ಯೋಹಾನ 8
8
1ಯೇಸು ಎಣ್ಣೇಮರಗಳ ಗುಡ್ಡಕ್ಕೆ ಹೋದನು. 2ಬೆಳಿಗ್ಗೆ ಆತನು ತಿರಿಗಿ ದೇವಾಲಯಕ್ಕೆ ಬಂದಾಗ ಜನರೆಲ್ಲರು ಆತನ ಬಳಿಗೆ ಬಂದರು; 3ಆತನು ಕೂತುಕೊಂಡು ಅವರಿಗೆ ಉಪದೇಶಮಾಡುತ್ತಿರುವಲ್ಲಿ ಶಾಸ್ತ್ರಿಗಳೂ ಫರಿಸಾಯರೂ ವ್ಯಭಿಚಾರದಲ್ಲಿ ಸಿಕ್ಕಿದ ಒಬ್ಬ ಹೆಂಗಸನ್ನು ಆತನ ಬಳಿಗೆ ತಂದು ಆಕೆಯನ್ನು ನಡುವೆ ನಿಲ್ಲಿಸಿ - 4ಬೋಧಕನೇ, ಈ ಹೆಂಗಸು ವ್ಯಭಿಚಾರ ಮಾಡುತ್ತಿರುವಾಗಲೇ ಕೈಗೆ ಸಿಕ್ಕಿದಳು. 5ಇಂಥವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಮೋಶೆಯು ಧರ್ಮಶಾಸ್ತ್ರದಲ್ಲಿ ನಮಗೆ ಅಪ್ಪಣೆಕೊಟ್ಟಿದ್ದಾನೆ; ಈಕೆಯ ವಿಷಯದಲ್ಲಿ ನೀನು ಏನು ಹೇಳುತ್ತೀ ಎಂದು ಆತನನ್ನು ಕೇಳಿದರು. 6ಆತನ ಮೇಲೆ ತಪ್ಪುಹೊರಿಸುವದಕ್ಕೆ ಏನಾದರೂ ಒಂದು ನಿವಿುತ್ತ ಬೇಕಾಗಿದ್ದದರಿಂದ ಈತನು ಏನನ್ನುತ್ತಾನೋ ನೋಡೋಣ ಎಂದು ಹಾಗೆ ಕೇಳಿದರು. ಆದರೆ ಯೇಸು ಬೊಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದನು. 7ಅವರು ಆತನನ್ನು ಬಿಡದೆ ಕೇಳುತ್ತಿರುವಾಗ ಆತನು ನೆಟ್ಟಗೆ ಕೂತುಕೊಂಡು ಅವರಿಗೆ - ನಿಮ್ಮಲ್ಲಿ ಪಾಪವಿಲ್ಲದವನು ಯಾರೋ ಅವನೇ ಮೊದಲು ಆಕೆಯ ಮೇಲೆ ಕಲ್ಲನ್ನು ಹಾಕಲಿ ಎಂದು ಹೇಳಿ 8ತಿರಿಗಿ ಬೊಗ್ಗಿಕೊಂಡು ನೆಲದ ಮೇಲೆ ಬರೆಯುತ್ತಾ ಇದ್ದನು. 9ಆ ಮಾತನ್ನು ಕೇಳಿ ತಾವೇ ಪಾಪಿಗಳೆಂದು ಮನಸ್ಸಿನಲ್ಲಿ ತಿಳುಕೊಂಡು ಹಿರಿಯರು ಮೊದಲುಗೊಂಡು ಕಿರಿಯರವರೆಗೂ ಒಬ್ಬರ ಹಿಂದೊಬ್ಬರು ಹೊರಗೆ ಹೋದರು; ಯೇಸು ಒಬ್ಬನೇ ಉಳಿದನು, ಮತ್ತು ನಡುವೆ ನಿಂತಿದ್ದ ಹೆಂಗಸು ಅಲ್ಲೇ ಇದ್ದಳು. 