ಯೋಹಾ 2
2
ಯೇಸು ಮಾಡಿದ ಮೊದಲನೆಯ ಸೂಚಕಕಾರ್ಯ
1ಮೂರನೆಯ ದಿನದಲ್ಲಿ ಗಲಿಲಾಯದ ಕಾನಾ ಎಂಬ ಊರಿನಲ್ಲಿ ಒಂದು ಮದುವೆ ನಡೆಯಿತು. ಯೇಸುವಿನ ತಾಯಿ ಅಲ್ಲಿ ಇದ್ದಳು. 2ಯೇಸುವನ್ನೂ ಆತನ ಶಿಷ್ಯರನ್ನೂ ಸಹ ಮದುವೆಗೆ ಕರೆದಿದ್ದರು. 3ಅಲ್ಲಿ ದ್ರಾಕ್ಷಾರಸವು #2:3 ಅಥವಾ, ಮುಗಿದುಹೋದಾಗ, ಕಡಿಮೆ ಆಗಿರುವಾಗ. ಸಾಲದೆ ಹೋದಾಗ, ಯೇಸುವಿನ ತಾಯಿಯು ಆತನಿಗೆ “ಅವರಲ್ಲಿ ದ್ರಾಕ್ಷಾರಸವು ಮುಗಿದುಹೋಗಿದೆ” ಎಂದು ತಿಳಿದಳು. 4ಯೇಸು ಆಕೆಗೆ #2:4 ಮೂಲ: ಸ್ತ್ರೀ ಎಂದು. “ಅಮ್ಮಾ, ಅದಕ್ಕೆ ನಾನೇನು ಮಾಡಲಿ? ನನ್ನ ಸಮಯವು ಇನ್ನೂ ಬಂದಿಲ್ಲ” ಎಂದು ಉತ್ತರಕೊಟ್ಟನು. 5ಆತನ ತಾಯಿಯು ಸೇವಕರಿಗೆ “ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ” ಎಂದಳು. 6ಯೆಹೂದ್ಯರ ಶುದ್ಧಾಚಾರ ಪದ್ಧತಿಯ ಪ್ರಕಾರ ಅಲ್ಲಿ ಆರು ಕಲ್ಲಿನ ಬಾನೆಗಳು ಇದ್ದವು. ಪ್ರತಿಯೊಂದು ಬಾನೆಯೂ ಎರಡು ಇಲ್ಲವೆ ಮೂರು #2:6 ಒಂದು ಅಳತೆ, ಸುಮಾರು 40 ಲೀಟರ್ ದ್ರವ ಹಿಡಿಯುವ ಪಾತ್ರೆ. ಕೊಳಗ ನೀರು ಹಿಡಿಯುವ ಅಳತೆಯುಳ್ಳದ್ದಾಗಿತ್ತು. 7ಯೇಸು ಅವರಿಗೆ, “ಆ ಬಾನೆಗಳಲ್ಲಿ ನೀರು ತುಂಬಿರಿ” ಎಂದನು. ಅವರು ಅವುಗಳನ್ನು ಕಂಠದವರೆಗೆ ತುಂಬಿದರು. 8ಅನಂತರ ಆತನು ಸೇವಕರಿಗೆ, “ಈಗ ಇದನ್ನು ತೆಗೆದುಕೊಂಡು ಹೋಗಿ ಔತಣದ ಮೇಲ್ವಿಚಾರಕನಿಗೆ ಕೊಡಿರಿ” ಎಂದು ಹೇಳಿದಾಗ, ಅವರು ತೆಗೆದುಕೊಂಡು ಹೋಗಿ ಕೊಟ್ಟರು. 9ಔತಣದ ಮೇಲ್ವಿಚಾರಕನು ದ್ರಾಕ್ಷಾರಸವಾಗಿ ಮಾರ್ಪಟ್ಟಿದ್ದ ನೀರನ್ನು ರುಚಿನೋಡಿದಾಗ, ಅದು ಎಲ್ಲಿಂದ ಬಂದಿತೆಂದು ಅವನಿಗೆ ತಿಳಿದಿರಲಿಲ್ಲ, ಆದರೆ ನೀರನ್ನು ತೋಡಿಕೊಂಡು ತಂದ ಸೇವಕರಿಗೆ ತಿಳಿದಿತ್ತು. ಔತಣದ ಮೇಲ್ವಿಚಾರಕನು ಮದುಮಗನನ್ನು ಕರೆದು, 10“ಎಲ್ಲರೂ ಉತ್ತಮವಾದ ದ್ರಾಕ್ಷಾರಸವನ್ನು ಮೊದಲು ಕೊಟ್ಟು ಅಮಲೇರಿದ ಮೇಲೆ ಸಾಧಾರಣವಾದ ದ್ರಾಕ್ಷಾರಸವನ್ನು ಕೊಡುತ್ತಾರೆ. ನೀನಾದರೋ ಉತ್ತಮವಾದ ದ್ರಾಕ್ಷಾರಸವನ್ನು ಇದುವರೆಗೂ ಇಟ್ಟುಕೊಂಡಿರುವೆ” ಎಂದನು. 