ಲೂಕ. 4:9-12
ಲೂಕ. 4:9-12 KANCLBSI
ಅನಂತರ ಪಿಶಾಚಿ ಯೇಸುವನ್ನು ಜೆರುಸಲೇಮಿಗೆ ಕರೆದೊಯ್ದು ಮಹಾದೇವಾಲಯದ ಗೋಪುರದ ತುತ್ತತುದಿಯ ಮೇಲೆ ನಿಲ್ಲಿಸಿ, “ನೀನು ದೇವರ ಪುತ್ರನೆಂಬುದು ಸತ್ಯವಾದರೆ ಇಲ್ಲಿಂದ ಕೆಳಕ್ಕೆ ಧುಮುಕು. ಏಕೆಂದರೆ, ಪವಿತ್ರಗ್ರಂಥದಲ್ಲಿ ಬರೆದಿರುವ ಪ್ರಕಾರ ನಿನ್ನನ್ನು ಕಾಪಾಡುವಂತೆ ದೇವರೇ ತಮ್ಮ ದೂತರಿಗೆ ಆಜ್ಞಾಪಿಸುವರು, ಮತ್ತು ‘ಇವರು, ನಿನ್ನ ಕಾಲುಗಳು ಕಲ್ಲುಗಳಿಗೆ ತಾಗದಂತೆ ನಿನ್ನನ್ನು ತಮ್ಮ ಕೈಗಳಲ್ಲಿ ಆತುಕೊಳ್ಳುವರು’, “ ಎಂದಿತು. ಅದಕ್ಕೆ ಯೇಸು, “ ‘ನಿನ್ನ ದೇವರು ಸರ್ವೇಶ್ವರ; ನೀನು ಅವರನ್ನು ಪರೀಕ್ಷಿಸಬಾರದು,’ ಎಂದು ಸಹ ಪವಿತ್ರಗ್ರಂಥ ಹೇಳುತ್ತದೆ,” ಎಂದು ಉತ್ತರಕೊಟ್ಟರು.