10ಯೇಸು ನೆಟ್ಟಗೆ ಕೂತುಕೊಂಡು ಆ ಸ್ತ್ರೀಯನ್ನೇ ಹೊರತು ಯಾರನ್ನೂ ನೋಡದೆ ಆಕೆಗೆ - ಅಮ್ಮಾ, ನಿನ್ನ ಮೇಲೆ ತಪ್ಪುಹೊರಿಸುವವರು ಎಲ್ಲಿದ್ದಾರೆ? ನಿನಗೆ ಯಾರೂ ಶಿಕ್ಷೆಯನ್ನು ವಿಧಿಸಲಿಲ್ಲವೋ? ಅಂದನು. ಯಾರೂ ವಿಧಿಸಲಿಲ್ಲ, ಸ್ವಾಮೀ, ಅಂದಳು. 11ಯೇಸು ಆಕೆಗೆ - ನಾನೂ ನಿನಗೆ ಶಿಕ್ಷೆ ವಿಧಿಸುವದಿಲ್ಲ; ಹೋಗು, ಇನ್ನು ಮೇಲೆ ಪಾಪಮಾಡಬೇಡ ಎಂದು ಹೇಳಿದನು.]
ಯೇಸು ತನ್ನ ದೈವತ್ವವನ್ನು ಸೂಚಿಸಿದಾಗ ಯೆಹೂದ್ಯರು ಆತನ ಸಂಗಡ ವಿವಾದಮಾಡಿ ಆತನನ್ನು ಕೊಲ್ಲುವದಕ್ಕೆ ಪ್ರಯತ್ನಿಸಿದ್ದು
12ಯೇಸು ತಿರಿಗಿ ಅವರ ಸಂಗಡ ಮಾತಾಡಲಾರಂಭಿಸಿ - ನಾನೇ ಲೋಕಕ್ಕೆ ಬೆಳಕು; ನನ್ನನ್ನು ಅನುಸರಿಸುವವನು ಕತ್ತಲೆಯಲ್ಲಿ ನಡೆಯದೆ ಜೀವಕೊಡುವ ಬೆಳಕನ್ನು ಹೊಂದಿದವನಾಗಿರುವನು ಎಂದು ಹೇಳಿದನು. 13ಇದನ್ನು ಕೇಳಿ ಫರಿಸಾಯರು ಆತನಿಗೆ - ನಿನ್ನ ವಿಷಯವಾಗಿ ನೀನೇ ಸಾಕ್ಷಿಹೇಳಿಕೊಳ್ಳುತ್ತೀ; ನಿನ್ನ ಸಾಕ್ಷಿ ನಿಜವಾಗದು ಎಂದು ಹೇಳಲು 14ಯೇಸು ಅವರಿಗೆ - ನಾನು ಎಲ್ಲಿಂದ ಬಂದವನಾಗಿಯೂ ಎಲ್ಲಿಗೆ ಹೋಗುವವನಾಗಿಯೂ ಇದ್ದೇನೆಂಬದು ನನಗೆ ಗೊತ್ತಿರುವದರಿಂದ ನನ್ನ ವಿಷಯವಾಗಿ ನಾನೇ ಸಾಕ್ಷಿಹೇಳಿಕೊಂಡರೂ ನನ್ನ ಸಾಕ್ಷಿ ನಿಜವಾಗಿರುವದು. ನೀವಾದರೋ ನಾನು ಎಲ್ಲಿಂದ ಬಂದವನು, ಎಲ್ಲಿಗೆ ಹೋಗುವವನು ಎಂಬದನ್ನು ತಿಳಿಯದವರು. 15ನೀವು ಹೊರಗಿನ ತೋರಿಕೆಯ ಪ್ರಕಾರ ತೀರ್ಪುಮಾಡುವವರು; ನಾನು ಯಾವನಿಗೂ ತೀರ್ಪುಮಾಡುವದಿಲ್ಲ. 16ತೀರ್ಪುಮಾಡಿದರೂ ನನ್ನ ತೀರ್ಪು ಸರಿಯಾದದ್ದೇ; ಯಾಕಂದರೆ ನಾನು ಒಂಟಿಗನಲ್ಲ; ನಾನೂ ನನ್ನನ್ನು ಕಳುಹಿಸಿಕೊಟ್ಟ ತಂದೆಯೂ ಇಬ್ಬರು ಇದ್ದೇವೆ. 17ಇಬ್ಬರ ಸಾಕ್ಷಿ ನಿಜವಾಗುತ್ತದೆಂಬದಾಗಿ ನಿಮ್ಮ ಧರ್ಮಶಾಸ್ತ್ರದಲ್ಲೇ ಬರೆದದೆ. 18ನನ್ನನ್ನು ಕುರಿತು ನಾನು ಸಾಕ್ಷಿ ಹೇಳುವವನಾಗಿದ್ದೇನೆ, ಅದಲ್ಲದೆ ನನ್ನನ್ನು ಕಳುಹಿಸಿದ ತಂದೆಯೂ ನನ್ನ ವಿಷಯವಾಗಿ ಸಾಕ್ಷಿಹೇಳುತ್ತಾನೆ ಅಂದನು. 