ಮಾರ್ಕ 12:41-42
ಮಾರ್ಕ 12:41-42 KANCLBSI
ಯೇಸುಸ್ವಾಮಿ ದೇವಾಲಯದಲ್ಲಿ ಕಾಣಿಕೆಪೆಟ್ಟಿಗೆಗಳಿಗೆ ಎದುರಾಗಿ ಕುಳಿತಿದ್ದರು. ಜನರು ಅದರಲ್ಲಿ ಹಣಹಾಕುವ ರೀತಿ ಅವರ ಕಣ್ಣಿಗೆ ಬಿತ್ತು. ಧನವಂತರನೇಕರು ಹೆಚ್ಚು ಹೆಚ್ಚು ಹಣವನ್ನು ಹಾಕುತ್ತಿದ್ದರು. ಅಷ್ಟರಲ್ಲಿ ಬಡ ವಿಧವೆ ಒಬ್ಬಳು ಅಲ್ಲಿಗೆ ಬಂದಳು. ತಾಮ್ರದ ಚಿಕ್ಕ ನಾಣ್ಯಗಳೆರಡನ್ನು ಕಾಣಿಕೆಯಾಗಿ ಹಾಕಿದಳು.