1
ಯೋಹಾ 10:10
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಕಳ್ಳನಾದರೋ ಕದ್ದುಕೊಳ್ಳುವುದಕ್ಕೂ, ಕೊಯ್ಯುವುದಕ್ಕೂ ಮತ್ತು ನಾಶಮಾಡುವುದಕ್ಕೂ ಬರುತ್ತಾನೆಯೇ ಹೊರತು ಮತ್ತಾವುದಕ್ಕೂ ಬರುವುದಿಲ್ಲ. ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿರಬೇಕೆಂತಲೂ ಬಂದೆನು.
तुलना
अन्वेषण गर्नुहोस् ಯೋಹಾ 10:10
2
ಯೋಹಾ 10:11
“ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ತನ್ನ ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.
अन्वेषण गर्नुहोस् ಯೋಹಾ 10:11
3
ಯೋಹಾ 10:27
ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.
अन्वेषण गर्नुहोस् ಯೋಹಾ 10:27
4
ಯೋಹಾ 10:28
ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದೇ ಇಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು.
अन्वेषण गर्नुहोस् ಯೋಹಾ 10:28
5
ಯೋಹಾ 10:9
ನಾನೇ ಆ ಬಾಗಿಲು. ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಪ್ರವೇಶಿಸಿದರೆ ಅವನು ಸುರಕ್ಷಿತನಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು ಮತ್ತು ಮೇವನ್ನು ಕಂಡುಕೊಳ್ಳುವನು.
अन्वेषण गर्नुहोस् ಯೋಹಾ 10:9
6
ಯೋಹಾ 10:14
ನಾನೇ ನಿಜವಾದ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ಬಲ್ಲವನಾಗಿದ್ದೇನೆ. ನನ್ನ ಕುರಿಗಳು ನನ್ನನ್ನು ಬಲ್ಲವು.
अन्वेषण गर्नुहोस् ಯೋಹಾ 10:14
7
ಯೋಹಾ 10:29-30
ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತ ಮಹೋನ್ನತನು. ಅವುಗಳನ್ನು ನನ್ನ ತಂದೆಯ ಕೈಯಿಂದ ಯಾರೂ ಕಸಿದುಕೊಳ್ಳಲಾರರು. ನಾನೂ ಮತ್ತು ನನ್ನ ತಂದೆಯೂ ಒಂದಾಗಿದ್ದೇವೆ” ಎಂದನು.
अन्वेषण गर्नुहोस् ಯೋಹಾ 10:29-30
8
ಯೋಹಾ 10:15
ತಂದೆಯು ನನ್ನನ್ನು ತಿಳಿದಿರುವಂತೆಯೇ, ನಾನು ತಂದೆಯನ್ನು ತಿಳಿದಿದ್ದೇನೆ; ಮತ್ತು ನಾನು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನೇ ಕೊಡುತ್ತೇನೆ.
अन्वेषण गर्नुहोस् ಯೋಹಾ 10:15
9
ಯೋಹಾ 10:18
ನನ್ನ ಪ್ರಾಣವನ್ನು ಯಾರೂ ನನ್ನಿಂದ ತೆಗೆದುಕೊಳ್ಳುವುದಿಲ್ಲ. ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ಅದನ್ನು ಕೊಡುವುದಕ್ಕೆ ನನಗೆ ಅಧಿಕಾರ ಉಂಟು. ಅದನ್ನು ಪುನಃ ಪಡೆದುಕೊಳ್ಳುವುದಕ್ಕೂ ನನಗೆ ಅಧಿಕಾರವಿದೆ. ಈ ಆಜ್ಞೆಯನ್ನು ನಾನು ನನ್ನ ತಂದೆಯಿಂದ ಹೊಂದಿದ್ದೇನೆ” ಎಂದನು.
अन्वेषण गर्नुहोस् ಯೋಹಾ 10:18
10
ಯೋಹಾ 10:7
ಆಗ ಯೇಸು ಪುನಃ ಅವರಿಗೆ, “ನಿಮಗೆ ನಿಜನಿಜವಾಗಿ ಹೇಳುತ್ತೇನೆ; ಕುರಿಗಳಿಗೆ ನಾನೇ ಬಾಗಿಲಾಗಿದ್ದೇನೆ
अन्वेषण गर्नुहोस् ಯೋಹಾ 10:7
11
ಯೋಹಾ 10:12
ಕೂಲಿಯಾಳು ಕುರಿಗಳ ಕುರುಬನೂ ಒಡೆಯನೂ ಆಗಿರದೆ, ಅವನು ತೋಳ ಬರುವುದನ್ನು ನೋಡುತ್ತಲೇ ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ. ಆಗ ತೋಳವು ಕುರಿಗಳನ್ನು ಹಿಡಿದುಕೊಂಡು ಮಂದೆಯನ್ನು ಚದರಿಸುತ್ತದೆ.
अन्वेषण गर्नुहोस् ಯೋಹಾ 10:12
12
ಯೋಹಾ 10:1
“ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಕುರಿಹಟ್ಟಿಯೊಳಗೆ ಬಾಗಿಲಿನಿಂದ ಬಾರದೆ, ಬೇರೆ ಕಡೆಯಿಂದ ಹತ್ತಿ ಬರುವವನು ಕಳ್ಳನೂ, ದರೋಡೆಕೋರನೂ ಆಗಿದ್ದಾನೆ.
अन्वेषण गर्नुहोस् ಯೋಹಾ 10:1
होम
बाइबल
योजनाहरू
भिडियोहरू