19ಅವರು - ನಿನ್ನ ತಂದೆ ಎಲ್ಲಿದ್ದಾನೆ? ಎಂದು ಕೇಳಲು ಯೇಸು - ನೀವು ನನ್ನನ್ನೂ ತಿಳಿದಿಲ್ಲ, ನನ್ನ ತಂದೆಯನ್ನೂ ತಿಳಿದಿಲ್ಲ; ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನೂ ತಿಳಿದಿರುವಿರಿ ಅಂದನು. 20ಯೇಸು ದೇವಾಲಯದೊಳಗೆ ಕಾಣಿಕೆಯ ಪೆಟ್ಟಿಗೆಗಳು ಇರುವ ಅಂಗಳದಲ್ಲಿ ಉಪದೇಶಮಾಡುತ್ತಿರುವಾಗ ಈ ಮಾತುಗಳನ್ನು ಹೇಳಿದನು. ಆತನ ಕಾಲ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನನ್ನು ಹಿಡಿಯಲಿಲ್ಲ.
21ಯೇಸು ತಿರಿಗಿ ಅವರಿಗೆ - ನಾನು ಹೋಗುತ್ತೇನೆ; ನೀವು ನನ್ನನ್ನು ಹುಡುಕುವಿರಿ; ಮತ್ತು ನಿಮ್ಮ ಪಾಪದಲ್ಲೇ ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಅಂದನು. 22ಆ ಮಾತಿಗೆ ಯೆಹೂದ್ಯರು - ನಾನು ಹೋಗುವಲ್ಲಿಗೆ ನೀವು ಬರಲಾರಿರೆಂದು ಹೇಳುತ್ತಾನಲ್ಲಾ? ಇವನು ತನ್ನನ್ನು ತಾನೇ ಕೊಂದುಕೊಳ್ಳಬೇಕೆಂದಿದ್ದಾನೋ ಎಂದು ಮಾತಾಡಿಕೊಂಡರು. 23ಆತನು ಅವರಿಗೆ - ನೀವು ಕೆಳಗಿನವರು, ನಾನು ಮೇಲಿನವನು; ನೀವು ಈ ಲೋಕದವರು, ನಾನು ಈ ಲೋಕದವನಲ್ಲ. 24ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ನಿಮಗೆ ಹೇಳಿದೆನು; ನನ್ನನ್ನು ಆತನೆಂದು#8.24 ಆತನೆಂದರೆ, ಬರಬೇಕಾದ ಕ್ರಿಸ್ತನು. ನೀವು ನಂಬದೆ ಹೋದರೆ ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ಹೇಳಿದನು. 25ಆಗ ಅವರು - ನೀನು ಯಾರು? ಅಂದಾಗ ಯೇಸು - ನಾನು#8.25 ಅಥವಾ, ನಾನು ಮೊದಲಿಂದಲೂ. ನಿಮಗೆ ಹೇಳಿದಂಥದೇ. 