ಯೋಹಾನನ ಸುವಾರ್ತೆ 5
5
ಕೊಳದ ಬಳಿ ಗುಣಹೊಂದಿದ ರೋಗಿ
1ತರುವಾಯ ಯೇಸು ಯೆಹೂದ್ಯರ ಒಂದು ಹಬ್ಬಕ್ಕಾಗಿ ಜೆರುಸಲೇಮಿಗೆ ಹೋದನು. 2ಜೆರುಸಲೇಮಿನಲ್ಲಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಯೆಹೂದ್ಯರ ಭಾಷೆಯಲ್ಲಿ ಅದಕ್ಕೆ “ಬೆತ್ಸಥ” ಎಂದು ಕರೆಯುತ್ತಾರೆ. ಈ ಕೊಳವು “ಕುರಿಬಾಗಿಲು” ಎಂಬ ಸ್ಥಳದ ಸಮೀಪದಲ್ಲಿದೆ. 3ಕೊಳದ ಬಳಿಯಲ್ಲಿದ್ದ ಮಂಟಪಗಳಲ್ಲಿ ಅನೇಕ ರೋಗಿಗಳು ಬಿದ್ದುಕೊಂಡಿರುತ್ತಿದ್ದರು. ಅವರಲ್ಲಿ ಕೆಲವರು ಕುರಡರಾಗಿದ್ದರು, ಕೆಲವರು ಕುಂಟರಾಗಿದ್ದರು, ಮತ್ತೆ ಕೆಲವರು, ಪಾರ್ಶ್ವವಾಯು ರೋಗಿಗಳಾಗಿದ್ದರು.#5:3 ಕೆಲವು ಗ್ರೀಕ್ ಪ್ರತಿಗಳಲ್ಲಿ 3ನೇ ವಚನದ ಕೊನೇ ಭಾಗ ಸೇರಿಸಲಾಗಿದೆ: “ಇವರು ನೀರು ಉಕ್ಕುವುದನ್ನು ಕಾದುಕೊಂಡಿರುವರು.” 4#5:4 ಕೆಲವು ಗ್ರೀಕ್ ಪ್ರತಿಗಳಲ್ಲಿ 4ನೇ ವಚನ ಸೇರಿಸಲಾಗಿದೆ: “ಒಬ್ಬ ದೇವದೂತನು ಆಗಾಗ್ಗೆ ಕೊಳದಲ್ಲಿ ಇಳಿದುಬಂದು ನೀರನ್ನು ಉಕ್ಕಿಸುವನು; ನೀರನ್ನು ಉಕ್ಕಿಸಿದ ಮೇಲೆ ಮೊದಲು ಒಳಗೆ ಹೋದವನು ಯಾವ ರೋಗದಲ್ಲಿ ಬಿದ್ದಿದ್ದರೂ ಸ್ವಸ್ಥನಾಗುವನು.” 5ಮೂವತ್ತೆಂಟು ವರ್ಷಗಳಿಂದ ರೋಗಿಯಾಗಿದ್ದ ಒಬ್ಬನು ಅಲ್ಲಿ ಬಿದ್ದುಕೊಂಡಿದ್ದನು. 6ಯೇಸು ಅವನನ್ನು ನೋಡಿದನು. ಅವನು ಬಹುಕಾಲದಿಂದ ರೋಗಿಯಾಗಿರುವುದು ಆತನಿಗೆ ಗೊತ್ತಿತ್ತು. ಆದ್ದರಿಂದ ಆತನು ಅವನಿಗೆ, “ಗುಣಹೊಂದಲು ನಿನಗೆ ಅಪೇಕ್ಷೆ ಇದೆಯಾ?” ಎಂದು ಕೇಳಿದನು.
7ಆ ರೋಗಿಯು, “ಅಯ್ಯಾ, ನೀರು ಉಕ್ಕುವಾಗ ಕೊಳದೊಳಗೆ ಇಳಿದುಹೋಗಲು ನನಗೆ ಯಾರೂ ಸಹಾಯ ಮಾಡುವುದಿಲ್ಲ. ನಾನು ಎಲ್ಲರಿಗಿಂತ ಮೊದಲೇ ನೀರಿಗೆ ಇಳಿಯಲು ಪ್ರಯತ್ನಿಸುವೆ. ಆದರೆ ಪ್ರತಿಸಲವೂ ನನಗಿಂತ ಮೊದಲೇ ಮತ್ತೊಬ್ಬನು ಇಳಿದುಬಿಡುತ್ತಾನೆ” ಎಂದು ಹೇಳಿದನು.
