1
ಆದಿಕಾಂಡ 11:6-7
ಕನ್ನಡ ಸಮಕಾಲಿಕ ಅನುವಾದ
ಯೆಹೋವ ದೇವರು, “ಇವರಿಗೆ ಒಂದೇ ಜನಾಂಗವೂ ಒಂದೇ ಭಾಷೆಯೂ ಇದೆ. ಇವರು ಇದನ್ನು ಮಾಡಲಾರಂಭಿಸಿದ್ದಾರೆ. ಈಗ ಇನ್ನು ಮುಂದೆ ಇವರು ಮಾಡುವುದಕ್ಕೆ ಉದ್ದೇಶಿಸುವುದು ಇವರಿಗೆ ಅಸಾಧ್ಯವಾಗುವುದಿಲ್ಲ. ನಾವು ಇಳಿದು ಹೋಗಿ, ಇವರು ಒಬ್ಬರ ಮಾತನ್ನು ಒಬ್ಬರು ತಿಳಿಯದಂತೆ, ಇವರ ಭಾಷೆಯನ್ನು ಗಲಿಬಿಲಿ ಮಾಡೋಣ,” ಎಂದರು.
השווה
חקרו ಆದಿಕಾಂಡ 11:6-7
2
ಆದಿಕಾಂಡ 11:4
ಅನಂತರ ಅವರು, “ಬನ್ನಿರಿ, ನಾವು ಭೂಮಿಯ ಮೇಲೆ ಪಟ್ಟಣವನ್ನು ಕಟ್ಟೋಣ. ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನು ನಮಗೋಸ್ಕರವಾಗಿ ಕಟ್ಟಿಕೊಂಡು, ನಮಗೆ ಹೆಸರು ಸಂಪಾದಿಸಿಕೊಳ್ಳೋಣ. ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರುವುದಕ್ಕೆ ಆಸ್ಪದವಾಗುವದಿಲ್ಲ,” ಎಂದುಕೊಂಡರು.
חקרו ಆದಿಕಾಂಡ 11:4
3
ಆದಿಕಾಂಡ 11:9
ಆದಕಾರಣ ಅದಕ್ಕೆ, ಬಾಬೆಲ್ ಎಂದು ಹೆಸರಾಯಿತು. ಏಕೆಂದರೆ ಅಲ್ಲಿ ಯೆಹೋವ ದೇವರು ಇಡೀ ಜಗತ್ತಿನ ಭಾಷೆಗಳನ್ನು ಗಲಿಬಿಲಿ ಮಾಡಿದರು. ಅಲ್ಲಿಂದ ಯೆಹೋವ ದೇವರು ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿಬಿಟ್ಟರು.
חקרו ಆದಿಕಾಂಡ 11:9
4
ಆದಿಕಾಂಡ 11:1
ಆ ಕಾಲದಲ್ಲಿ ಭೂಲೋಕದಲ್ಲೆಲ್ಲಾ ಒಂದೇ ಭಾಷೆಯಿತ್ತು. ಭಾಷಾಭೇದವೇನೂ ಇರಲಿಲ್ಲ.
חקרו ಆದಿಕಾಂಡ 11:1
5
ಆದಿಕಾಂಡ 11:5
ಜನರು ಕಟ್ಟುತ್ತಿದ್ದ ಪಟ್ಟಣವನ್ನೂ ಗೋಪುರವನ್ನೂ ನೋಡುವುದಕ್ಕೆ ಯೆಹೋವ ದೇವರು ಇಳಿದು ಬಂದರು.
חקרו ಆದಿಕಾಂಡ 11:5
6
ಆದಿಕಾಂಡ 11:8
ಆದ್ದರಿಂದ ಯೆಹೋವ ದೇವರು ಅವರನ್ನು ಅಲ್ಲಿಂದ ಭೂಮಿಯ ಮೇಲೆಲ್ಲಾ ಚದರಿಸಿದರು. ಆಗ ಅವರು ಆ ಪಟ್ಟಣ ಕಟ್ಟುವುದನ್ನು ನಿಲ್ಲಿಸಿಬಿಟ್ಟರು.
חקרו ಆದಿಕಾಂಡ 11:8
בית
כתבי הקודש
תכניות
קטעי וידאו