26ನಿಮ್ಮ ವಿಷಯವಾಗಿ ಮಾತಾಡುವದಕ್ಕೂ ನಿಮ್ಮ ಮೇಲೆ ತೀರ್ಪುಮಾಡುವದಕ್ಕೂ ಅನೇಕ ಸಂಗತಿಗಳು ನನಗುಂಟು; ಆದರೆ ನನ್ನನ್ನು ಕಳುಹಿಸಿಕೊಟ್ಟಾತನು ಸತ್ಯವಂತನು; ಆತನಿಂದ ನಾನು ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ ಅಂದನು. 27ಆತನು ತಂದೆಯನ್ನು ಸೂಚಿಸಿ ಇದನ್ನು ಹೇಳಿದನೆಂದು ಅವರಿಗೆ ಗೊತ್ತಾಗಲಿಲ್ಲ. 28ಹೀಗಿರಲಾಗಿ ಯೇಸು - ನೀವು ಮನುಷ್ಯಕುಮಾರನನ್ನು ಎತ್ತರದಲ್ಲಿಟ್ಟಾಗ ಇವನೇ ಆತನೆಂದೂ ತನ್ನಷ್ಟಕ್ಕೆ ತಾನೇ ಏನೂ ಮಾಡದೆ ತಂದೆಯು ತನಗೆ ಬೋಧಿಸಿದ ಹಾಗೆ ಅದನ್ನೆಲ್ಲಾ ಮಾತಾಡಿದನೆಂದೂ ನನ್ನ ವಿಷಯವಾಗಿ ನಿಮಗೆ ತಿಳಿಯುವದು. 29ನನ್ನನ್ನು ಕಳುಹಿಸಿಕೊಟ್ಟಾತನು ನನ್ನ ಸಂಗಡ ಇದ್ದಾನೆ, ನಾನು ಆತನಿಗೆ ಮೆಚ್ಚಿಕೆಯಾದದ್ದನ್ನು ಯಾವಾಗಲೂ ಮಾಡುವದರಿಂದ ಆತನು ನನ್ನನ್ನು ಒಂಟಿಗನಾಗಿ ಬಿಡಲಿಲ್ಲ ಅಂದನು.
30ಆತನು ಈ ಮಾತುಗಳನ್ನಾಡುವಾಗ ಅನೇಕರು ಆತನಲ್ಲಿ ನಂಬಿಕೆಯಿಟ್ಟರು. 31ಆಗ ಯೇಸು ತನ್ನನ್ನು ನಂಬಿದ ಯೆಹೂದ್ಯರಿಗೆ - ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡವರಾದರೆ ನಿಜವಾಗಿ ನನ್ನ ಶಿಷ್ಯರಾಗಿದ್ದು ಸತ್ಯವನ್ನು ತಿಳಿದುಕೊಳ್ಳುವಿರಿ; 32ಮತ್ತು ಸತ್ಯವು ನಿಮ್ಮನ್ನು ಬಿಡುಗಡೆಮಾಡುವದು ಎಂದು ಹೇಳಿದನು. 33ಅದಕ್ಕವರು - ನಾವು ಅಬ್ರಹಾಮನ ಸಂತಾನದವರು; ನಾವು ಯಾರಿಗೂ ಎಂದೂ ದಾಸರಾಗಿಲ್ಲ; ನಿಮಗೆ ಬಿಡುಗಡೆಯಾಗುವದೆಂದು ನೀನು ಹೇಳುವದು ಹೇಗೆ? ಅಂದರು. 34ಅದಕ್ಕೆ ಯೇಸು - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪಾಪಮಾಡುವವರೆಲ್ಲರು ಪಾಪಕ್ಕೆ ದಾಸರಾಗಿದ್ದಾರೆ. 35ದಾಸನು ಮನೆಯಲ್ಲಿ ಶಾಶ್ವತವಾಗಿ ಇರುವದಿಲ್ಲ; ಮಗನು ಶಾಶ್ವತವಾಗಿ ಇರುವನು; 36ಆದದರಿಂದ ಮಗನು ನಿಮ್ಮನ್ನು ಬಿಡುಗಡೆಮಾಡಿದರೆ ನಿಜವಾಗಿ ನಿಮಗೆ ಬಿಡುಗಡೆಯಾಗುವದು. 