YouVersion လိုဂို
ရွာရန္ အိုင္ကြန္

ಆದಿಕಾಂಡ 1:26-27

ಆದಿಕಾಂಡ 1:26-27 KANCLBSI

ಅದಾದನಂತರ ದೇವರು, “ನಮ್ಮಂತೆಯೇ ಇರುವ ಹಾಗು ನಮ್ಮನ್ನು ಹೋಲುವ, ಮನುಷ್ಯರನ್ನು ಉಂಟುಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ ದೊಡ್ಡ - ಚಿಕ್ಕ ಸಾಕುಪ್ರಾಣಿ ಹಾಗು ಕಾಡುಮೃಗಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳ ಮೇಲೆಯೂ ದೊರೆತನ ಮಾಡಲಿ,” ಎಂದರು. ಹೀಗೆ ದೇವರು: ಸೃಷ್ಟಿಸಿದರು ನರರನ್ನು ತಮ್ಮ ಹೋಲಿಕೆಯಲ್ಲಿ ಸೃಷ್ಟಿಸಿದರವರನ್ನು ದೇವಾನುರೂಪದಲ್ಲಿ ಸೃಷ್ಟಿಸಿದರವರನ್ನು ಸ್ತ್ರೀಪುರುಷರನ್ನಾಗಿ.