ಯೋಹಾ 17:20-21

ಯೋಹಾ 17:20-21 IRVKAN

“ಆದರೆ ಇವರಿಗೋಸ್ಕರ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನನ್ನು ನಂಬುವವರಿಗೋಸ್ಕರವಾಗಿಯೂ ನಿನ್ನನ್ನು ಬೇಡಿಕೊಳ್ಳುತ್ತೇನೆ. ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆಯೇ ಅವರು ಸಹ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ. ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವುದಕ್ಕಾಗಿ, ಅವರೆಲ್ಲರೂ ನಮ್ಮಲ್ಲಿ ಒಂದಾಗಿರಲಿ ಎಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.