37ನೀವು ಅಬ್ರಹಾಮನ ಸಂತಾನದವರು ನಿಜ; ಆದರೂ ನನ್ನ ವಾಕ್ಯವು ನಿಮ್ಮಲ್ಲಿ ಸಾಗದೆ ಇರುವ ಕಾರಣ ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ. 38ನಾನು ತಂದೆಯ#8.38 ಅಥವಾ, ನಿಮ್ಮ ತಂದೆಯಿಂದ ಕೇಳಿದ್ದನ್ನು ಮಾಡುವವರಾಗಿದ್ದೀರಿ. ಬಳಿಯಲ್ಲಿ ನೋಡಿದ್ದನ್ನು ಹೇಳುತ್ತೇನೆ; ನೀವೂ ತಂದೆಯಿಂದ ಕೇಳಿದ್ದನ್ನು ಮಾಡಿರಿ ಅಂದನು. 39ಅದಕ್ಕವರು - ನಮ್ಮ ತಂದೆಯು ಅಬ್ರಹಾಮನೇ ಅಂದಾಗ ಯೇಸು ಅವರಿಗೆ - ನೀವು ಅಬ್ರಹಾಮನ ಮಕ್ಕಳಾಗಿದ್ದರೆ ಅಬ್ರಹಾಮನು ಮಾಡಿದಂಥ ಕೃತ್ಯಗಳನ್ನು ಮಾಡುತ್ತಿದ್ದಿರಿ. 40ನೀವು ಹಾಗೆ ಮಾಡದೆ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದವನಾದ ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ; ಅಬ್ರಹಾಮನು ಹೀಗೆ ಮಾಡಲಿಲ್ಲ. 41ನೀವು ನಿಮ್ಮ ತಂದೆಯ ಕೃತ್ಯಗಳನ್ನು ಮಾಡುತ್ತೀರಿ ಅಂದನು. ಅದಕ್ಕವರು - ನಾವು ಹಾದರಕ್ಕೆ ಹುಟ್ಟಿದವರಲ್ಲ; ನಮಗೆ ಒಬ್ಬನೇ ತಂದೆ, ಆತನು ದೇವರೇ ಅಂದರು. 42ಯೇಸು ಅವರಿಗೆ - ದೇವರು ನಿಮ್ಮ ತಂದೆಯಾಗಿದ್ದರೆ, ನನ್ನನ್ನು ಪ್ರೀತಿಸುತ್ತಿದ್ದಿರಿ; ಯಾಕಂದರೆ ನಾನು ದೇವರಿಂದಲೇ ಹೊರಟು ಲೋಕಕ್ಕೆ ಬಂದವನಾಗಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ; ಆತನೇ ನನ್ನನ್ನು ಕಳುಹಿಸಿದ್ದಾನೆ. 43ನೀವು ನನ್ನ ಮಾತನ್ನು ಗ್ರಹಿಸದೆ ಇರುವದಕ್ಕೆ ಕಾರಣವೇನು? ನನ್ನ ಬೋಧನೆಗೆ ಕಿವಿಗೊಡಲಾರದೆ ಇರುವದೇ ಕಾರಣ. 44ಸೈತಾನನು ನಿಮ್ಮ ತಂದೆ; ನೀವು ಆ ತಂದೆಯಿಂದ ಹುಟ್ಟಿದವರಾಗಿದ್ದು ನಿಮ್ಮ ತಂದೆಯ ದುರಿಚ್ಫೆಗಳನ್ನೇ ನಡಿಸಬೇಕೆಂದಿದ್ದೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ; ಅವನಲ್ಲಿ ಸತ್ಯವು ಇಲ್ಲವೇ ಇಲ್ಲ. ಅವನು ಸುಳ್ಳಾಡುವಾಗ ಸ್ವಭಾವಾನುಸಾರವಾಗಿ ಆಡುತ್ತಾನೆ; ಅವನು ಸುಳ್ಳುಗಾರನೂ ಸುಳ್ಳಿಗೆ ಮೂಲಪುರುಷನೂ ಆಗಿದ್ದಾನೆ. 45ನಾನು ಸತ್ಯವನ್ನು ಹೇಳುವವನಾದದರಿಂದ ನೀವು ನನ್ನನ್ನು ನಂಬುವದಿಲ್ಲ. 46ನನ್ನಲ್ಲಿ ಪಾಪವನ್ನು ತೋರಿಸಿಕೊಡುವವರು ನಿಮ್ಮೊಳಗೆ ಯಾರಿದ್ದಾರೆ? ನಾನು ಸತ್ಯವನ್ನು ಹೇಳುವವನಾಗಿರುವಲ್ಲಿ ನೀವು ನನ್ನ ಮಾತನ್ನು ನಂಬದೆ ಇರುವದು ಯಾಕೆ? 47ದೇವರಿಂದ ಹುಟ್ಟಿದವನು ದೇವರ ಮಾತುಗಳನ್ನು ಕೇಳುತ್ತಾನೆ. ನೀವು ದೇವರಿಂದ ಹುಟ್ಟದ ಕಾರಣ ಅವುಗಳನ್ನು ಕೇಳುವದಿಲ್ಲ ಎಂದು ಹೇಳಿದನು.
48ಅದಕ್ಕೆ ಯೆಹೂದ್ಯರು - ನೀನು ಸಮಾರ್ಯನೂ ದೆವ್ವಹಿಡಿದವನೂ ಆಗಿದ್ದೀ ಎಂದು ನಾವು ಹೇಳುವದು ಸರಿಯಲ್ಲವೋ ಎಂದು ಹೇಳಲು 49ಯೇಸು - ನಾನು ದೆವ್ವಹಿಡಿದವನಲ್ಲ, ನನ್ನ ತಂದೆಯನ್ನು ಸನ್ಮಾನಿಸುವವನಾಗಿದ್ದೇನೆ; ಆದರೂ ನೀವು ನನ್ನನ್ನು ಅವಮಾನಪಡಿಸುತ್ತೀರಿ. 50ನನಗೆ ಮಾನಬರಬೇಕೆಂದು ನಾನು ಅಪೇಕ್ಷಿಸುವದಿಲ್ಲ; ನನಗೆ ಮಾನಬರಬೇಕೆಂದು ಅಪೇಕ್ಷಿಸುವವನು ಒಬ್ಬನಿದ್ದಾನೆ; ಆತನೇ ನ್ಯಾಯತೀರಿಸುವನು. 51ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾವನಾದರೂ ನನ್ನ ವಾಕ್ಯವನ್ನು ಕೈಕೊಂಡು ನಡೆದರೆ ಅವನು ಎಂದಿಗೂ ಸಾವನ್ನು ಕಾಣುವದಿಲ್ಲ ಅಂದನು. 52ಅದಕ್ಕೆ ಯೆಹೂದ್ಯರು - ನೀನು ದೆವ್ವಹಿಡಿದವನೆಂದು ಈಗ ನಮಗೆ ತಿಳಿಯಿತು; ಅಬ್ರಹಾಮನು ಸತ್ತನು. ಪ್ರವಾದಿಗಳೂ ಸತ್ತರು; ಆದರೆ ನೀನು - ನನ್ನ ವಾಕ್ಯವನ್ನು ಕೈಕೊಂಡು ನಡೆಯುವವನು ಎಂದಿಗೂ ಸಾವನ್ನು ಅನುಭವಿಸುವದಿಲ್ಲವೆಂದು ಹೇಳುತ್ತೀ. 