ಯೊವಾನ್ನ 11:43-44

ಯೊವಾನ್ನ 11:43-44 KANCLBSI

ಅನಂತರ ಗಟ್ಟಿಯಾದ ಧ್ವನಿಯಿಂದ, “ಲಾಸರನೇ, ಹೊರಗೆ ಬಾ,” ಎಂದು ಕೂಗಿದರು. ಸತ್ತಿದ್ದವನು ಕೂಡಲೇ ಹೊರಗೆ ಬಂದನು. ಅವನ ಕೈಕಾಲುಗಳು ಶವವಸ್ತ್ರದಿಂದ ಸುತ್ತಿದ್ದವು; ಮುಖವು ಬಟ್ಟೆಯಿಂದ ಮುಚ್ಚಿತ್ತು. ಆಗ ಯೇಸು, “ಕಟ್ಟುಗಳನ್ನು ಬಿಚ್ಚಿ ಅವನನ್ನು ಹೋಗಲು ಬಿಡಿ,” ಎಂದು ಅಲ್ಲಿದ್ದವರಿಗೆ ಹೇಳಿದರು.