8ಆಗ ಯೇಸು, “ಎದ್ದುನಿಲ್ಲು! ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ” ಎಂದು ಹೇಳಿದನು. 9ಆ ಕ್ಷಣವೇ ಆ ಮನುಷ್ಯನು ಗುಣಹೊಂದಿ, ತನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆದನು.
ಇದೆಲ್ಲಾ ನಡೆದದ್ದು ಸಬ್ಬತ್‌ದಿನದಲ್ಲಿ. 10ಆದ್ದರಿಂದ ಯೆಹೂದ್ಯರು ಗುಣಹೊಂದಿದ ಆ ವ್ಯಕ್ತಿಗೆ, “ಇಂದು ಸಬ್ಬತ್‌ದಿನ. ನೀನು ಸಬ್ಬತ್‌ದಿನದಲ್ಲಿ#5:10 ಸಬ್ಬತ್‌ದಿನ ಯೆಹೂದ್ಯರ ವಾರದಲ್ಲಿ ಶನಿವಾರವು ಏಳನೆಯ ದಿನ. ಹಾಸಿಗೆಯನ್ನು ಹೊತ್ತುಕೊಂಡು ಹೋಗುವುದು ನಮ್ಮ ಧರ್ಮಶಾಸ್ತ್ರಕ್ಕೆ ವಿರುದ್ಧವಾದದ್ದು” ಎಂದರು.
11ಅದಕ್ಕೆ ಅವನು, “ನನ್ನನ್ನು ಗುಣಪಡಿಸಿದವನೇ, ‘ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ’ ಎಂದು ಹೇಳಿದನು” ಎಂಬುದಾಗಿ ಉತ್ತರಿಸಿದನು.
12ಅದಕ್ಕೆ ಅವರು, “ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆಯಲು ನಿನಗೆ ಹೇಳಿದವನು ಯಾರು?” ಎಂದು ಕೇಳಿದರು.
13ಆದರೆ ಗುಣಹೊಂದಿದ್ದ ವ್ಯಕ್ತಿಗೆ ತನ್ನನ್ನು ಗುಣಪಡಿಸಿದವನು ಯಾರೆಂಬುದು ಗೊತ್ತಿರಲಿಲ್ಲ. ಆ ಸ್ಥಳದಲ್ಲಿ ಅನೇಕ ಜನರಿದ್ದರು. ಯೇಸು ಆ ಸ್ಥಳದಿಂದ ನುಸುಳಿಕೊಂಡು ಹೊರಟುಹೋದನು.
14ಅನಂತರ ಯೇಸು ಆ ಮನುಷ್ಯನನ್ನು ದೇವಾಲಯದಲ್ಲಿ ಕಂಡು ಅವನಿಗೆ, “ನೋಡು, ಈಗ ನೀನು ಗುಣಹೊಂದಿರುವೆ. ಆದರೆ ಪಾಪ ಮಾಡುವುದನ್ನು ಬಿಟ್ಟುಬಿಡು. ಇಲ್ಲದಿದ್ದರೆ ಹೆಚ್ಚಿನ ಕೇಡು ನಿನಗೆ ಸಂಭವಿಸಬಹುದು!” ಎಂದು ಹೇಳಿದನು.
15ಆಗ ಆ ಮನುಷ್ಯನು ಆ ಯೆಹೂದ್ಯರ ಬಳಿಗೆ ಹೋಗಿ ತನ್ನನ್ನು ಗುಣಪಡಿಸಿದವನು ಯೇಸುವೇ ಎಂದು ತಿಳಿಸಿದನು.