53ನಮ್ಮ ಮೂಲಪುರುಷನಾದ ಅಬ್ರಹಾಮನಿಗಿಂತ ನೀನು ದೊಡ್ಡವನೋ? ಅವನೂ ಸತ್ತುಹೋದನು, ಪ್ರವಾದಿಗಳೂ ಸತ್ತುಹೋದರು; ನಿನ್ನನ್ನು ಯಾರೆಂತ ಮಾಡಿಕೊಳ್ಳುತ್ತೀ ಎಂದು ಹೇಳಲು 54ಯೇಸು - ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ ನನ್ನ ಮಹಿಮೆ ಹುರುಳಿಲ್ಲದ್ದು; ನನ್ನನ್ನು ಮಹಿಮೆಪಡಿಸುವವನು ನನ್ನ ತಂದೆಯೇ. ನೀವು ಆತನನ್ನು ನಮ್ಮ ದೇವರು ಅನ್ನುತ್ತೀರಿ; ಆದರೂ ನೀವು ಆತನನ್ನು ತಿಳಿಯದೆ ಇದ್ದೀರಿ. 55ನಾನಂತು ಆತನನ್ನು ಬಲ್ಲೆನು; ಆತನನ್ನು ಅರಿಯೆನೆಂದು ಹೇಳಿದರೆ ನಿಮ್ಮ ಹಾಗೆ ಸುಳ್ಳುಗಾರನಾಗುವೆನು; ಆದರೆ ಆತನನ್ನು ತಿಳಿದಿದ್ದೇನೆ, ಆತನ ವಾಕ್ಯವನ್ನು ಕೈಕೊಂಡು ನಡೆಯುತ್ತೇನೆ. 56ನಿಮ್ಮ ಮೂಲಪುರುಷನಾದ ಅಬ್ರಹಾಮನು ನನ್ನ ದಿನವನ್ನು ತಾನು ನೋಡೇನೆಂದು ಉಲ್ಲಾಸಪಟ್ಟನು; ಅದನ್ನು ನೋಡಿ ಸಂತೋಷಗೊಂಡನು ಅಂದನು. 57ಅದಕ್ಕೆ ಯೆಹೂದ್ಯರು - ನಿನಗೆ ಇನ್ನೂ ಐವತ್ತು ವರುಷವಾಗಿಲ್ಲ; ಅಬ್ರಹಾಮನನ್ನು ನೋಡಿದ್ದೀಯಾ? ಅಂದಾಗ 58ಯೇಸು - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನು ಹುಟ್ಟುವದಕ್ಕಿಂತ ಮುಂಚಿನಿಂದಲೂ ನಾನು ಇದ್ದೇನೆ ಅಂದನು. 59ಅವರು ಈ ಮಾತನ್ನು ಕೇಳಿ ಆತನನ್ನು ಕೊಲ್ಲುವದಕ್ಕಾಗಿ ಕಲ್ಲು ತಕ್ಕೊಳ್ಳಲು ಯೇಸು ಅಡಗಿಕೊಂಡು ದೇವಾಲಯದೊಳಗಿಂದ ಹೊರಟುಹೋದನು.
נבחרו כעת:
ಯೋಹಾನ 8: KANJV-BSI
הדגשה
שתף
העתק
רוצים לשמור את ההדגשות שלכם בכל המכשירים שלכם? הירשמו או היכנסו
Kannada J.V. Bible © The Bible Society of India, 2016.
Used by permission. All rights reserved worldwide.