ಯೋಹಾನನ ಸುವಾರ್ತೆ 8:10-11

ಯೋಹಾನನ ಸುವಾರ್ತೆ 8:10-11 KERV

ಯೇಸು ನೆಟ್ಟಗೆ ಕುಳಿತುಕೊಂಡು, “ಅಮ್ಮಾ, ನಿನ್ನ ಮೇಲೆ ತಪ್ಪು ಹೊರಿಸಿದವರು ಎಲ್ಲಿದ್ದಾರೆ? ಅವರಲ್ಲಿ ಒಬ್ಬರಾದರೂ ನಿನಗೆ ಶಿಕ್ಷೆ ವಿಧಿಸಲಿಲ್ಲವೇ?” ಎಂದು ಕೇಳಿದನು. ಆ ಸ್ತ್ರೀಯು, “ಸ್ವಾಮೀ, ಅವರಲ್ಲಿ ಯಾರೂ ನನಗೆ ತೀರ್ಪು ನೀಡಲಿಲ್ಲ” ಎಂದು ಉತ್ತರಕೊಟ್ಟಳು. ಯೇಸು ಆಕೆಗೆ, “ಆದ್ದರಿಂದ ನಾನು ಸಹ ನಿನಗೆ ತೀರ್ಪು ನೀಡುವುದಿಲ್ಲ. ಈಗ ನೀನು ಹೋಗಬಹುದು, ಆದರೆ ಇನ್ನು ಮುಂದೆ ಪಾಪ ಮಾಡಬೇಡ” ಎಂದು ಹೇಳಿದನು.