11ಯೇಸು ಈ ಮೊದಲನೆಯ ಸೂಚಕ ಕಾರ್ಯವನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ, ತನ್ನ ಮಹಿಮೆಯನ್ನು ತೋರ್ಪಡಿಸಿದನು. ಇದರಿಂದ ಆತನ ಶಿಷ್ಯರು ಆತನಲ್ಲಿ ನಂಬಿಕೆಯಿಟ್ಟರು.
ಯೇಸು ದೇವಾಲಯದಲ್ಲಿ ವ್ಯಾಪಾರವನ್ನು ನಿಲ್ಲಿಸಿದ್ದು
12ಇದಾದ ಮೇಲೆ ಯೇಸುವೂ, ಆತನ ತಾಯಿಯೂ, ತಮ್ಮಂದಿರೂ ಮತ್ತು ಆತನ ಶಿಷ್ಯರೂ ಘಟ್ಟಾ ಇಳಿದು ಕಪೆರ್ನೌಮಿಗೆ ಹೋಗಿ ಅಲ್ಲಿ ಅವರು ಕೆಲವು ದಿನ ಇದ್ದರು.
13ಆಗ ಯೆಹೂದ್ಯರ ಪಸ್ಕ ಹಬ್ಬವು ಹತ್ತಿರ ಬಂದುದರಿಂದ ಯೇಸು ಯೆರೂಸಲೇಮಿಗೆ ಹೋದನು. 14ಆತನು #2:14 ಮತ್ತಾ 21:12,13; ಮಾರ್ಕ 11:15-17; ಲೂಕ 19:45,46:ದೇವಾಲಯದಲ್ಲಿ ದನ, ಕುರಿ, ಪಾರಿವಾಳಗಳನ್ನು ಮಾರುವವರೂ, ನಾಣ್ಯ ವಿನಿಮಯ ಮಾಡುವವರು ವ್ಯಾಪಾರಕ್ಕೆ ಕುಳಿತಿರುವುದನ್ನು ಕಂಡನು. 15ಆತನು ಹಗ್ಗದಿಂದ ಚಾವಟಿ ಮಾಡಿ ಕುರಿ, ದನ ಸಹಿತ ಎಲ್ಲವನ್ನೂ, ದೇವಾಲಯದ ಹೊರಕ್ಕೆ ಅಟ್ಟಿ, ನಾಣ್ಯವಿನಿಮಯ ಮಾಡುವವರ ಮೇಜುಗಳನ್ನು ಉರುಳಿಸಿ, ನಾಣ್ಯಗಳನೆಲ್ಲ ಚೆಲ್ಲಿದನು. 16ಪಾರಿವಾಳ ಮಾರುವವರಿಗೆ ಸಿಟ್ಟಿನಿಂದ “ಇವುಗಳನ್ನು ಇಲ್ಲಿಂದ ತೆಗೆದುಕೊಂಡು ಹೋಗಿರಿ. ನನ್ನ ತಂದೆಯ ಮನೆಯನ್ನು ವ್ಯಾಪಾರದ ಸ್ಥಳವನ್ನಾಗಿ ಮಾಡುವುದನ್ನು ನಿಲ್ಲಿಸಿರಿ” ಎಂದು ಗದರಿಸಿದನು. 17ಆಗ #2:17 ಕೀರ್ತ 69:9:“ನಿನ್ನ ಆಲಯದ ಮೇಲಿನ ಅಭಿಮಾನವು ಬೆಂಕಿಯಂತೆ ನನ್ನನ್ನು ದಹಿಸುತ್ತಿದೆ” ಎಂದು ಬರೆದಿರುವುದನ್ನು ಆತನ ಶಿಷ್ಯರು ನೆನಪುಮಾಡಿಕೊಂಡರು. 