1
ಆದಿಕಾಂಡ 11:6-7
ಕನ್ನಡ ಸತ್ಯವೇದವು J.V. (BSI)
ನೋಡಿದ ಮೇಲೆ ಆತನು - ಇವರು ಒಂದೇ ಜನಾಂಗ; ಇವರೆಲ್ಲರಿಗೂ ಒಂದೇ ಭಾಷೆ. ಪ್ರಾರಂಭದಲ್ಲೇ ಇಷ್ಟು ದೊಡ್ಡ ಕೆಲಸ ಮಾಡುವವರಾಗಿರಲು ಮುಂದೆ ಏನು ಆಲೋಚಿಸಿದರೂ ಇವರಿಗೆ ಅಸಾಧ್ಯವಲ್ಲ. ನಾವು ಇಳಿದು ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ತಾರುಮಾರುಮಾಡೋಣ ಬನ್ನಿ ಅಂದನು.
సరిపోల్చండి
Explore ಆದಿಕಾಂಡ 11:6-7
2
ಆದಿಕಾಂಡ 11:4
ಒಂದು ಪಟ್ಟಣವನ್ನೂ ಆಕಾಶವನ್ನು ಮುಟ್ಟುವ ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಪಡೆಯೋಣ; ಹೀಗೆ ಮಾಡಿದರೆ ಭೂವಿುಯ ಮೇಲೆಲ್ಲಾ ಚದರುವದಕ್ಕೆ ಆಸ್ಪದವಾಗುವದಿಲ್ಲ ಅಂದುಕೊಂಡರು. ಕಟ್ಟುವಾಗ ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನೂ ಸುಣ್ಣಕ್ಕೆ ಬದಲಾಗಿ ಕಲ್ಲರಗನ್ನೂ ಉಪಯೋಗಿಸಿದರು.
Explore ಆದಿಕಾಂಡ 11:4
3
ಆದಿಕಾಂಡ 11:9
ಸಮಸ್ತಲೋಕದ ಭಾಷೆಯನ್ನು ಯೆಹೋವನು ಅಲ್ಲಿ ತಾರುಮಾರುಮಾಡಿ ಅವರನ್ನು ಅಲ್ಲಿಂದ ಭೂಲೋಕದಲ್ಲೆಲ್ಲಾ ಚದರಿಸಿದ್ದರಿಂದ ಆ ಪಟ್ಟಣಕ್ಕೆ ಬಾಬೆಲ್ ಎಂಬ ಹೆಸರಾಯಿತು.
Explore ಆದಿಕಾಂಡ 11:9
4
ಆದಿಕಾಂಡ 11:1
ಲೋಕದವರೆಲ್ಲರಿಗೂ ಒಂದೇ ಭಾಷೆ ಇತ್ತು. ಭಾಷಾಭೇದವೇನೂ ಇರಲಿಲ್ಲ.
Explore ಆದಿಕಾಂಡ 11:1
5
ಆದಿಕಾಂಡ 11:5
ನರಪುತ್ರರು ಕಟ್ಟುತ್ತಿದ್ದ ಆ ಪಟ್ಟಣವನ್ನೂ ಗೋಪುರವನ್ನೂ ನೋಡುವದಕ್ಕೆ ಯೆಹೋವನು ಇಳಿದು ಬಂದನು.
Explore ಆದಿಕಾಂಡ 11:5
6
ಆದಿಕಾಂಡ 11:8
ಹಾಗೆಯೇ ಮಾಡಿ ಯೆಹೋವನು ಅವರನ್ನು ಅಲ್ಲಿಂದ ಭೂಲೋಕದಲ್ಲೆಲ್ಲಾ ಚದರಿಸಿದನು. ಅವರು ಆ ಪಟ್ಟಣ ಕಟ್ಟುವದನ್ನು ನಿಲ್ಲಿಸಿಬಿಟ್ಟರು.
Explore ಆದಿಕಾಂಡ 11:8
హోమ్
బైబిల్
ప్రణాళికలు
వీడియోలు