ಆಮೇಲೆ ಯೇಸು ಆ ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿ, ಕುಳಿತಿದ್ದವರಿಗೆ ಹಂಚಿದನು. ಅದೇ ರೀತಿ ಮೀನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದನು. ಅವರಿಗೆ ತೃಪ್ತಿಯಾದ ಮೇಲೆ ಯೇಸು ತನ್ನ ಶಿಷ್ಯರಿಗೆ, “ಮಿಕ್ಕ ತುಂಡುಗಳನ್ನು ಕೂಡಿಸಿರಿ, ಇದರಲ್ಲಿ ಯಾವುದೂ ವ್ಯರ್ಥವಾಗಬಾರದು” ಎಂದು ಹೇಳಿದನು.