ಆದಿಕಾಂಡ 3
3
1ಯೆಹೋವದೇವರು ಉಂಟುಮಾಡಿದ ಎಲ್ಲಾ ಭೂಜಂತುಗಳಲ್ಲಿ ಸರ್ಪವು ಯುಕ್ತಿಯುಳ್ಳದ್ದಾಗಿತ್ತು. ಅದು ಸ್ತ್ರೀಯ ಬಳಿಗೆ ಬಂದು - ಏನವ್ವಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ನೀವು ತಿನ್ನಬಾರದೆಂದು ದೇವರು ಅಪ್ಪಣೆಕೊಟ್ಟಿರುವದು ನಿಜವೋ ಎಂದು ಕೇಳಲು ಸ್ತ್ರೀಯು - 2ತೋಟದಲ್ಲಿರುವ ಮರಗಳ ಹಣ್ಣುಗಳನ್ನು ನಾವು ತಿನ್ನಬಹುದು; 3ಆದರೆ ತೋಟದ ಮಧ್ಯದಲ್ಲಿರುವ ಈ ಮರದ ಫಲದ ವಿಷಯವಾಗಿ - ಇದನ್ನು ತಿನ್ನಲೂ ಕೂಡದು, ಮುಟ್ಟಲೂ ಕೂಡದು; ತಿಂದರೆ ಸಾಯುವಿರಿ ಎಂದು ದೇವರು ಹೇಳಿದ್ದಾನೆ ಅಂದಳು. 4ಆಗ ಸರ್ಪವು ಸ್ತ್ರೀಗೆ - ನೀವು ಹೇಗೂ ಸಾಯುವದಿಲ್ಲ; 5ನೀವು ಇದರ ಹಣ್ಣನ್ನು ತಿಂದಾಗಲೇ ನಿಮ್ಮ ಕಣ್ಣುಗಳು ತೆರೆಯುವವು; ನೀವು ದೇವರಂತೆ ಆಗಿ ಒಳ್ಳೇದರ ಕೆಟ್ಟದ್ದರ ಭೇದವನ್ನು ಅರಿತವರಾಗುವಿರಿ; ಇದು ದೇವರಿಗೆ ಚೆನ್ನಾಗಿ ಗೊತ್ತುಂಟು ಅಂದಿತು. 6ಆಗ ಸ್ತ್ರೀಯು - ಆ ಮರದ ಹಣ್ಣು ತಿನ್ನುವದಕ್ಕೆ ಉತ್ತಮವಾಗಿಯೂ ನೋಡುವದಕ್ಕೆ ರಮ್ಯವಾಗಿಯೂ ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು. ಸಂಗಡ ಇದ್ದ ಗಂಡನಿಗೂ ಕೊಡಲು ಅವನೂ ತಿಂದನು. 7ಕೂಡಲೆ ಅವರಿಬ್ಬರ ಕಣ್ಣುಗಳು ತೆರೆದವು; ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಅಂಜೂರದ ಎಲೆಗಳನ್ನು ಹೊಲಿದು ಉಟ್ಟುಕೊಂಡರು.
8ತರುವಾಯ ಯೆಹೋವದೇವರು ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ ಆ ಸ್ತ್ರೀಪುರುಷರು ಆತನ ಸಪ್ಪಳವನ್ನು ಕೇಳಿ ಆತನಿಗೆ ಕಾಣಿಸಬಾರದೆಂದು ತೋಟದ ಮರಗಳ ಹಿಂದೆ ಅಡಗಿಕೊಂಡರು. 9ಯೆಹೋವದೇವರು ಮನುಷ್ಯನನ್ನು - 10ನೀನು ಎಲ್ಲಿರುತ್ತಿ ಎಂದು ಕೂಗಿ ಕೇಳಲು ಅವನು - ನೀನು ತೋಟದಲ್ಲಿ ಸಂಚರಿಸುವ ಸಪ್ಪಳವನ್ನು ನಾನು ಕೇಳಿ ಬೆತ್ತಲೆಯಾಗಿದ್ದೇನಲ್ಲಾ ಎಂದು ಹೆದರಿ ಅಡಗಿಕೊಂಡೆನು ಅಂದನು. 11ಅದಕ್ಕಾತನು - ನೀನು ಬೆತ್ತಲೆಯಾಗಿದ್ದಿ ಎಂದು ನಿನಗೆ ತಿಳಿಸಿದವರಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿಯಾ ಎಂದು ಕೇಳಲು 12ಆ ಮನುಷ್ಯನು - ನನ್ನ ಜೊತೆಯಲ್ಲಿರುವದಕ್ಕೆ ನೀನು ಕೊಟ್ಟ ಸ್ತ್ರೀಯು ಆ ಮರದ ಹಣ್ಣನ್ನು ನನಗೆ ಕೊಟ್ಟಳು; ನಾನು ತಿಂದೆನು ಎಂದು ಹೇಳಿದನು. 13ಯೆಹೋವದೇವರು ಸ್ತ್ರೀಯನ್ನು - ಇದೇನು ನೀನು ಮಾಡಿದ್ದು ಎಂದು ಕೇಳಲು ಸ್ತ್ರೀಯು - ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು ಎಂದು ಉತ್ತರ ಕೊಟ್ಟಳು. 14ಆಗ ಯೆಹೋವದೇವರು ಸರ್ಪಕ್ಕೆ -
ನೀನು ಈ ಕಾರ್ಯವನ್ನು ಮಾಡಿದ್ದರಿಂದ ಎಲ್ಲಾ ಪಶುಗಳಲ್ಲಿಯೂ ಅಡವಿಯ ಎಲ್ಲಾ ಮೃಗಗಳಲ್ಲಿಯೂ ಶಾಪಗ್ರಸ್ತವಾದಿ; ನೀನು ಹೊಟ್ಟೆಯಿಂದ ಹರಿದು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಮಣ್ಣೇ ತಿನ್ನುವಿ.
15ನಿನಗೂ ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವದು, ನೀನು ಅದರ ಹಿಮ್ಮಡಿಯನ್ನು ಕಚ್ಚುವಿ.#3.15 ಮೂಲ: ಜಜ್ಜುವಿ.
ಎಂದು ಹೇಳಿದನು. 16ಆಮೇಲೆ ಸ್ತ್ರೀಗೆ -
ನೀನು ಗರ್ಭಿಣಿಯಾಗಿರುವ ಕಾಲದಲ್ಲಿ ಬಹು ಸಂಕಟಪಡಬೇಕೆಂದು ನಾನು ನೇವಿುಸಿದ್ದೇನೆ; ಕಷ್ಟದಿಂದಲೇ ಮಕ್ಕಳನ್ನು ಹೆರುವಿ; ಗಂಡನ ಮೇಲೆ ನಿನಗೆ ಆಶೆಯಿರುವದು; ಅವನು ನಿನಗೆ ಒಡೆಯನಾಗುವನು.
ಎಂದು ಹೇಳಿದನು. 17ಮತ್ತು ಪುರುಷನಿಗೆ -
ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನೀನು ಹೆಂಡತಿಯ ಮಾತು ಕೇಳಿ ತಿಂದಕಾರಣ ನಿನ್ನ ನಿವಿುತ್ತ ಭೂವಿುಗೆ ಶಾಪ ಬಂತು. ನಿನ್ನ ಜೀವಮಾನವೆಲ್ಲಾ ದುಡಿದು ದುಡಿದು ಭೂವಿುಯ ಹುಟ್ಟುವಳಿಯನ್ನು ತಿನ್ನಬೇಕು. 18ಆ ಭೂವಿುಯಲ್ಲಿ ಮುಳ್ಳುಗಿಡಗಳೂ ಕಳೆಗಳೂ ಬಹಳವಾಗಿ ಹುಟ್ಟುವವು. ಹೊಲದ ಬೆಳೆಯನ್ನು ಅನುಭವಿಸುವಿ. 19ನೀನು ತಿರಿಗಿ ಮಣ್ಣಿಗೆ ಸೇರುವತನಕ ಬೆವರಿಡುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಲ್ಲವೋ; ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ
ಎಂದು ಹೇಳಿದನು.
20ಆ ಮನುಷ್ಯನು ತನ್ನ ಹೆಂಡತಿಗೆ ಹವ್ವ#3.20 ಹವ್ವ ಅಂದರೆ ಜೀವ. ಎಂದು ಹೆಸರಿಟ್ಟನು; ಯಾಕಂದರೆ ಬದುಕುವವರೆಲ್ಲರಿಗೂ ಅವಳೇ ಮೂಲಮಾತೆ. 21ಯೆಹೋವದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ತೊಡಿಸಿದನು. 22ಮತ್ತು ಯೆಹೋವದೇವರು - ಈ ಮನುಷ್ಯನು ಒಳ್ಳೇದರ ಕೆಟ್ಟದ್ದರ ಭೇದವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ. ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತೆಗೆದು ತಿಂದು ಶಾಶ್ವತವಾಗಿ ಬದುಕುವವನಾಗಬಾರದು ಅಂದುಕೊಂಡು 23ಅವನು ಉತ್ಪತ್ತಿಯಾದ ಭೂವಿುಯನ್ನೇ ವ್ಯವಸಾಯ ಮಾಡುವದಕ್ಕಾಗಿ ಅವನನ್ನು ಏದೆನ್ ತೋಟದಿಂದ ಹೊರಡಿಸಿಬಿಟ್ಟನು. 24ಅದಲ್ಲದೆ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಆತನು ಏದೆನ್ ವನದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಧಗಧಗನೆ ಪ್ರಜ್ವಲಿಸುತ್ತಾ ಸುತ್ತುವ ಕತ್ತಿಯನ್ನೂ ಇರಿಸಿದನು.
נבחרו כעת:
ಆದಿಕಾಂಡ 3: KANJV-BSI
הדגשה
שתף
העתק
רוצים לשמור את ההדגשות שלכם בכל המכשירים שלכם? הירשמו או היכנסו
Kannada J.V. Bible © The Bible Society of India, 2016.
Used by permission. All rights reserved worldwide.