1
ಆದಿಕಾಂಡ 27:28-29
ಪರಿಶುದ್ದ ಬೈಬಲ್
ಯೆಹೋವನು ನಿನಗೆ ಬೇಕಾದಷ್ಟು ಮಳೆಯನ್ನು ಕೊಡಲಿ; ನಿನಗೆ ಸಾರವುಳ್ಳ ಭೂಮಿಯೂ ಮಹಾಸುಗ್ಗಿಗಳೂ ಮತ್ತು ದ್ರಾಕ್ಷಾರಸವೂ ದೊರೆಯಲಿ. ಎಲ್ಲಾ ಜನರು ನಿನ್ನ ಸೇವೆಮಾಡಲಿ; ಜನಾಂಗಗಳು ನಿನಗೆ ತಲೆಬಾಗಲಿ. ನೀನು ನಿನ್ನ ಸಹೋದರರ ಮೇಲೆ ಆಡಳಿತ ಮಾಡುವೆ. ನಿನ್ನ ತಾಯಿಯ ಗಂಡುಮಕ್ಕಳು ನಿನಗೆ ತಲೆಬಾಗಿ ವಿಧೇಯರಾಗುವರು. ನಿನ್ನನ್ನು ಶಪಿಸುವ ಪ್ರತಿಯೊಬ್ಬನು ಶಾಪಗ್ರಸ್ಥನಾಗುವನು. ನಿನ್ನನ್ನು ಆಶೀರ್ವದಿಸುವ ಪ್ರತಿಯೊಬ್ಬನು ಆಶೀರ್ವದಿಸಲ್ಪಡುವನು.”
השווה
חקרו ಆದಿಕಾಂಡ 27:28-29
2
ಆದಿಕಾಂಡ 27:36
ಏಸಾವನು, “ಅವನ ಹೆಸರು ಯಾಕೋಬ (ಮೋಸಗಾರ). ಅದೇ ಅವನಿಗೆ ಸರಿಯಾದ ಹೆಸರು. ಅವನು ಎರಡು ಸಲ ನನಗೆ ಮೋಸಮಾಡಿದನು. ನನ್ನ ಚೊಚ್ಚಲತನದ ಹಕ್ಕನ್ನು ತೆಗೆದುಕೊಂಡನು. ಈಗ ನನ್ನ ಆಶೀರ್ವಾದವನ್ನೂ ತೆಗೆದುಕೊಂಡನು” ಎಂದು ಹೇಳಿದನು. ನಂತರ ಏಸಾವನು, “ನನಗೋಸ್ಕರ ಯಾವ ಆಶೀರ್ವಾದವೂ ಉಳಿದಿಲ್ಲವೆ?” ಎಂದು ಕೇಳಿದನು.
חקרו ಆದಿಕಾಂಡ 27:36
3
ಆದಿಕಾಂಡ 27:39-40
ಆಗ ಇಸಾಕನು ಅವನಿಗೆ ಹೀಗೆ ಹೇಳಿದನು: “ನೀನು ಒಳ್ಳೆಯ ಪ್ರದೇಶದಲ್ಲಿ ಜೀವಿಸುವುದಿಲ್ಲ. ನಿನಗೆ ಬೇಕಾದಷ್ಟು ಇಬ್ಬನಿ ಇರುವುದಿಲ್ಲ. ನೀನು ಕತ್ತಿಯಿಂದಲೇ ಜೀವಿಸುವೆ. ನೀನು ನಿನ್ನ ತಮ್ಮನ ಸೇವಕನಾಗಿರುವೆ. ಆದರೆ ನೀನು ಬಿಡುಗಡೆಯಾಗಲು ಹೋರಾಡಿ ಅವನ ಹಿಡಿತದಿಂದ ಪಾರಾಗುವೆ.”
חקרו ಆದಿಕಾಂಡ 27:39-40
4
ಆದಿಕಾಂಡ 27:38
ಆದರೆ ಏಸಾವನು ತನ್ನ ತಂದೆಯನ್ನು ಮತ್ತೆ ಬೇಡತೊಡಗಿದನು. “ಅಪ್ಪಾ ನನಗಾಗಿ ಒಂದಾದರೂ ಆಶೀರ್ವಾದವಿಲ್ಲವೇ? ಅಪ್ಪಾ, ನನ್ನನ್ನು ಸಹ ಆಶೀರ್ವದಿಸು” ಎಂದು ಏಸಾವನು ಅಳಲಾರಂಭಿಸಿದನು.
חקרו ಆದಿಕಾಂಡ 27:38
בית
כתבי הקודש
תוכניות
קטעי וידאו