16ಯೇಸು ಈ ಕಾರ್ಯಗಳನ್ನು ಸಬ್ಬತ್‌ದಿನದಲ್ಲಿ ಮಾಡುತ್ತಿದ್ದನು. ಈ ಕಾರಣದಿಂದಾಗಿ ಯೆಹೂದ್ಯರು ಯೇಸುವನ್ನು ಹಿಂಸಿಸತೊಡಗಿದರು. 17ಆದರೆ ಯೇಸು ಅವರಿಗೆ, “ನನ್ನ ತಂದೆಯು ತನ್ನ ಕಾರ್ಯವನ್ನು ಎಂದಿಗೂ ನಿಲ್ಲಿಸುವುದಿಲ್ಲ. ಆದ್ದರಿಂದ ನಾನು ಸಹ ಕಾರ್ಯನಿರತನಾಗಿದ್ದೇನೆ” ಎಂದು ತನ್ನನ್ನು ಪ್ರತಿಪಾದಿಸಿಕೊಂಡನು.
18ಯೇಸು ಸಬ್ಬತ್ತನ್ನು ಉಲ್ಲಂಘಿಸಿದ್ದಲ್ಲದೆ ದೇವರನ್ನು ತನ್ನ ತಂದೆಯೆಂದು ಹೇಳಿಕೊಂಡು ತನ್ನನ್ನು ದೇವರಿಗೆ ಸರಿಸಮಾನನನ್ನಾಗಿ ಮಾಡಿಕೊಳ್ಳುತ್ತಿದ್ದಾನೆಂದು ಯೆಹೂದ್ಯರು ಆತನನ್ನು ಕೊಲ್ಲಲು ಮತ್ತಷ್ಟು ಪ್ರಯತ್ನಿಸಿದರು.
ಯೇಸುವಿಗೆ ದೇವರ ಅಧಿಕಾರವಿದೆ
19ಅದಕ್ಕೆ ಉತ್ತರವಾಗಿ ಆತನು ಹೀಗೆಂದನು: “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಮಗನು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು; ತಂದೆಯು ಮಾಡುವುದನ್ನು ಕಂಡು ತಾನೂ ಹಾಗೆಯೇ ಮಾಡುತ್ತಾನೆ. ತಂದೆಯು ಮಾಡುವ ಕಾರ್ಯಗಳನ್ನೇ ಮಗನೂ ಮಾಡುತ್ತಾನೆ. 20ತಂದೆಯು ಮಗನನ್ನು ಪ್ರೀತಿಸುವನು ಮತ್ತು ತಾನು ಮಾಡುವ ಎಲ್ಲಾ ಕಾರ್ಯಗಳನ್ನು ಮಗನಿಗೆ ತೋರಿಸುವನು. ಆದರೆ ಇದಕ್ಕಿಂತಲೂ ಹೆಚ್ಚಿನ ಕಾರ್ಯಗಳನ್ನು ತಂದೆಯು ಮಗನಿಗೆ ತೋರಿಸುವನು. ಆಗ ನೀವೆಲ್ಲರೂ ಆಶ್ಚರ್ಯಚಕಿತರಾಗುವಿರಿ. 21ತಂದೆಯು ಸತ್ತವರನ್ನು ಎಬ್ಬಿಸಿ ಅವರಿಗೆ ಜೀವ ಕೊಡುತ್ತಾನೆ. ಅದೇ ರೀತಿಯಲ್ಲಿ ಮಗನು ತಾನು ಬಯಸಿದವರಿಗೆ ಜೀವವನ್ನು ಕೊಡುತ್ತಾನೆ.
22“ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವುದಿಲ್ಲ. ಆದರೆ ತಂದೆಯು ತೀರ್ಪು ಮಾಡುವ ಅಧಿಕಾರವನ್ನೆಲ್ಲಾ ಮಗನಿಗೆ ಕೊಟ್ಟಿದ್ದಾನೆ. 23ಜನರು ತಂದೆಯನ್ನು ಗೌರವಿಸುವಂತೆ ಮಗನನ್ನು ಗೌರವಿಸಬೇಕೆಂದು ದೇವರು ಹೀಗೆ ಮಾಡಿದನು. ಮಗನನ್ನು ಸನ್ಮಾನಿಸದವನು ಆತನನ್ನು ಕಳುಹಿಸಿರುವ ತಂದೆಯನ್ನೂ ಸನ್ಮಾನಿಸದವನಾಗಿದ್ದಾನೆ.