18ಆಗ ಅಲ್ಲಿದ್ದ ಯೆಹೂದ್ಯರು ಆತನಿಗೆ “ಇದನ್ನೆಲ್ಲಾ ಮಾಡುವ ಅಧಿಕಾರ ನಿನಗಿದೆ ಎಂಬುದಕ್ಕೆ ಯಾವ ಸೂಚಕಕಾರ್ಯವನ್ನು ತೋರಿಸುತ್ತೀ?” ಎಂದು ಕೇಳಿದರು. 19ಅದಕ್ಕೆ ಯೇಸು #2:19 ಮತ್ತಾ 26:61:“ಈ ದೇವಾಲಯವನ್ನು ಕೆಡವಿರಿ, ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು” ಎಂದು ಉತ್ತರಕೊಟ್ಟನು. 20ಅದಕ್ಕೆ ಯೆಹೂದ್ಯರು, “ಈ ದೇವಾಲಯವನ್ನು ಕಟ್ಟುವುದಕ್ಕೆ ನಲವತ್ತಾರು ವರ್ಷಗಳು ಹಿಡಿದವು. ನೀನು ಮೂರು ದಿನಗಳಲ್ಲಿ ಇದನ್ನು ಎಬ್ಬಿಸುವಿಯೋ?” ಎಂದರು. 21ಆದರೆ ಆತನು ತನ್ನ ದೇಹವೆಂಬ ದೇವಾಲಯದ ಕುರಿತು ಆ ಮಾತನ್ನು ಹೇಳಿದನು. 22ಆದುದರಿಂದ ಆತನು ಸತ್ತವರೊಳಗಿಂದ ಎದ್ದ ಮೇಲೆ ಈ ಮಾತು ಆತನ ಶಿಷ್ಯರ ನೆನಪಿಗೆ ಬಂದು ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನೂ, ಮತ್ತು ಯೇಸು ತಮಗೆ ಹೇಳಿದ ಮಾತನ್ನೂ ಅವರು ನಂಬಿದರು.
ಯೇಸು ಒಬ್ಬ ಶಾಸ್ತ್ರಿಗೆ ಪುನರ್ಜನ್ಮದ ವಿಷಯವಾಗಿ ಉಪದೇಶ ಮಾಡಿದ್ದು
23ಆತನು ಪಸ್ಕಹಬ್ಬದ ಜಾತ್ರೆಯಲ್ಲಿ ಯೆರೂಸಲೇಮಿನಲ್ಲಿ ಇದ್ದಾಗ ಬಹು ಜನರು ಆತನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು. 24ಆದರೆ ಯೇಸು ಎಲ್ಲವನ್ನೂ ಬಲ್ಲವನಾದುದರಿಂದ ಅವರಿಗೆ ವಶವಾಗಲಿಲ್ಲ, 25ಆತನು ಪ್ರತಿ ಮನುಷ್ಯನ ಆಂತರ್ಯವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿ ಕೊಡಬೇಕಾದ ಅಗತ್ಯವಿರಲಿಲ್ಲ.
अहिले सेलेक्ट गरिएको:
ಯೋಹಾ 2: IRVKan
हाइलाइट
शेयर गर्नुहोस्
कपी गर्नुहोस्
तपाईंका हाइलाइटहरू तपाईंका सबै यन्त्रहरूमा सुरक्षित गर्न चाहनुहुन्छ? साइन अप वा साइन इन गर्नुहोस्
KAN-IRV
Creative Commons License
Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.