1
ಆದಿಕಾಂಡ 3:6
ಕನ್ನಡ ಸಮಕಾಲಿಕ ಅನುವಾದ
ಆಗ ಸ್ತ್ರೀಯು, ಆ ಮರದ ಹಣ್ಣು ಆಹಾರಕ್ಕೆ ಒಳ್ಳೆಯದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು, ಆ ಹಣ್ಣನ್ನು ತೆಗೆದುಕೊಂಡು ತಿಂದಳು. ತನ್ನ ಸಂಗಡ ಇದ್ದ ಗಂಡನಿಗೂ ಕೊಟ್ಟಳು, ಅವನೂ ತಿಂದನು.
比較
ಆದಿಕಾಂಡ 3:6で検索
2
ಆದಿಕಾಂಡ 3:1
ಯೆಹೋವ ದೇವರು ಸೃಷ್ಟಿಸಿದ ಅಡವಿಯ ಎಲ್ಲಾ ಕಾಡುಮೃಗಗಳಿಗಿಂತ ಸರ್ಪವು ಬಹು ಯುಕ್ತಿಯುಳ್ಳದ್ದಾಗಿತ್ತು. ಅದು ಸ್ತ್ರೀಗೆ, “ನೀವು ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ತಿನ್ನಬಾರದೆಂದು ದೇವರು ಹೇಳಿದ್ದು ನಿಜವೋ?” ಎಂದು ಕೇಳಿತು.
ಆದಿಕಾಂಡ 3:1で検索
3
ಆದಿಕಾಂಡ 3:15
ನಾನು ನಿನಗೂ ಸ್ತ್ರೀಗೂ ನಿಮ್ಮ ಸಂತಾನಕ್ಕೂ ಆಕೆಯ ಸಂತಾನಕ್ಕೂ ವೈರತ್ವವನ್ನು ಇಡುವೆನು. ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು ಕಚ್ಚುವಿ.”
ಆದಿಕಾಂಡ 3:15で検索
4
ಆದಿಕಾಂಡ 3:16
ಬಳಿಕ ದೇವರು ಸ್ತ್ರೀಗೆ ಹೀಗೆ ಹೇಳಿದರು, “ನಾನು ನಿನ್ನ ಗರ್ಭ ವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು. ನೀನು ನೋವಿನಿಂದ ಮಕ್ಕಳನ್ನು ಹೆರುವಿ. ನಿನ್ನ ಗಂಡನ ಮೇಲೆ ನಿನ್ನ ಬಯಕೆ ಇರುವುದು. ಅವನು ನಿನ್ನನ್ನು ಆಳುವನು.”
ಆದಿಕಾಂಡ 3:16で検索
5
ಆದಿಕಾಂಡ 3:19
ನೀನು ಪುನಃ ಮಣ್ಣಿಗೆ ಸೇರುವ ತನಕ, ಬೆವರಿಡುತ್ತಾ ಆಹಾರವನ್ನು ಉಣ್ಣುವೆ. ನೀನು ಮಣ್ಣಿನಿಂದ ತೆಗೆದವನಾಗಿರುವುದರಿಂದ ನೀನು ಮಣ್ಣೇ. ನೀನು ಪುನಃ ಮಣ್ಣಿಗೆ ಸೇರತಕ್ಕವನು.”
ಆದಿಕಾಂಡ 3:19で検索
6
ಆದಿಕಾಂಡ 3:17
ಅನಂತರ ದೇವರು ಆದಾಮನಿಗೆ ಹೀಗೆ ಹೇಳಿದರು, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, “ನಿನ್ನ ನಿಮಿತ್ತ ಭೂಮಿಗೆ ಶಾಪ ಬಂತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ದುಡಿದು, ಅದರ ಹುಟ್ಟುವಳಿಯನ್ನು ಉಣ್ಣುವೆ.
ಆದಿಕಾಂಡ 3:17で検索
7
ಆದಿಕಾಂಡ 3:11
ಅದಕ್ಕೆ ದೇವರು, “ನೀನು ಬೆತ್ತಲೆಯಾಗಿದ್ದೀ ಎಂದು ನಿನಗೆ ತಿಳಿಸಿದವರು ಯಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದೀಯೋ?” ಎಂದು ಕೇಳಿದರು.
ಆದಿಕಾಂಡ 3:11で検索
8
ಆದಿಕಾಂಡ 3:24
ಹೀಗೆ ಅವರು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷದ ದಾರಿಯನ್ನು ಕಾಯುವುದಕ್ಕೆ ಏದೆನ್ ತೋಟದ ಪೂರ್ವದಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಖಡ್ಗವನ್ನೂ ಇರಿಸಿದರು.
ಆದಿಕಾಂಡ 3:24で検索
9
ಆದಿಕಾಂಡ 3:20
ಆದಾಮನು ತನ್ನ ಹೆಂಡತಿಯ ಹೆಸರನ್ನು ಹವ್ವ ಎಂದು ಕರೆದನು. ಏಕೆಂದರೆ ಆಕೆಯೇ ಬದುಕಿದವರಿಗೆಲ್ಲಾ ತಾಯಿಯಾಗಿದ್ದಾಳೆ.
ಆದಿಕಾಂಡ 3:20で検索
ホーム
聖書
読書プラン
ビデオ