1
ಮಾರ್ಕ 14:36
ಕನ್ನಡ ಸತ್ಯವೇದವು C.L. Bible (BSI)
ಅನಂತರ, “ಅಪ್ಪಾ, ಪಿತನೇ, ನಿಮಗೆ ಎಲ್ಲವೂ ಸಾಧ್ಯ. ಈ ಕಷ್ಟದ ಕೊಡವನ್ನು ನನ್ನಿಂದ ತೆಗೆದುಬಿಡಿ. ಆದರೂ ನನ್ನ ಚಿತ್ತದಂತೆ ಅಲ್ಲ, ನಿಮ್ಮ ಚಿತ್ತವಿದ್ದಂತೆಯೇ ಆಗಲಿ,” ಎಂದರು.
Compară
Explorează ಮಾರ್ಕ 14:36
2
ಮಾರ್ಕ 14:38
ಪ್ರಲೋಭನೆಗೆ ಒಳಗಾಗದಂತೆ ಎಚ್ಚರದಿಂದ ಇದ್ದು ಪ್ರಾರ್ಥನೆಮಾಡಿ, ಆತ್ಮಕ್ಕೇನೋ ಆಸಕ್ತಿ ಇದೆ; ಆದರೆ ದೇಹಕ್ಕೆ ಶಕ್ತಿ ಸಾಲದು,” ಎಂದರು.
Explorează ಮಾರ್ಕ 14:38
3
ಮಾರ್ಕ 14:9
ಜಗತ್ತಿನಾದ್ಯಂತ ಎಲ್ಲೆಲ್ಲಿ ಶುಭಸಂದೇಶವನ್ನು ಪ್ರಕಟಿಸಲಾಗುವುದೋ ಅಲ್ಲೆಲ್ಲಾ ಈ ಸತ್ಕಾರ್ಯವನ್ನು ಈಕೆಯ ಸವಿನೆನಪಿಗಾಗಿ ಸಾರಲಾಗುವುದು, ಇದು ನಿಶ್ಚಯ,” ಎಂದರು.
Explorează ಮಾರ್ಕ 14:9
4
ಮಾರ್ಕ 14:34
ಅಲ್ಲಿ ಅತೀವ ದುಃಖದಿಂದ ಚಿಂತಾಕ್ರಾಂತರಾಗಿ, “ನನ್ನ ಮನೋವೇದನೆ ಪ್ರಾಣಹಿಂಡುವಷ್ಟು ತೀವ್ರವಾಗಿದೆ; ನೀವು ಇಲ್ಲೇ ಇದ್ದು ಎಚ್ಚರವಾಗಿರಿ,” ಎಂದರು.
Explorează ಮಾರ್ಕ 14:34
5
ಮಾರ್ಕ 14:22
ಅವರೆಲ್ಲರೂ ಊಟಮಾಡುತ್ತಿರುವಾಗ, ಯೇಸುಸ್ವಾಮಿ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತುತಿಮಾಡಿ, ಅದನ್ನು ಮುರಿದು, ಶಿಷ್ಯರಿಗೆ ಕೊಡುತ್ತಾ, “ಇದನ್ನು ಸ್ವೀಕರಿಸಿರಿ, ಇದು ನನ್ನ ಶರೀರ,” ಎಂದರು.
Explorează ಮಾರ್ಕ 14:22
6
ಮಾರ್ಕ 14:23-24
ಬಳಿಕ ಪಾನಪಾತ್ರೆಯನ್ನು ತೆಗೆದುಕೊಂಡು ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ, ಅದನ್ನು ಅವರಿಗೆ ಕೊಟ್ಟರು. ಅವರೆಲ್ಲರೂ ಅದರಿಂದ ಕುಡಿದರು. ಯೇಸು ಅವರಿಗೆ, “ಇದು ನನ್ನ ರಕ್ತ, ಸಮಸ್ತ ಜನರಿಗಾಗಿ ಸುರಿಸಲಾಗುವ ಒಡಂಬಡಿಕೆಯ ರಕ್ತ
Explorează ಮಾರ್ಕ 14:23-24
7
ಮಾರ್ಕ 14:27
ಅನಂತರ ಯೇಸುಸ್ವಾಮಿ ಶಿಷ್ಯರಿಗೆ, “ ‘ಕುರುಬನನ್ನು ಕೊಲ್ಲುವೆನು ಕುರಿಗಳು ಚದರಿಹೋಗುವುವು’ ಎಂದು ಪವಿತ್ರಗ್ರಂಥದಲ್ಲಿ ಬರೆದಿರುವಂತೆ ನೀವು ಎಲ್ಲರೂ ನನ್ನಲ್ಲಿ ವಿಶ್ವಾಸ ಕಳೆದುಕೊಂಡು ಹಿಮ್ಮೆಟ್ಟುವಿರಿ.
Explorează ಮಾರ್ಕ 14:27
8
ಮಾರ್ಕ 14:42
ನರಪುತ್ರನು ದುರ್ಜನರ ಕೈವಶ ಆಗಲಿದ್ದಾನೆ. ಎದ್ದೇಳಿ, ಹೋಗೋಣ. ಇಗೋ, ನೋಡಿ, ನನಗೆ ದ್ರೋಹ ಬಗೆಯುವವನು ಹತ್ತಿರವೇ ಇದ್ದಾನೆ,” ಎಂದರು.
Explorează ಮಾರ್ಕ 14:42
9
ಮಾರ್ಕ 14:30
ಅದಕ್ಕೆ ಯೇಸು, “ಇದೇ ರಾತ್ರಿ ಕೋಳಿ ಎರಡು ಸಾರಿ ಕೂಗುವ ಮೊದಲೇ, ‘ಆತನನ್ನು ನಾನರಿಯೆ’ ಎಂದು ನೀನು ಮೂರು ಸಾರಿ ನನ್ನನ್ನು ನಿರಾಕರಿಸುವೆ, ಇದು ಖಂಡಿತ,” ಎಂದರು.
Explorează ಮಾರ್ಕ 14:30
Acasă
Biblia
Planuri
Videoclipuri