ಯೋಹಾನ 14
14
1ನಿಮ್ಮ ಹೃದಯವು ಕಳವಳಗೊಳ್ಳದೆ ಇರಲಿ; ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ. 2ನನ್ನ ತಂದೆಯ ಮನೆಯಲ್ಲಿ ಬಹಳ ಬಿಡಾರಗಳು ಅವೆ; ಇಲ್ಲದಿದ್ದರೆ ನಿಮಗೆ ಹೇಳುತ್ತಿದ್ದೆನು; ನಿಮಗೆ ಸ್ಥಳವನ್ನು ಸಿದ್ಧಮಾಡುವದಕ್ಕೆ ಹೋಗುತ್ತೇನಲ್ಲಾ. 3ನಾನು ಹೋಗಿ ನಿಮಗೆ ಸ್ಥಳವನ್ನು ಸಿದ್ಧಮಾಡಿದ ಮೇಲೆ ತಿರಿಗಿ ಬಂದು ನಿಮ್ಮನ್ನು ಕರಕೊಂಡು ಹೋಗಿ ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಯಾಕಂದರೆ ನಾನಿರುವ ಸ್ಥಳದಲ್ಲಿ ನೀವು ಸಹ ಇರಬೇಕು. 4ಮತ್ತು ನಾನು ಹೋಗುವ ಸ್ಥಳದ ಮಾರ್ಗವು ನಿಮಗೆ ತಿಳಿದದೆ ಅಂದನು.
5ತೋಮನು ಆತನನ್ನು - ಸ್ವಾಮೀ, ನೀನು ಎಲ್ಲಿಗೆ ಹೋಗುತ್ತೀಯೋ ನಮಗೆ ತಿಳಿಯದು; ಮಾರ್ಗವು ಹೇಗೆ ತಿಳಿದೀತು ಎಂದು ಕೇಳಲು 6ಯೇಸು ಅವನಿಗೆ - ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ. 7ನೀವು ನನ್ನನ್ನು ಅರಿತಿದ್ದರೆ ನನ್ನ ತಂದೆಯನ್ನೂ ಅರಿಯುತ್ತಿದ್ದಿರಿ; ಈಗಿನಿಂದ ಆತನನ್ನು ಅರಿತುಕೊಂಡಿದ್ದೀರಿ; ಆತನನ್ನು ನೋಡಿದ್ದೀರಲ್ಲಾ ಎಂದು ಹೇಳಿದನು.
8ಫಿಲಿಪ್ಪನು - ಸ್ವಾಮೀ, ನಮಗೆ ತಂದೆಯನ್ನು ತೋರಿಸು, ನಮಗೆ ಅಷ್ಟೇ ಸಾಕು ಅಂದನು. 9ಯೇಸು ಅವನಿಗೆ - ಫಿಲಿಪ್ಪನೇ, ನಾನು ಇಷ್ಟು ದಿವಸ ನಿಮ್ಮ ಸಂಗಡ ಇದ್ದರೂ ನೀನು ಇನ್ನೂ ನನ್ನನ್ನು ಅರಿತುಕೊಳ್ಳಲಿಲ್ಲವೇ. ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ. ನಮಗೆ ತಂದೆಯನ್ನು ತೋರಿಸೆಂದು ನೀನು ಹೇಳುವದು ಹೇಗೆ? 10ನಾನು ತಂದೆಯಲ್ಲಿದ್ದೇನೆ, ತಂದೆಯು ನನ್ನಲ್ಲಿ ಇದ್ದಾನೆ ಎಂದು ನೀನು ನಂಬುವದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುವದಿಲ್ಲ; ತಂದೆಯು ನನ್ನಲ್ಲಿ ಇದ್ದುಕೊಂಡು ತನ್ನ ಕ್ರಿಯೆಗಳನ್ನು ನಡಿಸುತ್ತಾನೆ. 11ನಾನು ತಂದೆಯಲ್ಲಿ ಇದ್ದೇನೆ, ತಂದೆಯು ನನ್ನಲ್ಲಿ ಇದ್ದಾನೆಂಬುವ ನನ್ನ ಮಾತನ್ನು ನಂಬಿರಿ; ಇಲ್ಲದಿದ್ದರೆ ಆ ಕ್ರಿಯೆಗಳನ್ನೇ ನೋಡಿ ನನ್ನ ಮಾತನ್ನು ನಂಬಿರಿ.
12ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ನಂಬುವವನು ನಾನು ನಡಿಸುವ ಕ್ರಿಯೆಗಳನ್ನು ತಾನೂ ನಡಿಸುವನು; ಮತ್ತು ಅವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ನಡಿಸುವನು. ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ. 13ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ, ಅದನ್ನು ನೆರವೇರಿಸುವೆನು; ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವದು. 14ನೀವು ನನ್ನ ಹೆಸರಿನಲ್ಲಿ ನನ್ನನ್ನು ಏನಾದರೂ ಬೇಡಿಕೊಂಡರೆ ಅದನ್ನು ನೆರವೇರಿಸುವೆನು.
15ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವಿರಿ. 16ಆಗ ನಾನು ತಂದೆಯನ್ನು ಕೇಳಿಕೊಳ್ಳುವೆನು; ಆತನು ನಿಮಗೆ ಬೇರೊಬ್ಬ ಸಹಾಯಕನನ್ನು ಸದಾಕಾಲ ನಿಮ್ಮ ಸಂಗಡ ಇರುವದಕ್ಕೆ ಕೊಡುವನು. 17ಆ ಸಹಾಯಕನು ಯಾರಂದರೆ ಸತ್ಯದ#14.17 ಅಥವಾ, ಸತ್ಯವನ್ನು ತಿಳಿಸುವ. ಯೋಹಾ. 14.25; 15.26; 16.7. ಆತ್ಮನೇ. ಲೋಕವು ಆತನನ್ನು ನೋಡದೆಯೂ ತಿಳಿಯದೆಯೂ ಇರುವದರಿಂದ ಆತನನ್ನು ಹೊಂದಲಾರದು. ನೀವು ಆತನನ್ನು ಬಲ್ಲಿರಿ; ಹೇಗಂದರೆ ನಿಮ್ಮ ಬಳಿಯಲ್ಲಿ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು.
18ನಾನು ನಿಮ್ಮನ್ನು ಅನಾಥರಾಗಿ ಬಿಡುವದಿಲ್ಲ; ನಿಮ್ಮ ಬಳಿಗೆ ಬರುತ್ತೇನೆ. 19ಇನ್ನು ಸ್ವಲ್ಪಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ; ನಾನು ಬದುಕುವದರಿಂದ ನೀವೂ ಬದುಕುವಿರಿ. 20ನಾನು ನನ್ನ ತಂದೆಯಲ್ಲಿಯೂ ನೀವು ನನ್ನಲ್ಲಿಯೂ ನಾನು ನಿಮ್ಮಲ್ಲಿಯೂ ಇರುವದನ್ನು ನೀವು ಆ ದಿನದಲ್ಲಿ ತಿಳಿದುಕೊಳ್ಳುವಿರಿ. 21ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು; ನಾನೂ ಅವನನ್ನು ಪ್ರೀತಿಸಿ ಅವನಿಗೆ ಕಾಣಿಸಿಕೊಳ್ಳುವೆನು ಎಂದು ಹೇಳಿದನು. 22ಯೂದನು (ಇವನು ಇಸ್ಕರಿಯೋತನಲ್ಲ) - ಸ್ವಾಮೀ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಮಾತ್ರ ಕಾಣಿಸಿಕೊಳ್ಳುವದಕ್ಕೆ ಏನು ಸಂಭವಿಸಿತು ಎಂದು ಕೇಳಿದ್ದಕ್ಕೆ 23ಯೇಸು ಅವನಿಗೆ - ಯಾರಾದರೂ ನನ್ನನ್ನು ಪ್ರೀತಿಸುವವನಾದರೆ ನನ್ನ ಮಾತನ್ನು ಕೈಕೊಂಡು ನಡೆಯುವನು; ಅವನನ್ನು ನನ್ನ ತಂದೆಯು ಪ್ರೀತಿಸುವನು, ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು ಅವನ ಬಳಿಯಲ್ಲಿ ಬಿಡಾರವನ್ನು ಮಾಡಿಕೊಳ್ಳುವೆವು. 24ನನ್ನನ್ನು ಪ್ರೀತಿಸದೆ ಇರುವವನು ನನ್ನ ಮಾತುಗಳನ್ನು ಕೈಕೊಂಡು ನಡೆಯುವದಿಲ್ಲ; ನೀವು ಆಲಿಸುವ ಮಾತು ನನ್ನದಲ್ಲ, ನನ್ನನ್ನು ಕಳುಹಿಸಿದ ತಂದೆಯ ಮಾತೇ.
