ಆದಿಕಾಂಡ 6:1-4

ಆದಿಕಾಂಡ 6:1-4 KANJV-BSI

ಭೂವಿುಯ ಮೇಲೆ ಜನರು ಹೆಚ್ಚುತ್ತಾ ಅವರಿಗೆ ಹೆಣ್ಣು ಮಕ್ಕಳು ಹುಟ್ಟಲು ದೇವಪುತ್ರರು ಮನುಷ್ಯಪುತ್ರಿಯರ ಸೌಂದರ್ಯವನ್ನು ನೋಡಿ ತಮಗೆ ಇಷ್ಟರಾದವರನ್ನು ಹೆಂಡರನ್ನಾಗಿ ಮಾಡಿಕೊಂಡರು. ಆಗ ಯೆಹೋವನು - ನನ್ನ ಆತ್ಮವು ಮನುಷ್ಯರಲ್ಲಿ ಶಾಶ್ವತವಾಗಿರುವದಿಲ್ಲ; ಅವರು ಭ್ರಷ್ಟರಾದದರಿಂದ ಮರ್ತ್ಯರೇ. ಅವರ ಆಯುಷ್ಯವು ನೂರ ಇಪ್ಪತ್ತು ವರುಷವಾಗಿರಲಿ ಅಂದನು. ಆ ಕಾಲದಲ್ಲಿ ಅಂದರೆ ದೇವಪುತ್ರರು ಮನುಷ್ಯಪುತ್ರಿಯರನ್ನು ಕೂಡಿ ಅವರಲ್ಲಿ ಮಕ್ಕಳನ್ನು ಪಡೆಯುವ ಕಾಲದಲ್ಲಿ ಮಹಾಶರೀರಿಗಳು ಭೂವಿುಯ ಮೇಲಿದ್ದರು; ಅನಂತರದಲ್ಲಿಯೂ ಇದ್ದರು. ಪೂರ್ವದಲ್ಲಿ ಹೆಸರುಗೊಂಡ ಪರಾಕ್ರಮಶಾಲಿಗಳು ಇವರೇ.

ಆದಿಕಾಂಡ 6 വായിക്കുക