, ನಿನ್ನ ತಾಯಿ” ಎಂದನು. ಅಂದಿನಿಂದ ಆ ಶಿಷ್ಯನು ಆಕೆಯನ್ನು ಕರೆದುಕೊಂಡು ಹೋಗಿ ತನ್ನ ಮನೆಯಲ್ಲೇ ಇರಿಸಿಕೊಂಡನು.
Explorer ಯೋಹಾನನ ಸುವಾರ್ತೆ 19:26-27
4
ಯೋಹಾನನ ಸುವಾರ್ತೆ 19:33-34
ಬಳಿಕ ಅವರು ಯೇಸುವಿನ ಅತಿ ಸಮೀಪಕ್ಕೆ ಬಂದಾಗ ಆತನು ಆಗಲೇ ಸತ್ತುಹೋಗಿರುವುದನ್ನು ಕಂಡು ಆತನ ಕಾಲುಗಳನ್ನು ಮುರಿಯಲಿಲ್ಲ. ಆದರೆ ಸೈನಿಕರಲ್ಲಿ ಒಬ್ಬನು ತನ್ನ ಈಟಿಯಿಂದ ಯೇಸುವಿನ ಪಕ್ಕೆಗೆ ತಿವಿದನು. ಪಕ್ಕೆಯಿಂದ ರಕ್ತ ಮತ್ತು ನೀರು ಹೊರಗೆ ಹರಿದುಬಂದವು.
Explorer ಯೋಹಾನನ ಸುವಾರ್ತೆ 19:33-34
5
ಯೋಹಾನನ ಸುವಾರ್ತೆ 19:36-37
ಪವಿತ್ರ ಗ್ರಂಥದಲ್ಲಿ ಬರೆದಿರುವ, “ಆತನ ಎಲುಬುಗಳಲ್ಲಿ ಒಂದಾದರೂ ಮುರಿಯಲ್ಪಡುವುದಿಲ್ಲ” ಎಂಬ ಮಾತು ಹೀಗೆ ನೆರವೇರಿತು. ಪವಿತ್ರ ಗ್ರಂಥದ ಮತ್ತೊಂದು ಕಡೆಯಲ್ಲಿ, “ಜನರು ತಾವು ಈಟಿಯಿಂದ ಇರಿದವನನ್ನೇ ದಿಟ್ಟಿಸಿ ನೋಡುವರು” ಎಂತಲೂ ಬರೆದಿದೆ.
Explorer ಯೋಹಾನನ ಸುವಾರ್ತೆ 19:36-37
6
ಯೋಹಾನನ ಸುವಾರ್ತೆ 19:17
ಯೇಸು ತನ್ನ ಸ್ವಂತ ಶಿಲುಬೆಯನ್ನು ಹೊತ್ತುಕೊಂಡು, “ಕಪಾಲ” ಎಂಬ ಸ್ಥಳಕ್ಕೆ ಹೊರಟನು. (ಯೆಹೂದ್ಯರ ಭಾಷೆಯಲ್ಲಿ ಈ ಸ್ಥಳದ ಹೆಸರು “ಗೊಲ್ಗೊಥಾ.”)
Explorer ಯೋಹಾನನ ಸುವಾರ್ತೆ 19:17
7
ಯೋಹಾನನ ಸುವಾರ್ತೆ 19:2
ಸೈನಿಕರು ಮುಳ್ಳುಬಳ್ಳಿಗಳಿಂದ ಒಂದು ಕಿರೀಟವನ್ನು ಮಾಡಿ ಯೇಸುವಿನ ತಲೆಯ ಮೇಲೆ ಇಟ್ಟರು. ಬಳಿಕ ಸೈನಿಕರು ಯೇಸುವಿಗೆ ಕಡುಕೆಂಪಾದ ಅಂಗಿಯನ್ನು ತೊಡಿಸಿದರು.
Explorer ಯೋಹಾನನ ಸುವಾರ್ತೆ 19:2
Accueil
Bible
Plans
Vidéos