1
ಯೋಹಾ 5:24
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ.
Համեմատել
Ուսումնասիրեք ಯೋಹಾ 5:24
2
ಯೋಹಾ 5:6
ಅವನು ಬಿದ್ದುಕೊಂಡಿರುವುದನ್ನು ಯೇಸು ನೋಡಿ ಇವನಿಗೆ ಹೀಗಾಗಿ ಬಹು ಕಾಲವಾಗಿದೆ ಎಂದು ಅರಿತು ಅವನಿಗೆ “ನಿನಗೆ ಗುಣಹೊಂದಲು ಮನಸ್ಸಿದೆಯೋ?” ಎಂದು ಕೇಳಿದನು.
Ուսումնասիրեք ಯೋಹಾ 5:6
3
ಯೋಹಾ 5:39-40
ಧರ್ಮಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ತಿಳಿದು ಅವುಗಳನ್ನು ಪರಿಶೋಧಿಸುತ್ತಿರಾ? ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿ ಕೊಡುವವುಗಳಾಗಿವೆ. ಆದರೂ ಜೀವ ಹೊಂದುವುದಕ್ಕಾಗಿ ನನ್ನ ಬಳಿಗೆ ಬರುವುದಕ್ಕೆ ನಿಮಗೆ ಮನಸ್ಸಿಲ್ಲ.
Ուսումնասիրեք ಯೋಹಾ 5:39-40
4
ಯೋಹಾ 5:8-9
ಯೇಸು ಅವನಿಗೆ, “ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ” ಎಂದು ಹೇಳಿದನು. ಕೂಡಲೇ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು. ಅಂದು ಸಬ್ಬತ್ ದಿನವಾಗಿತ್ತು
Ուսումնասիրեք ಯೋಹಾ 5:8-9
5
ಯೋಹಾ 5:19
ಯೇಸು ಅವರಿಗೆ, “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವುದನ್ನು ಕಂಡು ಮಗನು ಮಾಡುತ್ತಾನೆಯೇ, ಹೊರತು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು. ಏಕೆಂದರೆ ಆತನು ಯಾವುದನ್ನೆಲ್ಲಾ ಮಾಡುವನೋ ಹಾಗೆಯೇ ಮಗನೂ ಮಾಡುತ್ತಾನೆ.
Ուսումնասիրեք ಯೋಹಾ 5:19
Գլխավոր
Աստվածաշունչ
Ծրագրեր
Տեսանյութեր