24“ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನ ಮಾತನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅವನಿಗೆ ಅಪರಾಧಿಯೆಂಬ ತೀರ್ಪಾಗುವುದಿಲ್ಲ. ಅವನು ಈಗಾಗಲೇ ಮರಣವನ್ನು ದಾಟಿ ಜೀವಕ್ಕೆ ಪ್ರವೇಶಿಸಿದ್ದಾನೆ. 25ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಸತ್ತುಹೋದವರು ದೇವರ ಮಗನ ಸ್ವರವನ್ನು ಕೇಳುವ ಕಾಲ ಬರುತ್ತದೆ. ಅದು ಈಗಲೇ ಬಂದಿದೆ. ಕೇಳಿ ಸ್ವೀಕರಿಸಿಕೊಳ್ಳುವವರು ಜೀವವನ್ನು ಹೊಂದುವರು. 26ತಂದೆಯು ಜೀವಕೊಡುವ ಶಕ್ತಿಯನ್ನು ತಾನು ಹೊಂದಿರುವಂತೆ ಮಗನಿಗೂ ಜೀವಕೊಡುವ ಶಕ್ತಿಯನ್ನು ಅನುಗ್ರಹಿಸಿದನು, 27ಮತ್ತು ಎಲ್ಲಾ ಜನರಿಗೆ ತೀರ್ಪುಮಾಡುವ ಅಧಿಕಾರವನ್ನು ತಂದೆಯು ಮಗನಿಗೂ ಕೊಟ್ಟಿದ್ದಾನೆ. ಏಕೆಂದರೆ ಆ ಮಗನು ಮನುಷ್ಯಕುಮಾರನಾಗಿದ್ದಾನೆ.
28“ಇದರ ಬಗ್ಗೆ ಆಶ್ಚರ್ಯಪಡಬೇಡಿರಿ. ಏಕೆಂದರೆ ಸಮಾಧಿಗಳಲ್ಲಿರುವ ಜನರೆಲ್ಲರೂ ಆತನ ಸ್ವರವನ್ನು ಕೇಳುವ ಕಾಲ ಬರುತ್ತದೆ. 29ಆಗ ಅವರು ತಮ್ಮ ಸಮಾಧಿಗಳಿಂದ ಎದ್ದುಬರುವರು. ಜೀವನದಲ್ಲಿ ಒಳ್ಳೆಯದನ್ನು ಮಾಡಿದ ಜನರು ಪುನರುತ್ಥಾನಗೊಂಡು ನಿತ್ಯಜೀವವನ್ನು ಹೊಂದಿಕೊಳ್ಳುವರು. ಆದರೆ ಕೆಟ್ಟದ್ದನ್ನು ಮಾಡಿದವರಿಗೆ ತೀರ್ಪಿಗಾಗಿ ಪುನರುತ್ಥಾನವಾಗುವುದು.
30“ನಾನು ಒಬ್ಬಂಟಿಗನಾಗಿ ಏನೂ ಮಾಡಲಾರೆನು. ನಾನು ಕೇಳಿದ್ದಕ್ಕನುಸಾರವಾಗಿ ತೀರ್ಪು ಮಾಡುತ್ತೇನೆ. ಆದ್ದರಿಂದ ನನ್ನ ತೀರ್ಪು ಸರಿಯಾದದ್ದು. ಏಕೆಂದರೆ, ನಾನು ನನ್ನನ್ನು ಮೆಚ್ಚಿಸಲು ಪ್ರಯತ್ನಿಸದೆ ನನ್ನ ತಂದೆಯನ್ನು ಮೆಚ್ಚಿಸಲು ಪ್ರಯತ್ನಿಸುತ್ತೇನೆ.
