ಇದಲ್ಲದೆ ಅವನಿಗೆ ದೇವರು, “ನಾನೇ ಸರ್ವವಲ್ಲಭನಾದ ದೇವರು; ನೀನು ವೃದ್ಧಿಯಾಗಿ ಬಹುಸಂತಾನವುಳ್ಳವನಾಗು. ನಿನ್ನಿಂದ ರಾಷ್ಟ್ರವೊಂದು ಉಂಟಾಗುವುದು, ಅನೇಕ ರಾಷ್ಟ್ರಗಳೂ ರಾಜರುಗಳೂ ನಿನ್ನಿಂದ ಹುಟ್ಟುವರು. ನಾನು ಅಬ್ರಹಾಮ್, ಇಸಾಕರಿಗೆ ವಾಗ್ಡಾನ ಮಾಡಿದ ನಾಡನ್ನು ನಿನಗೂ ನಿನ್ನ ತರುವಾಯ ಬರುವ ನಿನ್ನ ಸಂತತಿಗೂ ಕೊಡುವೆನು,” ಎಂದು ಹೇಳಿದರು.