1
ಲೂಕ 14:26
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
“ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆತಾಯಿ, ಹೆಂಡತಿ, ಮಕ್ಕಳು, ಅಣ್ಣತಮ್ಮಂದಿರು, ಅಕ್ಕತಂಗಿಯರು ಇವರನ್ನೂ ತನ್ನ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.
Krahaso
Eksploroni ಲೂಕ 14:26
2
ಲೂಕ 14:27
ಯಾವನಾದರೂ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬರದ ಹೊರತು ಅವನು ನನ್ನ ಶಿಷ್ಯನಾಗಿರಲಾರನು.
Eksploroni ಲೂಕ 14:27
3
ಲೂಕ 14:11
ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.
Eksploroni ಲೂಕ 14:11
4
ಲೂಕ 14:33
ಹಾಗೆಯೇ ನಿಮ್ಮಲ್ಲಿ ಯಾವನೇ ಆಗಲಿ ತನಗಿರುವುದನ್ನೆಲ್ಲಾ ಬಿಟ್ಟುಬಿಡದೆ ಹೋದರೆ ಅವನು ನನ್ನ ಶಿಷ್ಯನಾಗಿರಲಾರನು.
Eksploroni ಲೂಕ 14:33
5
ಲೂಕ 14:28-30
ನಿಮ್ಮಲ್ಲಿ ಯಾವನಾದರೂ ಒಂದು ಗೋಪುರವನ್ನು ಕಟ್ಟಿಸಬೇಕೆಂದು ಯೋಚಿಸಿದರೆ ಅವನು ಮೊದಲು ಕುಳಿತುಕೊಂಡು, ಅದಕ್ಕೆ ಎಷ್ಟು ಖರ್ಚು ಆದೀತು, ಅದನ್ನು ತೀರಿಸುವುದಕ್ಕೆ ಸಾಕಾಗುವಷ್ಟು ಹಣ ನನ್ನಲ್ಲಿ ಇದೆಯೋ ಎಂದು ಲೆಕ್ಕಮಾಡುವುದಿಲ್ಲವೇ? ಹೀಗೆ ಲೆಕ್ಕಮಾಡದೆ ಅದಕ್ಕೆ ಅಸ್ತಿವಾರ ಹಾಕಿದ ಮೇಲೆ ಆ ಕೆಲಸವನ್ನು ಪೂರೈಸಲಾರದೆ ಹೋದರೆ ನೋಡುವವರೆಲ್ಲರು, ‘ಈ ಮನುಷ್ಯನು ಕಟ್ಟಿಸುವುದಕ್ಕಂತೂ ತೊಡಗಿದನು, ಕೆಲಸಪೂರೈಸಲಾರದೆ ಹೋದನು’ ಎಂದು ಅವನನ್ನು ಹಾಸ್ಯಮಾಡಾರು.
Eksploroni ಲೂಕ 14:28-30
6
ಲೂಕ 14:13-14
ಆದರೆ ನೀನು ಔತಣ ಮಾಡಿಸುವಾಗ ಬಡವರು, ಅಂಗಹೀನವಾದವರು, ಕುಂಟರು, ಕುರುಡರು ಇಂಥವರನ್ನು ಕರೆ, ಆಗ ನೀನು ಧನ್ಯನಾಗುವಿ. ಏಕೆಂದರೆ, ಅವರು ನಿನಗೆ ಪ್ರತಿಯಾಗಿ ಏನು ಮಾಡಲೂ ಇಲ್ಲದವರು. ನೀತಿವಂತರು ಪುನರುತ್ಥಾನ ಹೊಂದುವಾಗ ನಿನಗೆ ಪ್ರತಿಫಲ ದೊರಕುವುದು.”
Eksploroni ಲೂಕ 14:13-14
7
ಲೂಕ 14:34-35
“ಉಪ್ಪಂತೂ ಒಳ್ಳೆಯ ಪದಾರ್ಥವೇ. ಉಪ್ಪು ಸಪ್ಪಗಾದರೆ ಅದಕ್ಕೆ ಇನ್ನಾತರಿಂದ ರುಚಿಬರಿಸಲು ಸಾಧ್ಯ? ಅದು ಭೂಮಿಗಾದರೂ ತಿಪ್ಪೆಗಾದರೂ ಉಪಯೋಗಕ್ಕೆ ಬರುವುದಿಲ್ಲ, ಅದನ್ನು ಹೊರಗೆ ಬಿಸಾಡುತ್ತಾರೆ. ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಅಂದನು.
Eksploroni ಲೂಕ 14:34-35
Kreu
Bibla
Plane
Video