1
ಯೋಹಾನನ ಸುವಾರ್ತೆ 3:16
ಪರಿಶುದ್ದ ಬೈಬಲ್
ಹೌದು, ದೇವರು ಲೋಕವನ್ನು ಎಷ್ಟೋ ಪ್ರೀತಿಸಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಹೊಂದಬೇಕೆಂದು ಆತನನ್ನು ಕೊಟ್ಟನು.
השווה
חקרו ಯೋಹಾನನ ಸುವಾರ್ತೆ 3:16
2
ಯೋಹಾನನ ಸುವಾರ್ತೆ 3:17
ದೇವರು ತನ್ನ ಮಗನನ್ನು ಈ ಲೋಕಕ್ಕೆ ಕಳುಹಿಸಿದ್ದು, ಆತನ ಮೂಲಕವಾಗಿ ಈ ಲೋಕದ ಜನರನ್ನು ಅಪರಾಧಿಗಳೆಂದು ತೀರ್ಪು ಮಾಡುವುದಕ್ಕಾಗಿಯಲ್ಲ. ಈ ಲೋಕದವರು ರಕ್ಷಣೆ ಹೊಂದಿಕೊಳ್ಳಲೆಂದು ದೇವರು ಆತನನ್ನು ಕಳುಹಿಸಿಕೊಟ್ಟನು.
חקרו ಯೋಹಾನನ ಸುವಾರ್ತೆ 3:17
3
ಯೋಹಾನನ ಸುವಾರ್ತೆ 3:3
ಯೇಸು “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಒಬ್ಬನು ಹೊಸದಾಗಿ ಹುಟ್ಟಲೇಬೇಕು. ಒಬ್ಬನು ಹೊಸದಾಗಿ ಹುಟ್ಟಿಲ್ಲದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು” ಎಂದು ಉತ್ತರಿಸಿದನು.
חקרו ಯೋಹಾನನ ಸುವಾರ್ತೆ 3:3
4
ಯೋಹಾನನ ಸುವಾರ್ತೆ 3:18
ದೇವರ ಮಗನಲ್ಲಿ ನಂಬಿಕೆ ಇಡುವವನಿಗೆ ತೀರ್ಪಾಗುವುದಿಲ್ಲ. ಆದರೆ ನಂಬದವನಿಗೆ ಆಗಲೇ ತೀರ್ಪಾಗಿದೆ. ಏಕೆಂದರೆ ಅವನು ದೇವರ ಒಬ್ಬನೇ ಮಗನಲ್ಲಿ ನಂಬಿಕೆ ಇಡಲಿಲ್ಲ.
חקרו ಯೋಹಾನನ ಸುವಾರ್ತೆ 3:18
5
ಯೋಹಾನನ ಸುವಾರ್ತೆ 3:19
ಆ ತೀರ್ಪು ಏನೆಂದರೆ: ಬೆಳಕು ಈ ಲೋಕಕ್ಕೆ ಬಂದಿದೆ, ಆದರೆ ಜನರು ಬೆಳಕನ್ನು ಅಪೇಕ್ಷಿಸದೆ ಕತ್ತಲೆಯನ್ನೇ ಬಯಸಿದರು. ಏಕೆಂದರೆ ಅವರು ದುಷ್ಕೃತ್ಯಗಳನ್ನು ಮಾಡುತ್ತಿದ್ದರು.
חקרו ಯೋಹಾನನ ಸುವಾರ್ತೆ 3:19
6
ಯೋಹಾನನ ಸುವಾರ್ತೆ 3:30
ಆತನು (ಯೇಸು) ವೃದ್ಧಿಯಾಗಬೇಕು ಮತ್ತು ನಾನು ಕಡಿಮೆಯಾಗಬೇಕು.
חקרו ಯೋಹಾನನ ಸುವಾರ್ತೆ 3:30
7
ಯೋಹಾನನ ಸುವಾರ್ತೆ 3:20
ಕೇಡನ್ನು ಮಾಡುವ ಪ್ರತಿಯೊಬ್ಬನೂ ಬೆಳಕನ್ನು ದ್ವೇಷಿಸುವನು. ಅವನು ಬೆಳಕಿಗೆ ಬರುವುದಿಲ್ಲ. ಏಕೆಂದರೆ ಅವನು ಮಾಡಿರುವ ಕೆಟ್ಟಕಾರ್ಯಗಳನ್ನೆಲ್ಲಾ ಬೆಳಕು ತೋರಿಸುತ್ತದೆ.
חקרו ಯೋಹಾನನ ಸುವಾರ್ತೆ 3:20
8
ಯೋಹಾನನ ಸುವಾರ್ತೆ 3:36
ಮಗನಲ್ಲಿ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ. ಆದರೆ ಮಗನಿಗೆ ವಿಧೇಯನಾಗದವನು ಆ ಜೀವವನ್ನು ಎಂದಿಗೂ ಹೊಂದಿಕೊಳ್ಳುವುದಿಲ್ಲ. ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು” ಎಂದು ಉತ್ತರಕೊಟ್ಟನು.
חקרו ಯೋಹಾನನ ಸುವಾರ್ತೆ 3:36
9
ಯೋಹಾನನ ಸುವಾರ್ತೆ 3:14
“ಮೋಶೆಯು ಮರಳುಗಾಡಿನಲ್ಲಿ ಸರ್ಪವನ್ನು ಎತ್ತರವಾದ ಕಂಬದ ಮೇಲಿಟ್ಟನು. ಅಂತೆಯೇ ಮನುಷ್ಯಕುಮಾರನನ್ನು ಸಹ ಎತ್ತರವಾದ ಕಂಬದ ಮೇಲಿಡಬೇಕು.
חקרו ಯೋಹಾನನ ಸುವಾರ್ತೆ 3:14
10
ಯೋಹಾನನ ಸುವಾರ್ತೆ 3:35
ತಂದೆಯು ಮಗನನ್ನು ಪ್ರೀತಿಸುತ್ತಾನೆ. ತಂದೆಯು ಮಗನಿಗೆ ಪ್ರತಿಯೊಂದರ ಮೇಲೆಯೂ ಅಧಿಕಾರವನ್ನು ಕೊಟ್ಟಿದ್ದಾನೆ.
חקרו ಯೋಹಾನನ ಸುವಾರ್ತೆ 3:35
בית
כתבי הקודש
תכניות
קטעי וידאו