ಯೆಹೂದ್ಯ ನಾಯಕರಿಗೆ ಯೇಸು ಹೇಳಿದ ಅಧಿಕ ವಿಷಯಗಳು
31“ನನ್ನ ವಿಷಯವಾಗಿ ನಾನೇ ಹೇಳಿಕೊಂಡರೆ, ನನ್ನ ಸಾಕ್ಷಿಯು ಸತ್ಯವಾದದ್ದಲ್ಲ. 32ಆದರೆ ನನ್ನ ವಿಷಯವಾಗಿ ಜನರಿಗೆ ಹೇಳುವ ಮತ್ತೊಬ್ಬ ವ್ಯಕ್ತಿಯಿದ್ದಾನೆ. ನನ್ನ ಬಗ್ಗೆ ಅವನು ಹೇಳುವ ಸಂಗತಿಗಳು ಸತ್ಯವಾಗಿವೆಯೆಂದು ನನಗೆ ಗೊತ್ತಿದೆ.
33“ನೀವು ಯೋಹಾನನ ಬಳಿಗೆ ಜನರನ್ನು ಕಳುಹಿಸಿದ್ದಿರಿ. ಅವನು ನಿಮಗೆ ಸತ್ಯದ ಬಗ್ಗೆ ತಿಳಿಸಿದನು. 34ಆದರೆ ನನ್ನ ಬಗ್ಗೆ ಜನರಿಗೆ ತಿಳಿಸುವುದಕ್ಕಾಗಿ ನನಗೆ ಮನುಷ್ಯನೊಬ್ಬನ ಅಗತ್ಯವಿಲ್ಲ. ಆದರೆ ನಿಮಗೆ ರಕ್ಷಣೆಯಾಗಬೇಕೆಂದು ನಾನು ಈ ಸಂಗತಿಗಳನ್ನು ಹೇಳುತ್ತಿದ್ದೇನೆ. 35ಯೋಹಾನನು ಉರಿಯುವ ದೀಪದಂತೆ ಬೆಳಕನ್ನು ಕೊಟ್ಟನು ಮತ್ತು ನೀವು ಅವನ ಬೆಳಕನ್ನು ಸ್ವಲ್ಪಕಾಲ ಸಂತೋಷದಿಂದ ಅನುಭವಿಸಿದಿರಿ.
36“ಆದರೆ ನನ್ನ ಬಗ್ಗೆ ನನ್ನಲ್ಲಿ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿಗಳಿವೆ. ನಾನು ಮಾಡುವ ಕಾರ್ಯಗಳೇ ನನ್ನ ಸಾಕ್ಷಿಗಳಾಗಿವೆ. ತಂದೆಯು ನನಗೆ ಕೊಟ್ಟಿರುವ ಈ ಕಾರ್ಯಗಳೇ, ತಂದೆಯು ನನ್ನನ್ನು ಕಳುಹಿಸಿಕೊಟ್ಟಿದ್ದಾನೆ ಎಂಬುದನ್ನು ತೋರಿಸುತ್ತವೆ. 37ಅಲ್ಲದೆ ನನ್ನನ್ನು ಕಳುಹಿಸಿದ ತಂದೆಯು ನನ್ನ ಬಗ್ಗೆ ತಾನೇ ಸಾಕ್ಷಿ ಕೊಟ್ಟಿದ್ದಾನೆ. ಆದರೆ ನೀವು ಆತನ ಧ್ವನಿಯನ್ನು ಎಂದೂ ಕೇಳಿಲ್ಲ. ಆತನು ಹೇಗಿದ್ದಾನೆ ಎಂಬುದನ್ನು ನೀವು ಎಂದೂ ಕಂಡಿಲ್ಲ. 38ತಂದೆಯ ಉಪದೇಶವು ನಿಮ್ಮಲ್ಲಿ ನೆಲೆಸಿಲ್ಲ. ಏಕೆಂದರೆ ತಂದೆಯು ಕಳುಹಿಸಿರುವಾತನನ್ನು ನೀವು ನಂಬುವುದಿಲ್ಲ. 39ನೀವು ಪವಿತ್ರ ಗ್ರಂಥವನ್ನು ಜಾಗ್ರತೆಯಿಂದ ಅಧ್ಯಯನ ಮಾಡುತ್ತೀರಿ. ಆ ಪವಿತ್ರ ಗ್ರಂಥವು ನಿಮಗೆ ನಿತ್ಯಜೀವವನ್ನು ಕೊಡುತ್ತದೆ ಎಂಬುದು ನಿಮ್ಮ ಆಲೋಚನೆ. ಅದೇ ಪವಿತ್ರ ಗ್ರಂಥವು ನನ್ನ ಬಗ್ಗೆ ತಿಳಿಸುತ್ತದೆ! 40ಆದರೆ ನೀವು ಬಯಸುವ ಆ ಜೀವವನ್ನು ನನ್ನ ಬಳಿಗೆ ಬಂದು ಹೊಂದಿಕೊಳ್ಳಲು ನಿಮಗೆ ಇಷ್ಟವಿಲ್ಲ.
