ಎಲ್ಲಾ ತಲಾಂತರಗಳಲ್ಲಿ ನಿಮ್ಮಲ್ಲಿರುವ ಪ್ರತಿಯೊಬ್ಬ ಗಂಡಸೂ, ಮನೆಯಲ್ಲಿ ಹುಟ್ಟಿದವನಾದರೂ ನಿನ್ನ ಸಂತತಿಯಲ್ಲಿ ಹುಟ್ಟದೆ ಅನ್ಯರಿಂದ ಕ್ರಯಕ್ಕೆ ತೆಗೆದುಕೊಂಡವನಾದರೂ ಎಂಟು ದಿನಗಳ ವಯಸ್ಸುಳ್ಳವನಾದಾಗ ಅವನಿಗೆ ಸುನ್ನತಿ ಮಾಡಿಸಬೇಕು. ನಿನ್ನ ಮನೆಯಲ್ಲಿ ಹುಟ್ಟಿದವರಿಗೂ ನೀನು ಕ್ರಯಕ್ಕೆ ತೆಗೆದುಕೊಂಡವರಿಗೂ ತಪ್ಪದೆ ಸುನ್ನತಿಯಾಗಬೇಕು. ಹೀಗೆ ನಾನು ಮಾಡುವ ನಿಬಂಧನೆಯ ಗುರುತು ನಿಮ್ಮ ಶರೀರದಲ್ಲೇ ಇದ್ದು ಶಾಶ್ವತವಾದ ಒಡಂಬಡಿಕೆಯನ್ನು ಸೂಚಿಸುವದು.