ಇಗೋ, ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ. ಆತನಿಗೆ ‘ಯೇಸು’ ಎಂಬ ಹೆಸರಿಡಬೇಕು; ಆತನು ಮಹಾಪುರುಷನಾಗುವನು; ಪರಾತ್ಪರ ದೇವರ ಪುತ್ರ ಎನಿಸಿಕೊಳ್ಳುವನು. ಪಿತಾಮಹ ದಾವೀದರಸನ ಸಿಂಹಾಸನವನ್ನು ಸರ್ವೇಶ್ವರನಾದ ದೇವರು ಆತನಿಗೆ ಕೊಡುವರು. ಯಕೋಬನ ವಂಶವನ್ನು ಆತನು ಚಿರಕಾಲ ಆಳುವನು; ಆತನ ರಾಜ್ಯಭಾರಕ್ಕೆ ಅಂತ್ಯವೇ ಇರದು,” ಎಂದನು.