1
ಯೋಹಾ 19:30
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಯೇಸು ಆ ಹುಳಿರಸವನ್ನು ತೆಗೆದುಕೊಂಡ ಮೇಲೆ, “ತೀರಿತು” ಎಂದು ಹೇಳಿ ತಲೆ ಬಾಗಿಸಿ ತನ್ನ ಆತ್ಮವನ್ನು ಒಪ್ಪಿಸಿಕೊಟ್ಟನು.
तुलना
अन्वेषण गर्नुहोस् ಯೋಹಾ 19:30
2
ಯೋಹಾ 19:28
ಇದಾದ ಮೇಲೆ ಯೇಸು ಈಗ ಎಲ್ಲ ಪೂರ್ತಿಯಾಗಿದೆಯೆಂದು ತಿಳಿದು, ಧರ್ಮಶಾಸ್ತ್ರದ ಮಾತು ನೆರವೇರುವಂತೆ, “ನನಗೆ ನೀರಡಿಕೆಯಾಗಿದೆ” ಎಂದನು.
अन्वेषण गर्नुहोस् ಯೋಹಾ 19:28
3
ಯೋಹಾ 19:26-27
ಯೇಸು ತನ್ನ ತಾಯಿಯನ್ನೂ ಹತ್ತಿರದಲ್ಲಿ ನಿಂತಿದ್ದ ತನ್ನ ಪ್ರೀತಿಯ ಶಿಷ್ಯನನ್ನೂ ನೋಡಿ ತನ್ನ ತಾಯಿಗೆ, “ಸ್ತ್ರೀಯೇ, ಇಗೋ, ನಿನ್ನ ಮಗನು” ಎಂದು ಹೇಳಿದನು. ತರುವಾಯ ಆ ಶಿಷ್ಯನಿಗೆ, “ಇಗೋ, ನಿನ್ನ ತಾಯಿ” ಎಂದು ಹೇಳಿದನು. ಆ ಗಳಿಗೆಯಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲೇ ಇರಿಸಿಕೊಂಡನು.
अन्वेषण गर्नुहोस् ಯೋಹಾ 19:26-27
4
ಯೋಹಾ 19:33-34
ಆದರೆ ಯೇಸುವಿನ ಬಳಿಗೆ ಬಂದಾಗ ಆತನು ಆಗಲೇ ಸತ್ತಿರುವುದನ್ನು ಅವರು ಕಂಡು ಆತನ ಕಾಲುಗಳನ್ನು ಮುರಿಯಲಿಲ್ಲ. ಆದರೆ ಸಿಪಾಯಿಗಳಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು. ಕೂಡಲೆ ರಕ್ತವೂ ನೀರೂ ಹೊರಗೆ ಬಂದವು.
अन्वेषण गर्नुहोस् ಯೋಹಾ 19:33-34
5
ಯೋಹಾ 19:36-37
ಏಕೆಂದರೆ “ಆತನ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು” ಎಂದು ಧರ್ಮಶಾಸ್ತ್ರದಲ್ಲಿ ಬರೆದ ಮಾತು ನೆರವೇರುವಂತೆ ಇದಾಯಿತು. “ಅವರು ತಾವು ಇರಿದವನನ್ನು ದೃಷ್ಟಿಸಿನೋಡುವರು” ಎಂದು ಧರ್ಮಶಾಸ್ತ್ರದಲ್ಲಿ ಮತ್ತೊಂದು ಮಾತು ಹೇಳಿ ಅದೆ.
अन्वेषण गर्नुहोस् ಯೋಹಾ 19:36-37
6
ಯೋಹಾ 19:17
ಆತನು ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು “ಕಪಾಲಸ್ಥಳ” ಎಂಬ ಸ್ಥಳಕ್ಕೆ ಹೋದನು. ಇದನ್ನು ಇಬ್ರಿಯ ಭಾಷೆಯಲ್ಲಿ “ಗೊಲ್ಗೊಥಾ” ಎಂದು ಕರೆಯುತ್ತಾರೆ.
अन्वेषण गर्नुहोस् ಯೋಹಾ 19:17
7
ಯೋಹಾ 19:2
ಸಿಪಾಯಿಗಳು ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು, ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಆತನಿಗೆ ತೊಡಿಸಿ
अन्वेषण गर्नुहोस् ಯೋಹಾ 19:2
होम
बाइबल
योजनाहरू
भिडियोहरू