41“ಮನುಷ್ಯರಿಂದ ಬರುವ ಹೊಗಳಿಕೆಯು ನನಗೆ ಬೇಕಾಗಿಲ್ಲ. 42ಆದರೆ ನಾನು ನಿಮ್ಮನ್ನು ಬಲ್ಲೆನು. ದೇವರ ಮೇಲೆ ನಿಮಗೆ ಪ್ರೀತಿಯಿಲ್ಲವೆಂದು ನನಗೆ ಗೊತ್ತಿದೆ. 43ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ. ನಾನು ಆತನಿಗೋಸ್ಕರ ಮಾತಾಡುತ್ತೇನೆ. ಆದರೆ ನೀವು ನನ್ನನ್ನು ಸ್ವೀಕರಿಸಿಕೊಳ್ಳುವುದಿಲ್ಲ. ಮತ್ತೊಬ್ಬನು ಬಂದು ತನಗೋಸ್ಕರವಾಗಿ ಮಾತಾಡಿದರೆ ನೀವು ಅವನನ್ನು ಸ್ವೀಕರಿಸಿಕೊಳ್ಳುತ್ತೀರಿ. 44ನೀವು ಪರಸ್ಪರ ಸನ್ಮಾನವನ್ನು ಬಯಸುತ್ತೀರಿ. ಆದರೆ ಒಬ್ಬನೇ ದೇವರಿಂದ ಬರುವ ಸನ್ಮಾನವನ್ನು ಪಡೆದುಕೊಳ್ಳಲು ನೀವೆಂದೂ ಪ್ರಯತ್ನಿಸುವುದಿಲ್ಲ. ಹೀಗಿರಲು ನೀವು ಹೇಗೆ ನಂಬಬಲ್ಲಿರಿ? 45ನಾನು ತಂದೆಯ ಮುಂದೆ ನಿಂತುಕೊಂಡು ನಿಮ್ಮನ್ನು ತಪ್ಪಿತಸ್ಥರೆಂಬುದಾಗಿ ಹೇಳುತ್ತೇನೆಂದು ಯೋಚಿಸಬೇಡಿರಿ. ನಿಮ್ಮನ್ನು ರಕ್ಷಿಸುತ್ತಾನೆಂದು ನೀವು ನಿರೀಕ್ಷಿಸಿಕೊಂಡಿರುವ ಮೋಶೆಯೇ ನಿಮ್ಮ ಮೇಲೆ ದೂರು ಹೇಳುವನು. 46ನೀವು ಮೋಶೆಯನ್ನು ನಿಜವಾಗಿಯೂ ನಂಬಿದ್ದರೆ, ನನ್ನನ್ನೂ ನಂಬುತ್ತಿದ್ದಿರಿ. ಯಾಕೆಂದರೆ ಅವನು ನನ್ನ ವಿಷಯವಾಗಿ ಬರೆದಿದ್ದಾನೆ. 47ಆದರೆ ಮೋಶೆ ಬರೆದದ್ದನ್ನು ನೀವು ನಂಬುವುದಿಲ್ಲ. ಹೀಗಿರಲು ನಾನು ಹೇಳುವ ಸಂಗತಿಗಳನ್ನು ನೀವು ಹೇಗೆ ನಂಬಬಲ್ಲಿರಿ?”
Sélection en cours:
ಯೋಹಾನನ ಸುವಾರ್ತೆ 5: KERV
Surbrillance
Partager
Copier
Tu souhaites voir tes moments forts enregistrés sur tous tes appareils? Inscris-toi ou connecte-toi
Kannada Holy Bible: Easy-to-Read Version
All rights reserved.
© 1997 Bible League International

: