1
ಆದಿಕಾಂಡ 22:14
ಕನ್ನಡ ಸತ್ಯವೇದವು C.L. Bible (BSI)
ಆ ಸ್ಥಳಕ್ಕೆ “ಯೆಹೋವ ಯೀರೆ" ಎಂದು ಹೆಸರಿಟ್ಟ.
對照
探尋 ಆದಿಕಾಂಡ 22:14
2
ಆದಿಕಾಂಡ 22:2
ಆಗ ದೇವರು, “ನಿನಗೆ ಒಬ್ಬನೇ ಒಬ್ಬನೂ ಮುದ್ದುಮಗನೂ ಆದ ಇಸಾಕನನ್ನು ಕರೆದುಕೊಂಡು ಮೊರೀಯ ಪ್ರಾಂತಕ್ಕೆ ಹೋಗು. ಅಲ್ಲಿ ನಾನು ತೋರಿಸುವ ಬೆಟ್ಟದ ಮೇಲೆ ಅವನನ್ನು ದಹನಬಲಿಯಾಗಿ ಅರ್ಪಿಸು” ಎಂದರು.
探尋 ಆದಿಕಾಂಡ 22:2
3
ಆದಿಕಾಂಡ 22:12
ದೂತನು ಅವನಿಗೆ, "ಹುಡುಗನ ಮೇಲೆ ಕೈಯೆತ್ತಬೇಡ; ಅವನಿಗೆ ಯಾವ ಹಾನಿಯನ್ನೂ ಮಾಡಬೇಡ; ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಬಲಿಕೊಡಲು ಹಿಂತೆಗೆಯಲಿಲ್ಲ; ಎಂತಲೇ, ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂದು ಈಗ ನನಗೆ ಚೆನ್ನಾಗಿ ಗೊತ್ತಾಯಿತು,” ಎಂದು ಹೇಳಿದನು.
探尋 ಆದಿಕಾಂಡ 22:12
4
ಆದಿಕಾಂಡ 22:8
ಅದಕ್ಕೆ ಅಬ್ರಹಾಮನು, “ಬಲಿಗೆ ಬೇಕಾದ ಕುರಿಮರಿಯನ್ನು ದೇವರೇ ಒದಗಿಸುತ್ತಾರೆ, ಮಗನೇ,” ಎಂದು ಉತ್ತರಕೊಟ್ಟ. ಅವರಿಬ್ಬರೂ ಹಾಗೇ ಮುಂದಕ್ಕೆ ಸಾಗಿದರು.
探尋 ಆದಿಕಾಂಡ 22:8
5
ಆದಿಕಾಂಡ 22:17-18
ನಿನ್ನ ಸಂತತಿಯನ್ನು ಹೆಚ್ಚಿಸಿಯೇ ಹೆಚ್ಚಿಸುತ್ತೇನೆ; ಅದನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರ ತೀರದ ಮರಳಿನಂತೆಯೂ ಅಸಂಖ್ಯವಾಗಿ ಮಾಡುತ್ತೇನೆ. ಅವರು ಶತ್ರುಗಳ ಪಟ್ಟಣಗಳನ್ನು ಸ್ವಾಧೀನಪಡಿಸಿಕೊಳ್ಳುವರು. ನೀನು ನನ್ನ ಮಾತನ್ನು ಕೇಳಿದ್ದರಿಂದ ವಿಶ್ವದ ಎಲ್ಲ ರಾಷ್ಟ್ರಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಸರ್ವೇಶ್ವರನೇ ಆಣೆಯಿಟ್ಟು ಹೇಳಿದ್ದಾರೆ,” ಎಂದನು.
探尋 ಆದಿಕಾಂಡ 22:17-18
6
ಆದಿಕಾಂಡ 22:1
ಈ ಘಟನೆಗಳಾದ ಬಳಿಕ ದೇವರು ಅಬ್ರಹಾಮನನ್ನು ಪರೀಕ್ಷಿಸುವುದಕ್ಕೋಸ್ಕರ, “ಅಬ್ರಹಾಮನೇ,” ಎಂದು ಕರೆದರು. ಅವನು “ಇಗೋ, ಸಿದ್ಧನಿದ್ದೇನೆ” ಎಂದನು.
探尋 ಆದಿಕಾಂಡ 22:1
7
ಆದಿಕಾಂಡ 22:11
ಆದರೆ ಸರ್ವೇಶ್ವರನ ದೂತನು ಆಕಾಶದಿಂದ, "ಅಬ್ರಹಾಮನೇ, ಹೇ ಅಬ್ರಹಾಮನೇ" ಎಂದು ಕರೆದನು. ಅದಕ್ಕೆ ಅಬ್ರಹಾಮನು, “ಇಗೋ ಸಿದ್ಧನಿದ್ದೇನೆ” ಎಂದ.
探尋 ಆದಿಕಾಂಡ 22:11
8
ಆದಿಕಾಂಡ 22:15-16
“ಬೆಟ್ಟದ ಮೇಲೆ ಸರ್ವೇಶ್ವರ ಸ್ವಾಮಿಯೇ ಒದಗಿಸುತ್ತಾರೆ” ಎಂಬ ಹೇಳಿಕೆ ಇಂದಿಗೂ ರೂಢಿಯಲ್ಲಿದೆ. ಸರ್ವೇಶ್ವರ ಸ್ವಾಮಿಯ ದೂತನು ಆಕಾಶದಿಂದ ಮತ್ತೊಮ್ಮೆ ಅಬ್ರಹಾಮನನ್ನು ಕರೆದು, “ಸರ್ವೇಶ್ವರನ ವಾಕ್ಯವನ್ನು ಕೇಳು; ನೀನು ನಿನ್ನ ಒಬ್ಬನೇ ಮಗನನ್ನು ಬಲಿಕೊಡಲು ಹಿಂತೆಗೆಯದೆ ಹೋದುದರಿಂದ ನಾನು ನಿನ್ನನ್ನು ತಪ್ಪದೆ ಆಶೀರ್ವದಿಸುತ್ತೇನೆ
探尋 ಆದಿಕಾಂಡ 22:15-16
9
ಆದಿಕಾಂಡ 22:9
ದೇವರು ಹೇಳಿದ ಸ್ಥಳಕ್ಕೆ ಬಂದು ಸೇರಿದಾಗ ಅಬ್ರಹಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿದ. ಕಟ್ಟಿಗೆಯನ್ನು ಅದರ ಮೇಲೆ ಒಟ್ಟಿ, ಮಗ ಇಸಾಕನ ಕೈಕಾಲುಗಳನ್ನು ಬಿಗಿದು, ಕಟ್ಟಿಗೆಗಳ ಮೇಲೆ ಅವನನ್ನು ಕೆಡವಿದ.
探尋 ಆದಿಕಾಂಡ 22:9
首頁
聖經
計畫
視訊