1
ಯೋಹಾನ 6:35
ಕನ್ನಡ ಸತ್ಯವೇದವು J.V. (BSI)
ಅವರಿಗೆ - ಜೀವಕೊಡುವ ರೊಟ್ಟಿ ನಾನೇ; ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವದಿಲ್ಲ, ನನ್ನನ್ನು ನಂಬುವವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ.
Yenzanisa
Ongorora {{vhesi}}
2
ಯೋಹಾನ 6:63
ಬದುಕಿಸುವಂಥದು ಆತ್ಮವೇ; ಮಾಂಸವು ಯಾವದಕ್ಕೂ ಬರುವದಿಲ್ಲ. ನಾನು ನಿಮಗೆ ಹೇಳಿರುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಅವೆ.
3
ಯೋಹಾನ 6:27
ದುಡಿಯಿರಿ; ಕೆಟ್ಟುಹೋಗುವ ಆಹಾರಕ್ಕಾಗಿ ದುಡಿಯಬೇಡಿರಿ, ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿ ದುಡಿಯಿರಿ; ಇಂಥ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ಇದಕ್ಕಾಗಿ ತಂದೆಯಾದ ದೇವರು ಆತನನ್ನು ನೇವಿುಸಿ ಮುದ್ರೆಹಾಕಿದ್ದಾನೆ ಅಂದನು.
4
ಯೋಹಾನ 6:40
ನಿತ್ಯ ಜೀವವು ಸಿಕ್ಕಬೇಕೆಂಬದೇ ನನ್ನ ತಂದೆಯ ಚಿತ್ತವಾಗಿದೆ; ಮತ್ತು ನಾನು ಕಡೇದಿನದಲ್ಲಿ ಅವನನ್ನು ಎಬ್ಬಿಸುವೆನು ಎಂದು ಹೇಳಿದನು.
5
ಯೋಹಾನ 6:29
ಯೇಸು - ದೇವರು ಮೆಚ್ಚುವ ಕೆಲಸ ಯಾವದಂದರೆ ಆತನು ಕಳುಹಿಸಿಕೊಟ್ಟವನನ್ನು ನೀವು ನಂಬುವದೇ ಅಂದನು.
6
ಯೋಹಾನ 6:37
ತಂದೆಯು ನನಗೆ ಕೊಡುವಂಥವರೆಲ್ಲರು ನನ್ನ ಬಳಿಗೆ ಬರುವರು; ಮತ್ತು ನನ್ನ ಬಳಿಗೆ ಬರುವವನನ್ನು ನಾನು ತಳ್ಳಿಬಿಡುವದೇ ಇಲ್ಲ.
7
ಯೋಹಾನ 6:68
ಸ್ವಾಮೀ, ನಿನ್ನನ್ನು ಬಿಟ್ಟು ನಾವು ಇನ್ನಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವವನ್ನು ಉಂಟುಮಾಡುವ ವಾಕ್ಯಗಳುಂಟು
8
ಯೋಹಾನ 6:51
ಪರಲೋಕದಿಂದ ಇಳಿದುಬರುವ ಜೀವವುಳ್ಳ ರೊಟ್ಟಿಯು ನಾನೇ; ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಸದಾಕಾಲ ಬದುಕುವನು. ಮತ್ತು ನಾನು ಕೊಡುವ ರೊಟ್ಟಿ ನನ್ನ ಮಾಂಸವೇ; ಅದನ್ನು ಲೋಕದ ಜೀವಕ್ಕೋಸ್ಕರ ಕೊಡುವೆನು ಎಂದು ಹೇಳಿದನು.
9
ಯೋಹಾನ 6:44
ನನ್ನನ್ನು ಕಳುಹಿಸಿಕೊಟ್ಟಂಥ ತಂದೆಯು ಎಳೆದ ಹೊರತು ಯಾವನೂ ನನ್ನ ಬಳಿಗೆ ಬರಲಾರನು; ಮತ್ತು ನಾನು ಅವನನ್ನು ಕಡೇದಿನದಲ್ಲಿ ಎಬ್ಬಿಸುವೆನು.
10
ಯೋಹಾನ 6:33
ದೇವರು ಕೊಡುವ ಆ ರೊಟ್ಟಿ ಯಾವದಂದರೆ ಪರಲೋಕದಿಂದ ಇಳಿದು ಬಂದು ಲೋಕಕ್ಕೆ ಜೀವವನ್ನು ಉಂಟುಮಾಡುವಂಥದೇ ಎಂದು ಹೇಳಿದನು.
11
ಯೋಹಾನ 6:48
ಜೀವ ಕೊಡುವ ರೊಟ್ಟಿ ನಾನೇ.
12
ಯೋಹಾನ 6:11-12
ತರುವಾಯ ಯೇಸು ಆ ರೊಟ್ಟಿಗಳನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ ಕೂತುಕೊಂಡವರಿಗೆ ಹಂಚಿ ಕೊಟ್ಟನು; ಅದರಂತೆ ಮೀನುಗಳಲ್ಲಿಯೂ ಅವರಿಗೆ ಬೇಕಾದಷ್ಟು ಹಂಚಿಕೊಟ್ಟನು. ಅವರಿಗೆ ತೃಪ್ತಿಯಾದ ಮೇಲೆ ಯೇಸು ತನ್ನ ಶಿಷ್ಯರಿಗೆ - ವಿುಕ್ಕತುಂಡುಗಳನ್ನು ಕೂಡಿಸಿರಿ; ಇದರಲ್ಲಿ ಯಾವದೂ ವ್ಯರ್ಥವಾಗಬಾರದು ಎಂದು ಹೇಳಿದನು.
13
ಯೋಹಾನ 6:19-20
ಹೀಗಿರಲಾಗಿ ಅವರು ಹುಟ್ಟುಹಾಕುತ್ತಾ ಹೆಚ್ಚು ಕಡಿಮೆ ಒಂದು ಹರದಾರಿ ದೂರ ಹೋದ ಬಳಿಕ ಯೇಸು ಸಮುದ್ರದ ಮೇಲೆ ನಡೆಯುತ್ತಾ ದೋಣಿಯ ಸಮೀಪಕ್ಕೆ ಬರುವದನ್ನು ನೋಡಿ ಅಂಜಿದರು. ಆದರೆ ಆತನು - ಅಂಜಬೇಡಿರಿ, ನಾನು, ಅಂದನು.
Pekutangira
Bhaibheri
Zvirongwa
Mavideo