1
ಯೊವಾನ್ನ 1:12
ಕನ್ನಡ ಸತ್ಯವೇದವು C.L. Bible (BSI)
ಕೆಲವರಾದರೋ ಅವರನ್ನು ಬರಮಾಡಿಕೊಂಡರು. ಅಂಥವರಿಗೆ, ಅಂದರೆ ಅವರಲ್ಲಿ ವಿಶ್ವಾಸ ಇಟ್ಟವರಿಗೆ, ದೇವರ ಮಕ್ಕಳಾಗುವ ಹಕ್ಕನ್ನು ಅವರು ಕೊಟ್ಟರು.
So sánh
Khám phá ಯೊವಾನ್ನ 1:12
2
ಯೊವಾನ್ನ 1:1
ಜಗತ್ತು ಉಂಟಾಗುವ ಮೊದಲೇ ‘ದಿವ್ಯವಾಣಿ’ ಎಂಬವರಿದ್ದರು. ಆ ದಿವ್ಯವಾಣಿ ದೇವರಾಗಿದ್ದರು. ಆ ದಿವ್ಯವಾಣಿ ದೇವರೊಂದಿಗೆ ಇದ್ದರು
Khám phá ಯೊವಾನ್ನ 1:1
3
ಯೊವಾನ್ನ 1:5
ಆ ಜ್ಯೋತಿ ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲಿಗಾದರೋ ಅದನ್ನು ನಿಗ್ರಹಿಸಲಾಗಲಿಲ್ಲ.
Khám phá ಯೊವಾನ್ನ 1:5
4
ಯೊವಾನ್ನ 1:14
ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.
Khám phá ಯೊವಾನ್ನ 1:14
5
ಯೊವಾನ್ನ 1:3-4
ದಿವ್ಯವಾಣಿಯ ಮುಖಾಂತರವೇ ಸಮಸ್ತವೂ ಉಂಟಾಯಿತು. ಉಂಟಾದವುಗಳಲ್ಲಿ ಯಾವುದೂ ಆ ದಿವ್ಯವಾಣಿಯಿಂದಲ್ಲದೆ ಆದುದಿಲ್ಲ. ಆ ದಿವ್ಯವಾಣಿಯಲ್ಲಿ ಸಜ್ಜೀವವಿತ್ತು. ಆ ಜೀವವೇ ಮಾನವಜನಾಂಗದ ಜ್ಯೋತಿಯಾಗಿತ್ತು.
Khám phá ಯೊವಾನ್ನ 1:3-4
6
ಯೊವಾನ್ನ 1:29
ಮರುದಿನ ಯೊವಾನ್ನನು, ತಾನಿದ್ದಲ್ಲಿಗೇ ಯೇಸು ಬರುತ್ತಿರುವುದನ್ನು ಕಂಡು, “ಇಗೋ ನೋಡಿ, ಬಲಿಯರ್ಪಣೆಗಾಗಿ ದೇವರು ನೇಮಿಸಿರುವ ಕುರಿಮರಿ; ಲೋಕದ ಪಾಪಗಳನ್ನು ಪರಿಹರಿಸುವವರು ಇವರೇ.
Khám phá ಯೊವಾನ್ನ 1:29
7
ಯೊವಾನ್ನ 1:10-11
ದಿವ್ಯವಾಣಿ ಲೋಕದಲ್ಲಿ ಇದ್ದರು. ಅವರ ಮುಖಾಂತರವೇ ಲೋಕವು ಉಂಟಾಯಿತು. ಲೋಕವಾದರೋ ಅವರನ್ನು ಅರಿತುಕೊಳ್ಳದೆಹೋಯಿತು. ಅವರು ತಮ್ಮ ಸ್ವದೇಶಕ್ಕೆ ಬಂದರು; ಸ್ವಜನರೇ ಅವರನ್ನು ಬರಮಾಡಿಕೊಳ್ಳದೆಹೋದರು.
Khám phá ಯೊವಾನ್ನ 1:10-11
8
ಯೊವಾನ್ನ 1:9
ನಿಜವಾದ ಜ್ಯೋತಿ ಆ ದಿವ್ಯವಾಣಿಯೇ. ಮಾನವರೆಲ್ಲರನ್ನು ಬೆಳಗಿಸಲು ಲೋಕಕ್ಕೆ ಆಗಮಿಸಲಿದ್ದ ಜಗಜ್ಜ್ಯೋತಿ ಅವರೇ.
Khám phá ಯೊವಾನ್ನ 1:9
9
ಯೊವಾನ್ನ 1:17
ಧರ್ಮಶಾಸ್ತ್ರವನ್ನು ಮೋಶೆಯ ಮುಖಾಂತರ ಕೊಡಲಾಯಿತು. ವರಪ್ರಸಾದ ಹಾಗೂ ಸತ್ಯವಾದರೋ ಯೇಸು ಕ್ರಿಸ್ತರ ಮುಖಾಂತರ ಬಂದವು.
Khám phá ಯೊವಾನ್ನ 1:17
Trang chủ
Kinh Thánh
Kế hoạch
Video