ಜನರೆಲ್ಲರು ಸ್ನಾನದೀಕ್ಷೆ ಪಡೆಯುತ್ತಾ ಇದ್ದರು. ಯೇಸುಸ್ವಾಮಿಯೂ ಬಂದು ಸ್ನಾನದೀಕ್ಷೆಪಡೆದು ಪ್ರಾರ್ಥಿಸುತ್ತಿರಲು, ಆಕಾಶವು ತೆರೆಯಿತು. ಆಗ ಪವಿತ್ರಾತ್ಮ ಸಶರೀರವಾಗಿ ಒಂದು ಪಾರಿವಾಳದ ರೂಪದಲ್ಲಿ ಯೇಸುವಿನ ಮೇಲೆ ಇಳಿದರು. ಅಲ್ಲದೆ, “ನೀನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.