25ಈ ಮಾತುಗಳನ್ನು ನಾನು ಇನ್ನೂ ನಿಮ್ಮ ಬಳಿಯಲ್ಲಿರುವಾಗ ನಿಮಗೆ ಹೇಳಿದ್ದೇನೆ. 26ಆದರೆ ಆ ಸಹಾಯಕನು ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನ್ನೆಲ್ಲಾ ನಿಮ್ಮ ನೆನಪಿಗೆ ತರುವನು.
27ಶಾಂತಿಯನ್ನು ನಿಮಗೆ ಬಿಟ್ಟುಹೋಗುತ್ತೇನೆ, ನನ್ನಲ್ಲಿರುವಂಥ ಶಾಂತಿಯನ್ನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಿಂದ ನಾನು ನಿಮಗೆ ಕೊಡುವದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ. 28ನಾನು ಹೋಗಿ ತಿರಿಗಿ ನಿಮ್ಮ ಬಳಿಗೆ ಬರುತ್ತೇನೆಂದು ನಿಮಗೆ ಹೇಳಿದ್ದನ್ನು ಕೇಳಿದಿರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ತಂದೆಯ ಬಳಿಗೆ ಹೋಗುವ ವಿಷಯದಲ್ಲಿ ಸಂತೋಷಪಡುತ್ತಿದ್ದಿರಿ; ಯಾಕಂದರೆ ತಂದೆಯು ನನಗಿಂತ ದೊಡ್ಡವನು. 29ಅದೆಲ್ಲಾ ನಡೆಯುವಾಗ ನೀವು ನನ್ನನ್ನು ನಂಬುವಂತೆ ಅದು ನಡೆಯುವದಕ್ಕಿಂತ ಮುಂಚೆಯೇ ಈಗ ನಿಮಗೆ ಹೇಳಿದ್ದೇನೆ. 30ಇನ್ನು ನಾನು ನಿಮ್ಮ ಸಂಗಡ ಬಹಳ ಮಾತುಗಳನ್ನಾಡುವದಿಲ್ಲ, ಯಾಕಂದರೆ ಇಹಲೋಕಾಧಿಪತಿಯು ಬರುತ್ತಾನೆ. ಅವನಿಗೆ ಸಂಬಂಧಪಟ್ಟದ್ದು ಯಾವದೊಂದೂ ನನ್ನಲ್ಲಿಲ್ಲ; 31ಆದರೂ ನಾನು ತಂದೆಯನ್ನು ಪ್ರೀತಿಸುತ್ತೇನೆಂಬದು ಲೋಕಕ್ಕೆ ತಿಳಿದಿರಬೇಕೆಂದು ತಂದೆಯು ನನಗೆ ಕೊಟ್ಟ ಆಜ್ಞೆಯ ಮೇರೆಗೆ ಇದನ್ನು ಮಾಡುತ್ತೇನೆ. ಏಳಿರಿ, ಇಲ್ಲಿಂದ ಹೋಗೋಣ.
Seçili Olanlar:
ಯೋಹಾನ 14: KANJV-BSI
Vurgu
Paylaş
Kopyala

Önemli anlarınızın tüm cihazlarınıza kaydedilmesini mi istiyorsunuz? Kayıt olun ya da giriş yapın
Kannada J.V. Bible © The Bible Society of India, 2016.
Used by permission. All rights reserved worldwide.

: