YouVersion
Pictograma căutare

ಲೂಕ. 4:5-8

ಲೂಕ. 4:5-8 KANCLBSI

ಬಳಿಕ ಪಿಶಾಚಿ ಯೇಸುವನ್ನು ಎತ್ತರಕ್ಕೆ ಕರೆದೊಯ್ದು ಪ್ರಪಂಚದ ಎಲ್ಲಾ ರಾಜ್ಯಗಳನ್ನು ಕ್ಷಣಮಾತ್ರದಲ್ಲಿ ತೋರಿಸಿ, “ಇವುಗಳ ಸರ್ವಾಧಿಕಾರವನ್ನೂ ವೈಭವವನ್ನೂ ನಿನಗೆ ಕೊಡುವೆನು. ಇವೆಲ್ಲಾ ನನ್ನ ಅಧೀನದಲ್ಲಿವೆ. ನನ್ನ ಇಷ್ಟಬಂದವರಿಗೆ ಇವನ್ನು ಕೊಡಬಲ್ಲೆ. ನೀನು ನನಗೆ ಅಡ್ಡಬಿದ್ದೆಯಾದರೆ ಇದೆಲ್ಲಾ ನಿನ್ನದಾಗುವುದು,” ಎಂದಿತು. ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ ‘ನಿನ್ನ ದೇವರಾದ ಸರ್ವೇಶ್ವರನನ್ನು ಆರಾಧಿಸು; ಅವರೊಬ್ಬರಿಗೇ ಸೇವೆ ಸಲ್ಲಿಸು,’ ಎಂದು ಪವಿತ್ರಗ್ರಂಥದಲ್ಲಿ ಬರೆಯಲಾಗಿದೆ,” ಎಂದರು.